ಗೆಲುವಿನ ಬಳಿಕ ಎಚ್.ಡಿ.ದೇವೇಗೌಡರ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ
ಬೆಂಗಳೂರು, ಜೂನ್, 05: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮತದಾನ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ನಡೆದಿದ್ದು, ಮೇ 4ಕ್ಕೆ ಅಂದರೆ ನಿನ್ನೆ ಫಲಿತಾಂಶ ಪ್ರಕಟವಾಗಿದೆ. ಇನ್ನು ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ವಿರುದ್ಧ 2,77,083 ಮತಗಳ ಅಂತರದಿಂದ ಗೆಲುವು ಸಾಧಿಸಿದ ತೇಜಸ್ವಿ ಸೂರ್ಯ ಅವರು ಇಂದು (ಜೂನ್ 05) ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿಯಾಗಿ ಗಮನ ಸೆಳೆದಿದ್ದಾರೆ.

1991ರಿಂದಲೂ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಆಗ ಮೊದಲ ಬಾರಿಗೆ ಗೆಲುವು ಸಾಧಿಸಿದ್ದ ಅನಂತ್‌ಕುಮಾರ್ ಸತತ 6 ಬಾರಿ ಲೋಕಸಭೆ ಪ್ರವೇಶ ಮಾಡಿದ್ದು. ಈ ಕ್ಷೇತ್ರದ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಚಿಕ್ಕಪೇಟೆ, ಬಸವನಗುಡಿ, ಜಯನಗರ, ಪದ್ಮನಾಭನಗರ, ಬೊಮ್ಮನಹಳ್ಳಿ, ಕ್ಷೇತ್ರಗಳಲ್ಲಿ ಬಿಜೆಪಿ, ವಿಜಯನಗರ, ಗೋವಿಂದರಾಜ ನಗರ ಮತ್ತು ಬಿಟಿಎಂ ಲೇ ಔಟ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಇದೇ ಕ್ಷೇತ್ರದ ರಾಮಲಿಂಗಾ ರೆಡ್ಡಿ ಸಾರಿಗೆ ಸಚಿವರಾಗಿದ್ದರೆ, ಆರ್. ಆಶೋಕ್ ಪ್ರತಿಪಕ್ಷದ ನಾಯಕರಾಗಿದ್ದಾರೆ.
ಇನ್ನು ಅನಂತಕುಮಾರ್ ನಿಧನದ ಬಳಿಕ 2019ರಲ್ಲಿ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಬದಲಾಗಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಗಿತ್ತು. ಈ ವೇಳೆ ಅವರು ಕೇವಲ ಸಂಘ ಪರಿವಾರದ ಕಾರ್ಯಕರ್ತ ಮತ್ತು ವಕೀಲ ಮಾತ್ರ ಆಗಿದ್ದರು. ಆಗ ಅವರು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಅವರನ್ನು 3,31,192 ಮತಗಳ ಅಂತರದಿಂದ ಸೋಲಿಸಿ ಗೆಲುವು ದಾಖಲಿಸಿದ್ದು, ಅದು ಮೊದಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಅವರದ್ದಾಗಿತ್ತು.
ಇದೀಗ 2024ರಲ್ಲಿ ಎರಡನೇ ಬಾರಿಯೂ ಬಾರಿ ಮತಗಳ ಅಂತರದ ಗೆಲುವು ದಾಖಲಿಸಿದ್ದಾರೆ. ಇದು ಸೌಮ್ಯ ರೆಡ್ಡಿ ಅವರಿಗೆ ಎರಡನೇ ಸೋಲಾಗಿದೆ. ಕಳೆದ ವಿಧಾನಸಬಾ ಚುನಾವಣೆಯಲ್ಲಿ ಕೇವಲ 16 ಮತಗಳ ಅಂತರದಿಂದ ಸೋಲನುಭವಿಸಿದ್ದರು.












Click it and Unblock the Notifications