ಸಂಸದ ತೇಜಸ್ವಿ ಸೂರ್ಯರಿಂದ ಗಲಾಟೆ ಸೃಷ್ಟಿ ಆರೋಪ: ಸೌಮ್ಯರೆಡ್ಡಿ ಹಾಗೂ ಬೆಂಬಲಿಗರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು, ಏಪ್ರಿಲ್, 16: ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಣ ಕಳೆದುಕೊಂಡ ಠೇವಣಿದಾರರ ಮೇಲೆ ಹಲ್ಲೆ ಮಾಡಿ ದರ್ಪ ತೋರಿದ್ದಾರೆ ಎನ್ನುವ ಆರೋಪ ಎದುರಾಗಿತ್ತು. ಈ ಸಂಬಂಧ ಕಾಂಗ್ರೆಸ್ ಕೂಡ ಆರೋಪ ಮಾಡಿದ್ದು, ಅವರ ಪಕ್ಷದ ಕಾರ್ಯಕರ್ತರ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಕಾರ್ಯಕ್ರಮವೊಂದರಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಗಲಾಟೆ ಸೃಷ್ಟಿಸಿ, ಗಲಾಟೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಈ ಹಿನ್ನೆಲೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಅವರ ಪಕ್ಷದ ಕೆಲ ಕಾರ್ಯಕರ್ತರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ಅವರ ಕಚೇರಿ ಸೋಮವಾರ (ಏಪ್ರಿಲ್ 15) ತಿಳಿಸಿದೆ.

ಇನ್ನು ಗದ್ದಲದ ವೇಳೆ ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮದ ವೇದಿಕೆಯಿಂದ ನಿರ್ಗಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಇದಕ್ಕೆ ಕಾಂಗ್ರೆಸ್ ಹಲವರು ಆಕ್ರೋಶಗಳನ್ನುನ ಕೂಡ ವ್ಯಕ್ತಪಡಿಸಿದ್ದರು. ಈ ಸಂಬಂಧ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಮತ್ತು ಅವರ ಬೆಂಬಲಿಗರ ವಿರುದ್ಧ ಸಹಕಾರಿ ಕ್ಷೇತ್ರದ ಪ್ರತಿನಿಧಿಗಳ ಸಭೆಯ ಸಂಘಟಕರು ದೂರು ದಾಖಲಿಸಿದ್ದಾರೆ ಎಂದು ತೇಜಸ್ವಿ ಸೂರ್ಯ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 13 ರಂದು, ಸಹಕಾರಿ ಕ್ಷೇತ್ರದ ಪ್ರಮುಖ ಪ್ರತಿನಿಧಿಗಳು ಚುನಾವಣಾ ಕಚೇರಿಯಲ್ಲಿ ತೇಜಸ್ವಿ ಸೂರ್ಯ ಅವರನ್ನು ಭೇಟಿ ಮಾಡಲು ಹಾಗೂ ಶುಭಾಶಯ ಕೋರಲು ಕಾರ್ಯಕ್ರಮವನ್ನು ಏರ್ಪಡಿಸಿದ್ದರು. "ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ವ್ಯಕ್ತಿಗಳು ಆಹ್ವಾನವಿಲ್ಲದೆ ಬಲವಂತವಾಗಿ ಸಭೆಗೆ ನುಗ್ಗಿ ಅಡ್ಡಿಪಡಿಸಿದರು," ಎಂದು ಪ್ರತಿನಿಧಿಗಳು ದೂರಿನಲ್ಲಿ ಆರೋಪಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮತ್ತು ಅವರ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಮತ್ತು ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.












Click it and Unblock the Notifications