DK Shivakumar: ಡಿ.ಕೆ ಶಿವಕುಮಾರ್‌ಗೆ ತೇಜಸ್ವಿ ಸೂರ್ಯ ಮೆಚ್ಚುಗೆ: ಕುಟುಂಬ ಸಂತೋಷಕ್ಕಿಂತ ಕರ್ತವ್ಯಕ್ಕೆ ಆದ್ಯತೆ ಅಂದಿದ್ಯಾಕೆ

DK Shivakumar: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಸಂಸದ ತೇಜಸ್ವಿನ ಸೂರ್ಯ ಅವರು ಮೆಚ್ಚುಗೆಯ ಮಾತನಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿರುವ ಮಾತುಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇಷ್ಟಕ್ಕೂ ಡಿಕೆಶಿ ಬಗ್ಗೆ ತೇಜಸ್ವಿ ಸೂರ್ಯ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ. ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ ಎಂದರು. ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

DK Shivakumar

The first casualty of public life is personal life (ಸಾರ್ವಜನಿಕ ಜೀವನಕ್ಕೆ ಬಂದರೆ ಮೊದಲು ಹೋಗೋದು ವೈಯಕ್ತಿಕ ಜೀವನ) ಅಂತ ಮಾತಿದೆ. ಇಂತಹ ಸಂದರ್ಭಗಳಲ್ಲಿ ಆ ಮಾತಿನ ಅರ್ಥ ಇನ್ನಷ್ಟು ಸ್ಪಷ್ಟವಾಗುತ್ತದೆ. ತಾತನಾದ ಡಿ ಕೆ ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಸಂಸದ ತೇಜಸ್ವಿ ಸೂರ್ಯ ಅವರು ಶುಭ ಹಾರೈಸಿದ್ದಾರೆ.

DK Shivakumar: ನೆಟ್ಟಿಗರು ಹೇಳಿದ್ದೇನು

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗಾರಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಮೆಚ್ಚುಗೆಯ ಮಾತುಗಳನ್ನು ಆಡಿರುವುದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ರೋಹಿತ್ ಸಿಂಹ ಎನ್ನುವವರು ಮತ್ತೊಬ್ಬ ಹಿರಿಯ ರಾಜಕಾರಣಿಯೊಂದಿಗೆ ಒಳ್ಳೆಯ ನಡೆ, ಇತರ ರಾಜ್ಯಗಳಿಗಿಂತ ಭಿನ್ನವಾಗಿ ಕರ್ನಾಟಕ ಇದೇ ಕಾರಣಕ್ಕೆ ಹೆಸರುವಾಸಿಯಾಗಿದೆ. ನೀವು ಅಂತಹ ಮನೋಭಾವವನ್ನು ಅಳವಡಿಸಿಕೊಂಡು ಬೆಳೆಸಿಕೊಂಡರೆ, ನಿಮ್ಮ ಹೆಸರು ರಾಜನೀತಿಯ ಪಟ್ಟಿಯಲ್ಲಿ ಇತರರೊಂದಿಗೆ ಸೇರುತ್ತದೆ ಎಂದಿದ್ದಾರೆ.

ನಾಗಭೂಷಣ ಎನ್ನುವವರು ಇದು ಕರ್ನಾಟಕದ ರಾಜಕಾರಣ.. ನಮ್ಮ ರಾಜಕಾರಣ ಗುಜರಾತ್, ಉತ್ತರ ಪ್ರದೇಶ, ಬಿಹಾರ, ಆಂಧ್ರಪ್ರದೇಶದ ಹಾಗೇ ಹಾಳಾಗದಿರಲಿ.. ರಾಜಕಾರಣಿ ಬೇರೆ ಮಾನವೀಯತೆಯೇ ಬೇರೆ ಅನ್ನೋ ದೊಡ್ಡ ಮನಸ್ಸು ಕನ್ನಡಿಗರದ್ದು..ನಾವು ನಾವಾಗಿಯೇ ಇರೋಣ ಎಂದಿದ್ದಾರೆ.

ಸುರೇಶ್ ಎನ್ನುವವರು, ಕೆಲವು ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳನ್ನು ನೋಡಿದರೆ ಒಂದು ರಾಜಕೀಯ ಸಿದ್ಧಾಂತ ಹೊಂದಿರುವ ರಾಜಕಾರಣಿ ತನ್ನ ಪ್ರತಿಪಕ್ಷದ ರಾಜಕಾರಣಿಯ ಸಂತೋಷದಲ್ಲಿ ಭಾಗವಹಿಸುವುದು ಮಹಾಪರಾಧವೆಂಬಂತೆ ಬಿಂಬಿಸುತ್ತಿದೆ. ರಾಜಕೀಯವೇ ಬೇರೆ ವೈಯಕ್ತಿಕ ಸಂಬಂಧವೇ ಬೇರೆ , ಒಂದಕ್ಕೆ ಒಂದನ್ನು ತಾಳೆ ಹಾಕುವುದು ಸರಿಯಿಲ್ಲ
ಎಂದು ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+