ಬೆಂಗಳೂರಲ್ಲಿ ಕಟ್ಟಡದಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ
ಬೆಂಗಳೂರು, ಫೆಬ್ರವರಿ 15: ಕಟ್ಟಡದಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹದೇವಪುರದಲ್ಲಿ ನಡೆದಿದೆ.
ಖಾಸಗಿ ಬದುಕಿನ ಸಮಸ್ಯೆಗಳಿಂದ ಖಿನ್ನತೆಗೆ ಒಳಗಾಗಿದ್ದ ಟೆಕ್ಕಿ ಅಮಲಾನ್ ಬರ್ಮನ್(31) ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಪುರದಲ್ಲಿ ನೆಲೆಸಿದ್ದ ಅವರು ಬಾಗ್ಮನೆ ಟೆಕ್‌ಪಾರ್ಕ್‌ನಲ್ಲಿ ಖಾಸಗಿ ಕಂಪನಿ ಉದ್ಯೋಗಿ ಆಗಿ ಕೆಲಸ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನ ಕಲಸ ಮಾಡುವ ಕಂಪನಿಯ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿಯ ಜೊತೆ ನೆಲೆಸಿದ್ದ ಬರ್ಮನ್ ಆತ್ಮಹತ್ಯೆಗೆ ಖಚಿತ ಕಾರಣ ಏನೆಂಬುದು ತಿಳಿದುಬಂದಿಲ್ಲ, ಸಹೋದ್ಯೋಗಿಗಳು ಮತ್ತು ಸ್ನೇಹಿತರನ್ನು ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ.ಆರು ತಿಂಗಳಿನಿಂದ ಖಿನ್ನತೆಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಂದು ಮೃತರ ತಾಯಿ ತಿಳಿಸಿದ್ದಾರೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications