ಬೆಂಗಳೂರನ್ನು ವಿಶ್ವದಲ್ಲಿಯೇ ನಂ.1 ಸಿಲಿಕಾನ್ ಸಿಟಿ ಮಾಡುವ ಗುರಿ: ಸಿಎಂ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 25 : ಬೆಂಗಳೂರು ಟೆಕ್ ಸಮ್ಮಿಟ್ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬೆಂಗಳೂರು ಟೆಕ್ ಸಮ್ಮಿಟ್‌ನನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Recommended Video
ಅವರು ಇಂದು ಬೆಂಗಳೂರು ಟೆಕ್ ಸಮ್ಮಿಟ್ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಂತರ ಮಾಧ್ಯಮದವರೊಂದಿಗೆ ಈ ಮಾಹಿತಿಯನ್ನು ಹಂಚಿಕೊಂಡರು.
ನವೆಂಬರ್ 16ರಿಂದ 18ರವರಿಗೆ ಮೂರು ದಿನಗಳ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜಿಸಿರುವ ಪ್ರಯುಕ್ತ ವಿವಿಧ ವಲಯದ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಹಲವಾರು ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಕೈಗಾರಿಕೆಗಳಿಗೆ ಪೂರಕವಾದ ನೀತಿಗಳು, ಎಕೋಸಿಸ್ಟಂ ಮೂಲಸೌಕರ್ಯ, ತಾಂತ್ರಿಕತೆಗಳ ಬಗ್ಗೆ ಬಹಳಷ್ಟು ಸಲಹೆಗಳನ್ನು ಕೈಗಾರಿಕೋದ್ಯಮಿಗಳು ನೀಡಿದ್ದು, ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ
ಬೆಂಗಳೂರು ಸಮಿಟ್ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವಲ್ಲಿ ಇಂದಿನ ಸಭೆ ಫಲಪ್ರದವಾಗಿದೆ. ಮುಂಬರುವ ದಿನಗಳಲ್ಲಿ ವಿವಿಧ ಕೈಗಾರಿಕಾ ವಲಯಗಳಿಗೂ ಸರ್ಕಾರ ಇಂಬು ನೀಡಲಿದೆ. ಬೆಂಗಳೂರನ್ನು ವಿಶ್ವದಲ್ಲಿಯೇ ನಂ.1 ಸಿಲಿಕಾನ್ ಸಿಟಿ ಮಾಡುವ ಚಿಂತನೆ ಸರ್ಕಾರಕ್ಕಿದೆ. ಬೆಂಗಳೂರಿನ ಹೊರವಲಯಗಳಲ್ಲಿಯೂ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದರು.
ಬೆಂಗಳೂರು ತಂತ್ರಜ್ಞಾನ ಶೃಂಗ ' ಸಮಾವೇಶ
ದೇಶದ ಹಾಗೂ ಏಷ್ಯಾದ ಮಹತ್ವದ ತಂತ್ರಜ್ಞಾನ ಕಾರ್ಯಕ್ರಮವಾದ ಬೆಂಗಳೂರು ತಂತ್ರಜ್ಞಾನ ಶೃಂಗ'ದ 25ನೇ ಆವೃತ್ತಿಯನ್ನು ನವೆಂಬರ್ 16, 17 ಮತ್ತು 18ರಂದು ವಿಶೇಷವಾದ ರೀತಿಯಲ್ಲಿ ನಡೆಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭೌತಿಕ ರೂಪದಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ (ಬಿಟಿಎಸ್) ಈಗಾಗಲೇ ತಯಾರಿ ಆರಂಭವಾಗಿದೆ. ಇದಕ್ಕೆ ಪೂರಕವಾಗಿ ಅಮೆರಿಕ, ಇಂಗ್ಲೆಂಡ್, ಜಪಾನ್ ಮುಂತಾದೆಡೆಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ತಿಳಿಸಿದರರು. ಬೆಳವಣಿಗೆ ತಂತ್ರಜ್ಞಾನ ಕ್ಷೇತ್ರವು ಅಗಾಧ ನೆರವು ನೀಡುತ್ತಿದೆ. ಪ್ರಧಾನಿ ಮೋದಿ ಅವರು ಘೋಷಿಸಿರುವ 5 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಗೆ ಕರ್ನಾಟಕವು 1.5 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಇಟ್ಟುಕೊಂಡಿದೆ ಎಂದು ಅವರು ನುಡಿದರು.

ಹೋದ ಹಣಕಾಸು ವರ್ಷದಲ್ಲಿ ದೇಶಕ್ಕೆ ಹರಿದು ಬಂದಿರುವ ಒಟ್ಟು ವಿದೇಶೀ ಹೂಡಿಕೆಯಲ್ಲಿ ಶೇ 40ರಷ್ಟು ಪಾಲು ರಾಜ್ಯದಲ್ಲೇ ಹೂಡಿಕೆಯಾಗಿದ್ದು, ಇದರ ಮೊತ್ತವು 17.3 ಶತಕೋಟಿ ಡಾಲರುಗಳಷ್ಟಾಗಿದೆ. ಜತೆಗೆ, ರಾಜ್ಯವು ರಫ್ತು ವಹಿವಾಟಿನಲ್ಲೂ ದೇಶದಲ್ಲಿ ಅಗ್ರಸ್ಥಾನದಲ್ಲಿದ್ದು, 2021-22ರ ಮೊದಲ ಮೂರು ತ್ರೈಮಾಸಿಕ ಅವಧಿಗಳಲ್ಲಿ 91.4 ಶತಕೋಟಿ ಡಾಲರ್ ಮೊತ್ತದ ಸರಕು ಮತ್ತು ಸೇವೆಗಳನ್ನು ವಿದೇಶಗಳಿಗೆ ಪೂರೈಸಿದೆ ಎಂದು ಅವರು ಹೇಳಿದರು.
ಇತ್ತೀಚೆಗೆ ಕರ್ನಾಟಕ ಡೇಟಾ ಸೆಂಟರ್ ನೀತಿ-2022'ನ್ನು ಕೂಡ ಜಾರಿಗೆ ತರಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ 10 ಸಾವಿರ ಕೋಟಿ ರೂ. ಬಂಡವಾಳವನ್ನು ಸೆಳೆಯಲಾಗುವುದು ಎಂದು ಸಚಿವರು ವಿವರಿಸಿದರು.
ಬಿಯಾಂಡ್ ಬೆಂಗಳೂರು' ಉಪಕ್ರಮದಡಿ ಮೈಸೂರಿನಲ್ಲಿ ಸೈಬರ್ ಸೆಕ್ಯುರಿಟಿಗೆ, ಹುಬ್ಬಳ್ಳಿಯಲ್ಲಿ ಇಎಸ್ ಡಿಎಂ ಮತ್ತು ಕೃತಕ ಬುದ್ಧಿಮತ್ತೆ ಆಧರಿತ ಉದ್ದಿಮೆಗಳಿಗೆ, ಮಂಗಳೂರಿನಲ್ಲಿ ಫಿನ್-ಟೆಕ್ ವಲಯಕ್ಕೆ ಮತ್ತು ಬೆಳಗಾವಿಯಲ್ಲಿ ಏರೋಸ್ಪೇಸ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಇವೆಲ್ಲವೂ ಸುಗಮವಾಗಿ ನಡೆಯಬೇಕೆಂಬ ಉದ್ದೇಶದಿಂದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್' ಸ್ಥಾಪಿಸಲಾಗಿದೆ ಎಂದು ಸಚಿವರು ಹೇಳಿದರು.
ರಾಜ್ಯ ಐಟಿ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ವಿದ್ಯುನ್ಮಾನ ಹಾಗೂ ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಇಲಾಖೆಯ ನಿರ್ದೇಶಕಿ ಸಿ.ಎನ್.ಮೀನಾ ನಾಗರಾಜ್, ಜೈವಿಕ ತಂತ್ರಜ್ಞಾನ ಉದ್ಯಮಗಳ ಒಕ್ಕೂಟ(ಏಬಲ್)ದ ಅಧ್ಯಕ್ಷ ಜಿ.ಎಸ್. ಕೃಷ್ಣನ್, ಭಾರತೀಯ ಸಾಫ್ಟ್ವೇರ್ ಪಾರ್ಕ್ ಗಳ ಅಧ್ಯಕ್ಷ ಶೈಲೇಂದ್ರಕುಮಾರ್ ತ್ಯಾಗಿ, ಜಗದೀಶ್ ಪಟಣ್ಕರ್ ಉಪಸ್ಥಿತರಿದ್ದರು. ಬಿ.ಟಿ. ವಿಷನ್ ಗ್ರೂಪ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರು ವರ್ಚುವಲ್ ನಲ್ಲಿ ಭಾಗವಹಿಸಿದ್ದರು.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications