ಫೋಟೊ ಶೂಟ್ ವೇಳೆ ಟೆಕ್ಕಿಯಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು, ಮೇ 24: ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಹವ್ಯಾಸಿ ಫೋಟೊಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಫೋಟೊ ಶೂಟ್ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ.
ಪುಲಕೇಶಿನಗರದ ಪೊಲೀಸರು ಆದಿತ್ಯ ಶಂಕ್ಲಾ ಜೈನ್ ಎನ್ನುವವನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಎರಡು ದೂರುಗಳು ದಾಖಲಾಗಿದ್ದವು. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಆದಿತ್ಯ ಬಿಡುವಿನ ಸಂದರ್ಭದಲ್ಲಿ ಫೋಟೊಗ್ರಾಫರ್ ಆಗಿಯೂ ಕೆಲಸ ಮಾಡುತ್ತಿದ್ದರು.

ವಿದ್ಯಾರ್ಥಿಯೊಬ್ಬಳನ್ನು ಮಾಡೆಲ್ ಮಾಡುತ್ತೇನೆ ಎಂದು ಕರೆತಂದು ಆಕೆಯ ಜೊತೆ ಅನುಚಿತವಾಗಿ ವರ್ತಿಸಿದ್ದ, 2018ರಿಂದ ಇನ್‌ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ. ಆತ ಪ್ರೊಫೆಷನಲ್ ಫೋಟೊಗ್ರಾಫರ್ ಎಂದು ಬಿಂಬಿಸಿಕೊಂಡಿದ್ದ, ಆಕೆಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ತಕ್ಷಣವೇ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ.












Click it and Unblock the Notifications