'ವಿದ್ಯಾರ್ಥಿನಿ ಮೇಲೆ ಜನಾಂಗೀಯ ದ್ವೇಷದಿಂದ ಹಲ್ಲೆ ನಡೆದಿಲ್ಲ'
ಬೆಂಗಳೂರು, ಫೆಬ್ರವರಿ 6 : 'ತಾಂಜಾನಿಯ ಮೂಲದ ವಿದ್ಯಾರ್ಥಿನಿ ಮೇಲೆ ಜನಾಂಗೀಯ ದ್ವೇಷದಿಂದ ಹಲ್ಲೆ ನಡೆದಿಲ್ಲ' ಎಂದು ತಾಂಜಾನಿಯ ಹೈಕಮಿಷನರ್ ಜಾನ್ ಡಬ್ಲ್ಯು ಎಚ್ ಕಿಜಾಜಿ ಸ್ಪಷ್ಟಪಡಿಸಿದ್ದಾರೆ. ಅಪಘಾತ ನಡೆದ ನಂತರ ಅಕ್ರೋಶಗೊಂಡ ಜನರು ಈ ಹಲ್ಲೆ ನಡೆಸಿದ್ದಾರೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.
ಶುಕ್ರವಾರ ಸಂಜೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ 5 ಅಧಿಕಾರಿಗಳು ಮತ್ತು ತಾಂಜಾನಿಯಾ ಹೈಕಮಿಷನರ್ ಜಾನ್ ಡಬ್ಲ್ಯು ಎಚ್ ಕಿಜಾಜಿ ಅವರು, ಗೃಹಸಚಿವ ಡಾ. ಜಿ. ಪರಮೇಶ್ವರ ಹಾಗೂ ಪೊಲೀಸರಿಂದ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡರು. ['ಬೆಂಗಳೂರು ನನಗೆ ಮನೆಯಾಗಿತ್ತು, ಈಗ ತತ್ತರಿಸಿದ್ದೇನೆ!']
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಜಾನ್ ಡಬ್ಲ್ಯು ಎಚ್ ಕಿಜಾಜಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರ ಜೊತೆ ತಾಂಜಾನಿಯ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. [ರಾಷ್ಟ್ರೀಯ ಮಾಧ್ಯಮಗಳ ವಿರುದ್ಧ ತಿರುಗಿ ಬಿದ್ದ ಬೆಂಗಳೂರಿಗರು]
ಗೃಹ ಸಚಿವ ಪರಮೇಶ್ವರ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಜಾನ್ ಡಬ್ಲ್ಯು ಎಚ್ ಕಿಜಾಜಿ ಅವರು ಜನಾಂಗೀಯ ದ್ವೇಷದಿಂದ ತಾಂಜಾನಿಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಕರ್ನಾಟಕ ಸರ್ಕಾರ ನಡೆಸುತ್ತಿರುವ ತನಿಖೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಚಿತ್ರಗಳಲ್ಲಿ ನೋಡಿ ವಿವರಗಳು....

ಬೆಂಗಳೂರಿಗೆ ಭೇಟಿ ನೀಡಿದ ಕಿಜಾಜಿ
ಶುಕ್ರವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ 5 ಅಧಿಕಾರಿಗಳು ಮತ್ತು ತಾಂಜಾನಿಯಾ ಹೈಕಮಿಷನರ್ ಜಾನ್ ಡಬ್ಲ್ಯು ಎಚ್ ಕಿಜಾಜಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದರು. ಗೃಹಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಪೊಲೀಸರಿಂದ ತಾಂಜಾನಿಯ ವಿದ್ಯಾರ್ಥಿನಿ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ವಿವರ ಪಡೆದರು.

ವಿದ್ಯಾರ್ಥಿಗಳ ಜೊತೆ ಸಂವಾದ
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಜಾನ್ ಡಬ್ಲ್ಯು ಎಚ್ ಕಿಜಾಜಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರ ಜೊತೆ ತಾಂಜಾನಿಯ
ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ಜನಾಂಗೀಯ ದ್ವೇಷದ ಹಲ್ಲೆಯಲ್ಲ
ತಾಂಜಾನಿಯ ಮೂಲದ ವಿದ್ಯಾರ್ಥಿನಿ ಮೇಲೆ ಜನಾಂಗೀಯ ದ್ವೇಷದಿಂದ ಹಲ್ಲೆ ನಡೆದಿಲ್ಲ ಎಂದು ತಾಂಜಾನಿಯ ಹೈಕಮಿಷನರ್ ಜಾನ್ ಡಬ್ಲ್ಯು ಎಚ್ ಕಿಜಾಜಿ ಸ್ಪಷ್ಟಪಡಿಸಿದರು. ಕರ್ನಾಟಕ ಸರ್ಕಾರ ನಡೆಸುತ್ತಿರುವ ತನಿಖೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಪೊಲೀಸರು ಇದನ್ನೇ ಹೇಳಿದ್ದರು
ಜನವರಿ 31ರಂದು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದ ನಂತರ ಅಕ್ರೋಶಗೊಂಡ ಜನರು ಹಲ್ಲೆ ನಡೆಸಿದ್ದಾರೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದರು. ಇದು ಜನಾಂಗೀಯ ದ್ವೇಷದ ಹಿನ್ನಲೆಯಲ್ಲಿ ನಡೆದ ಹಲ್ಲೆಯಲ್ಲ ಎಂದು ಪೊಲೀಸರು ತಿಳಿಸಿದ್ದರು.

ಮೊದಲು ಚಾಲಕನ ಮೇಲೆ ಹಲ್ಲೆ
ಜನವರಿ 31ರಂದು ಅಪಘಾತ ನಡೆದ ಬಳಿಕ ಮೊದಲು ಜನರು ಕಾರಿನ ಚಾಲಕನ ಮೇಲೆ ಹಲ್ಲೆ ನಡೆಸಿದರು. ಪೊಲೀಸರ ರಾತ್ರಿ ಗಸ್ತಿನ ವಾಹನ ಅಲ್ಲಿತ್ತು. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದರು.

ಒಬ್ಬ ಪೇದೆ ಮಾತ್ರ ಸ್ಥಳದಲ್ಲಿದ್ದ
ಜನರ ಗುಂಪು ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ ಬಳಿಕ ಪೊಲೀಸರು ಒಬ್ಬ ಪೇದೆಯನ್ನು ಮಾತ್ರ ಸ್ಥಳದಲ್ಲಿ ಬಿಟ್ಟು ಚಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ನಂತರ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಯಿತು. ಒಬ್ಬ ಪದೇ ಜನರ ಗುಂಪನ್ನು ನಿಯಂತ್ರಿಸುವುದು ಸಾಧ್ಯವಿರಲಿಲ್ಲ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications