ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

|
Google Oneindia Kannada News

ಬೆಂಗಳೂರು, ಮೇ 04: ಅಕ್ರಮವಾಗಿ ಬೆಡ್ ಬುಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದಾರೆ.

ಮೇ.04 ರಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ಅಕ್ರಮವಾಗಿ ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಬೆಡ್ ಹಂಚಿಕೆ, ವಿಧಾನ, ಸಮಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಬಿಬಿಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿಗಳ ಅವ್ಯವಹಾರವನ್ನು ಬಯಲಿಗೆಳೆದಿದೆ.

Tejasvi Surya Alleges Bed Allocation Scam In BBMP War Room

ತನಿಖೆ ನಡೆಸಿದಾಗ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮಿತ್ರ ಸಿಬ್ಬಂದಿ ಬಿಬಿಎಂಪಿ ಹೆಲ್ಪ್ ಲೈನ್ ಹಾಗೂ ಬೆಡ್ ಹಂಚಿಕೆಗೆ ನಿಯುಕ್ತರಾಗಿರುವ ಸಿಬ್ಬಂದಿಗಳು ಕೆಲವು ಖಾಸಗಿ ಆಸ್ಪತ್ರೆಗಳು ಸೇರಿ ಕೃತಕ ಬೆಡ್ ಅಭಾವ ಸೃಷ್ಟಿಸಿ ಸಾರ್ವಜನಿಕರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವುದು ಕಂಡುಬಂಡಿದೆ.

ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡುತ್ತಿರುವ ಮಾಫಿಯಾವನ್ನು ತೇಜಸ್ವಿ ಸೂರ್ಯ ಸಾಕ್ಷ್ಯ ಸಮೇತವಾಗಿ ಬಹಿರಂಗಗೊಳಿಸಿದ್ದಾರೆ.

ಕೋವಿಡ್-19 ನ ಯಾವುದೇ ಗುಣ ಲಕ್ಷಣಗಳನ್ನು ಹೊಂದಿರದ ಸೋಂಕಿತರ ಹೆಸರಿನಲ್ಲಿ ಬಿಬಿಎಂಪಿ ಉಸ್ತುವಾರಿ ಹೊಂದಿರುವ ಸಿಬ್ಬಂದಿ ಬೆಡ್ ನೋಂದಣಿಗೊಳಿಸಿ, ಕೆಲವೇ ಕ್ಷಣಗಳ ನಂತರ ಅದೇ ಬೆಡ್ ನ್ನು ಹಣಕ್ಕೆ ಮತ್ತೊಬ್ಬರ ಹೆಸರಿನಲ್ಲಿ ನೋಂದಣಿಗೊಳಿಸುತ್ತಾರೆ.

Recommended Video

ಆಸ್ಪತ್ರೆಯಲ್ಲಿ ನಡೆಯುತ್ತಿರುವ ದಂಧೆಯ ವಿರುದ್ಧ ಸಿಡಿದೆದ್ದ ತೇಜಸ್ವಿ ಸೂರ್ಯ | Oneindia Kannada

ನಿಜವಾಗಿಯೂ ಅವಶ್ಯಕತೆ ಇರುವ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಬೆಡ್ ಸಲುವಾಗಿ ಅಲೆದಾಡುತ್ತಿದ್ದರೆ, ಕೆಲವೇ ಕೆಲವರು ಅಕ್ರಮವಾಗಿ ಬೆಡ್ ಗಳನ್ನು ದುಡ್ಡಿಗೆ ಹಂಚಿಕೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಬೆಡ್ ಗಳ ಕೃತಕ ಅಭಾವ ಸೃಷ್ಟಿಯನ್ನು ವಿವರಿಸಿದ್ದಾರೆ.

English summary
Bengaluru South MP Tejasvi Surya said the city was not running out of hospital beds to treat COVID-19 patients but was suffering due to the artificial scarcity of beds created by corrupt officials of the BBMP Covid War Room and their agents. Surya claimed to have exposed a major bed allocation scam during a surprise audit of the centralised bed allocation system, along with three BJP MLAs from South Bengaluru on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X