ಬೇಗೂರಿನಲ್ಲಿ ಮಹಡಿಯಿಂದ ಹಾರಿ ಟೆಕ್ಕಿ ಪತ್ನಿ ಆತ್ಮಹತ್ಯೆ
ಬೆಂಗಳೂರು, ಮೇ 4: ಎಂಟನೇ ಮಹಡಿಯಿಂದ ಹಾರಿ ಟೆಕ್ಕಿ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೇಗೂರಿನಲ್ಲಿ ನಡೆದಿದೆ.
ಎಸ್‌ಎನ್‌ಎನ್ ರಾಜ್ ಸಿಕ್ರೀನಿಟಿ ಅಪಾರ್ಟ್‌ಮೆಂಟ್ ನಿವಾಸಿ ಸೀಮಾ ಸಿಂಗ್ ಆತ್ಮಹತ್ಯೆ ಮಾಡಿಕೊಂಡವರು. ಮಧ್ಯಪ್ರದೇಶ ಮೂಲದ ಸೀಮಾ ಸಿಂಗ್ ಪುಷ್ಪೇಂದ್ರ ಎಂಬುವವರನ್ನು ವಿವಾಹವಾಗಿದ್ದರು.
ದಂಪತಿ ಐದು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಅವರಿಗೆ ಮಕ್ಕಳಿರಲಿಲ್ಲ. ಪುಷ್ಪೇಂದ್ರ ಹಾಗೂ ಸೀಮಾ ನಡುವೆ ಆಗಾಗ ಜಗಳವಾಗುತ್ತಿತ್ತು. ತಡರಾತ್ರಿ 12.30ರ ಸುಮಾರಿಗೆ ದಂಪತಿ ನಡುವೆ ಜಗಳವಾಗಿದೆ.

ಜಗಳ ವಿಕೋಪಕ್ಕೆ ಹೋಗಿ ಸೀಮಾ ಮನೆಯ ಬಾಲ್ಕನಿಗೆ ತೆರಳಿ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.











Click it and Unblock the Notifications