ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಟ್ಯಾಕ್ಸಿ ಸೇವೆ ದಿಢೀರ್ ಸ್ಥಗಿತ

ಬೆಂಗಳೂರು, ಮಾರ್ಚ್ 31: ಕೆಂಪೇಗೌಡ ಏರ್‌ಪೋರ್ಟ್‌ ಬಳಿ ಟ್ಯಾಕ್ಸಿ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲಾಗಿದೆ.

ಟ್ಯಾಕ್ಸಿಗಳು ಬೆಳಗ್ಗೆಯಿಂದಲೇ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಇಲ್ಲದ ಕಾರಣ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಬಸ್‌ಗಳ ನಿಯೋಜನೆ ಮಾಡಲಾಗಿದೆ.

ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಟ್ಯಾಕ್ಸಿಗಳನ್ನು ಓಡಿಸದೇ ಇರಲು ಚಾಲಕರ ಸಂಘ ನಿರ್ಧಾರ ಮಾಡಿದೆ. ಒಂದು ಕಿ.ಮೀಗೆ 24 ರೂ. ನಿಗದಿಪಡಿಸಿ ಚಾಲಕರ ಜೀವ ಉಳಿಸಿ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ ಪ್ರತಿಭಟನೆ ಕೈಗೊಳ್ಳುವ ಸಾಧ್ಯತೆ ಇದೆ.

Taxi Services Suspended At Kempegowda International Airport

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬಾಡಿಗೆ ದೊರೆಯದೆ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯ ಚನ್ನಪಟ್ಟಣ ಮೂಲದ ಪ್ರತಾಪ್‌ಕುಮಾರ್‌ (32) ಆತ್ಮಹತ್ಯೆ ಮಾಡಿಕೊಂಡ ಟ್ಯಾಕ್ಸಿ ಚಾಲಕ.

ಲಾಕ್‌ಡೌನ್‌ ನಂತರ ಬಾಡಿಗೆ ದರ ಕಡಿಮೆಯಿದ್ದು, ಟ್ಯಾಕ್ಸಿ ಹಾಗೂ ಕ್ಯಾಬ್‌ಗಳಿಗೆ ಪ್ರಸ್ತುತ ಒಂದು ಕಿ.ಮೀ.ಗೆ 24 ರೂ. ದರ ನಿಗದಿ ಮಾಡಬೇಕು ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿತ್ತು.

ಕೊರೊನಾದಿಂದಾಗಿ ಕಳೆದ ಒಂದು ವರ್ಷದಿಂದ ಸರಿಯಾಗಿ ಬಾಡಿಗೆ ಸಿಗುತ್ತಿರಲಿಲ್ಲ, ಹೀಗಾಗಿ ಖಿನ್ನತೆಗೆ ಒಳಗಾಗಿದ್ದ, ಮನೆಯ ನಿರ್ವಹಣೆ ಹೇಗೆ ಎಂಬ ಚಿಂತೆ ಕಾಡುತ್ತಿತ್ತು, ಏರ್‌ಪೋರ್ಟ್ ಸಮೀಪ ಟ್ಯಾಕ್ಸಿಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ, ಬಳಿಕ ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಫೆ.1ರಂದು ಕ್ಯಾಬ್‌, ಟ್ಯಾಕ್ಸಿ, ಓಲಾ, ಊಬರ್‌ಗಳಿಗೂ ಅನ್ವಯವಾಗುವಂತೆ 1 ಕಿ.ಮೀ.ಗೆ 24 ರೂ.ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು . ಸರ್ಕಾರ ನಿಗದಿ ಮಾಡಿದ ದರವನ್ನು ಕೆಎಸ್‌ಟಿಡಿಸಿ, ಮೆರು ಮತ್ತು ಮೇಘ ಕಂಪನಿಯ ಕ್ಯಾಬ್‌ ಚಾಲಕರು ಅಳವಡಿಸಿಕೊಂಡಿದ್ದರು. ಜತೆಗೆ ಮೀಟರ್‌ ಹಾಕುವ ಮೂಲಕ ಪ್ರಯಾಣಿಕರಿಗೆ ಸೇವೆ ಒದಗಿಸಲಾಗುತ್ತಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+