ಬೆಂಗಳೂರು; ಟೆಕ್ಕಿ ಪತ್ನಿ ಆತ್ಮಹತ್ಯೆಗೆ ಶರಣು

ಬೆಂಗಳೂರು, ಡಿಸೆಂಬರ್ 6 : ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರು ತಿಂಗಳ ಹಿಂದೆ ಅಮೆರಿಕದಿಂದ ಪತಿ ಜೊತೆಗೆ ಗೃಹಿಣಿ ಬೆಂಗಳೂರಿಗೆ ಆಗಮಿಸಿದ್ದರು.

ಮೃತಪಟ್ಟವರನ್ನು ಆಶಾ (30) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಎಂಬುವವರನ್ನು ವಿವಾಹವಾಗಿದ್ದ ಆಶಾ ರಾಜಾಜಿನಗರ ಬಳಿಯ ಪ್ರಶಾಂತ್‌ ನಗರದಲ್ಲಿ ವಾಸವಾಗಿದ್ದರು. ಸತ್ಯನಾರಾಯಣ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಗುರುವಾರ ಸಂಜೆ ಮನೆಯಲ್ಲಿ ಆಶಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ರಾಜಾಜಿನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.

Techie Wife Ends Life Prashanth Nagar Bengaluru

ಆಶಾ ಮತ್ತು ಸತ್ಯನಾರಾಯಣ 15 ವರ್ಷಗಳ ಹಿಂದೆ ವಿವಾಹವಾಗಿದ್ದರು. ಅಮೆರಿಕದಲ್ಲಿ ವಾಸವಾಗಿದ್ದ ದಂಪತಿಗಳು ಆರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸ್ ಆಗಿದ್ದರು. ಸತ್ಯನಾರಾಯಣ ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಆಶಾ ಕುಟುಂಬಸ್ಥರು ಸತ್ಯನಾರಾಯಣ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+