ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ
ಬೆಂಗಳೂರು, ಏಪ್ರಿಲ್ 23; ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲುಗಳ ಸಂಚಾರದಲ್ಲಿ ಭಾನುವಾರ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಈ ತೊಂದರೆ ಉಂಟಾಗಿದೆ. 7 ಗಂಟೆಗೆ ಆರಂಭವಾಗಬೇಕಿದ್ದ ರೈಲುಗಳ ಸಂಚಾರ ತಡವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಹಸಿರು ನಮ್ಮ ಮೆಟ್ರೋ ರೈಲು ಸಂಚಾರ ನಡೆಸುತ್ತದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗಬೇಕಿತ್ತು. ಆದರೆ ತಾಂತ್ರಿಕ ತೊಂದರೆ ಕಾರಣ ಮೆಟ್ರೋ ಸಂಚಾರ ನಡೆಸುತ್ತಿಲ್ಲ ಎಂದು ಟಿವಿ 9ಕನ್ನಡ ವರದಿ ಮಾಡಿದೆ.

ವಾರದ ದಿನಗಳಲ್ಲಿ ಮೆಟ್ರೋ ರೈಲುಗಳ ಸಂಚಾರ ಬೆಳಗ್ಗೆ ಬೆಳಗ್ಗೆ 5.30ಕ್ಕೆ ಆರಂಭವಾಗುತ್ತದೆ. ಆದರೆ ಭಾನುವಾರ 7 ಗಂಟೆಗೆ ಮೆಟ್ರೋ ರೈಲು ಪ್ರಾರಂಭ. ಆದರೆ ಇಂದು ರೈಲುಗಳ ಸಂಚಾರದಲ್ಲಿ ತೊಂದರೆ ಉಂಟಾಗಿದೆ. ಆದರೆ ನೇರಳೆ ಮಾರ್ಗದಲ್ಲಿ ರೈಲುಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.
ಬಳಕೆದಾರರ ಸಂಖ್ಯೆ ಏರಿಕೆ; ಬಿಎಂಟಿಸಿ ಬಸ್‌ಗಳ ಬಳಿಕ ನಮ್ಮ ಮೆಟ್ರೋ ಬೆಂಗಳೂರು ನಗರದ ಜನರ ಜೀವನಾಡಿಯಾಗಿದೆ. ದಿನೇ ದಿನೇ ಮೆಟ್ರೋ ರೈಲು ಬಳಕೆ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಅದರಲ್ಲಿಯೂ ಬಿಎಂಆರ್‌ಸಿಎಲ್ ಕ್ಯೂ ಆರ್ ಕೋಡ್ ವ್ಯವಸ್ಥೆ ಜಾರಿಗೊಳಿಸಿದ ಬಳಿಕ ಮೆಟ್ರೋ ಬಳಕೆದಾರರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. 2022ರ ನವೆಂಬರ್‌ನಲ್ಲಿ ಕ್ಯೂರ್ ಕೋಡ್ ಬಳಕೆ ಮಾಡಿಕೊಂಡು ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಇದರಿಂದಾಗಿ ಐದು ತಿಂಗಳಿನಲ್ಲಿ ಪ್ರಯಾಣಿಕರ ಸಂಖ್ಯೆ ಮೂರು ಪಟ್ಟು ಏರಿಕೆಯಾಗಿದೆ.
ಸದ್ಯ ನಮ್ಮ ಮೆಟ್ರೋದಲ್ಲಿ ಟೋಕನ್, ಸ್ಮಾರ್ಟ್ ಕಾರ್ಡ್, ಕ್ಯೂ ಅರ್ ಕೋಡ್ ಮತ್ತು ಕಾಮನ್ ಮೊಬಿಲಿಟಿ ಕಾರ್ಡ್ ಬಳಕೆ ಮಾಡಿಕೊಂಡು ಸಂಚಾರ ನಡೆಸಬಹುದಾಗಿದೆ. ಟೋಕನ್ ಪಡೆಯಲು ಕ್ಯೂನಲ್ಲಿ ನಿಲ್ಲಬೇಕಾದ ಕಾರಣ ಕ್ಯೂ ಆರ್ ಕೋಡ್ ಬಳಕೆ ಮಾಡಿಕೊಂಡು ಟಿಕೆಟ್ ಪಡೆಯುವವರ ಸಂಖ್ಯೆ ಏರಿಕೆಯಾಗುತ್ತಿದೆ. ಮೆಟ್ರೋದಲ್ಲಿ ಸಂಚಾರ ನಡೆಸುವ ಶೇ 60ರಷ್ಟು ಜನರು ಸ್ಮಾರ್ಟ್ ಕಾರ್ಡ್ ಬಳಕೆ ಮಾಡುತ್ತಾರೆ. ಉಳಿದವರ ಬೇರೆ ಬೇರೆ ಮಾದರಿಯ ಟಿಕೆಟ್ ವ್ಯವಸ್ಥೆ ಬಳಸುತ್ತಾರೆ.












Click it and Unblock the Notifications