ಸಿದ್ದು ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ: ಬೆಂಗಳೂರಿನಲ್ಲಿಟೆಕ್ಕಿ ಬಂಧನ

ಬೆಂಗಳೂರು, ಜುಲೈ 1: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆಯನ್ನು ಹೊಂದಿದ್ದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಧುಸೂದನ್ (30) ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಸೈಬರ್ ಅಪರಾಧ ಪ್ರಕರಣ ದಾಖಲಿಸಲಾಗಿದೆ.

Techie arrested for creating fake twitter handle of Karnataka CM Siddaramaiah

ಸಿದ್ದರಾಮಯ್ಯ ಅವರ ಹೆಸರಿನ ನಕಲಿ ಟ್ವಿಟ್ಟರ್ ಖಾತೆಯೊಂದರಿಂದ ಟ್ವೀಟ್ ಗಳು ಹರಿದಾಡುತ್ತಿರುವ ಬಗ್ಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರೊಬ್ಬರು ಬೆಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ದೂರಿನನ್ವಯ ತನಿಖೆ ನಡೆಸುತ್ತಿದ್ದ ಪೊಲೀಸರು ಮಂದ್ಯದ ಟೆಕ್ಕಿ ಮಧುಸೂದನ್ ಎಂಬುವವರನ್ನು ಬಂಧಿಸಿದ್ದು, ಈತ ಮುಖ್ಯಮಂತ್ರಿಗಳ ಹೆಸರಿನಲ್ಲಿ ಟ್ವಿಟ್ಟರ್ ಖಾತೆ ಆರಂಭಿಸಿ, ಅವರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+