ಡಿ.ಕೆ ಶಿವಕುಮಾರ್ ಕೈಯಲ್ಲಿ ಬೆಂಗಳೂರು ಅಭಿವೃದ್ಧಿ ಆಗಲ್ಲ ಎಂದ ತೇಜಸ್ವಿ ಸೂರ್ಯ!

ಬೆಂಗಳೂರು ಅಭಿವೃದ್ಧಿಯ ಬಗ್ಗೆ ಪದೇ ಪದೇ ಚರ್ಚೆ ಆಗುತ್ತಿರುತ್ತದೆ. ಇತ್ತೀಚಿನ ದಿನಗಳಲ್ಲಿ ಮೆಟ್ರೋ ಕಾಮಗಾರಿ ಸೇರಿದಂತೆ ವಿವಿಧ ಕಾರಣಗಳಿಗೆ ಸಂಸದ ತೇಜಸ್ವಿ ಸೂರ್ಯ ಹಾಗೂ ಕರ್ನಾಟಕ ಸರ್ಕಾರದ ನಡುವೆ ವಾಕ್ಸಮರ ನಡೆಯುವುದು ಇದೆ. ಇದೀಗ ಸಂಸದ ತೇಜಸ್ವಿ ಸೂರ್ಯ ಅವರು ನೇರವಾಗಿ ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ. ಅಲ್ಲದೇ ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್‌ ಸಹ ಶುರುವಾಗಿದೆ. ಟ್ರಂಪ್ ಭೇಟಿಯ ವಿಚಾರವಾಗಿಯೂ ತೇಜಸ್ವಿ ಸೂರ್ಯ ಅವರು ಸಹ ಮಾತನಾಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಇರುವಷ್ಟು ಅಧಿಕಾರ ನನಗೆ ಇದ್ದಿದ್ದರೆ ಕತೆನೇ ಬೇರೆ ಇರ್ತಿತ್ತು ಅಂತ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ತೇಜಸ್ವಿ ಸೂರ್ಯ ಅವರು, ಡಿ.ಕೆ ಶಿವಕುಮಾರ್ ಅವರ ಬಗ್ಗೆ ಮಾತನಾಡಿದ್ದು & ರಾಜ್ಯ ಸರ್ಕಾರದ ಬಗ್ಗೆಯೂ ವ್ಯಂಗ್ಯವಾಡಿದ್ದಾರೆ. ಬೆಂಗಳೂರು ಬದಲಾವಣೆಗೆ ದೇವರೇ ಬಂದರೂ ಸಾಧ್ಯವಿಲ್ಲ ಎಂದು ಈಚೆಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಇದರ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಅವರು ವ್ಯಂಗ್ಯವಾಡಿದ್ದಾರೆ.

Tejaswi Surya challenges if he had power like D K Shivakumar he would have fix bengaluru in a year

ಈಚೆಗೆ ಸುರಿದ ಸಾಧಾರಣ ಮಳೆಗೇ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿತ್ತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು, ಆ ದೇವರೇ ಬಂದರೂ ಬೆಂಗಳೂರನ್ನು ಸರಿ ಮಾಡುವುದಕ್ಕೆ ಸಾಧ್ಯವಿಲ್ಲ ಎಂದಿದ್ದರು. ಡಿ.ಕೆ ಶಿವಕುಮಾರ್‌ ಅವರು ಹೇಳಿಕೆಯ ಬಗ್ಗೆ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಇರುವ ಅಧಿಕಾರ ನನಗೆ ಇದ್ದಿದ್ದರೆ, ನಾನು ಒಂದೇ ವರ್ಷದಲ್ಲಿ ಬೆಂಗಳೂರು ನಗರ ಅಭಿವೃದ್ಧಿ ಮಾಡುತ್ತಿದ್ದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಮುಂದುವರಿದು ಬೆಂಗಳೂರನ್ನು ಸರಿ ಮಾಡುವುದಕ್ಕೆ ಆ ದೇವರೇ ಬಂದರೂ ಸಾಧ್ಯವಿಲ್ಲ ಅಂತ ಡಿ.ಕೆ ಶಿವಕುಮಾರ್‌ ಅವರು ಹೇಳಿದ್ದರು. ಬೆಂಗಳೂರನ್ನ ಸರಿ ಮಾಡುವುದಕ್ಕೆ ದೇವರೇನು ಬರಬೇಕಾಗಿಲ್ಲ. ಬೆಂಗಳೂರು ನಗರವನ್ನು ಸರಿ ಮಾಡಲು ನಾಯಕತ್ವ ಹಾಗೂ ಇಚ್ಛಾಶಕ್ತಿ ಇದ್ದರೆ ಸಾಕು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಇರುವಷ್ಟು ಅಧಿಕಾರವೇನಾದರೂ ನನ್ನ ಬಳಿ ಇದ್ದರೆ ಕೇವಲ ಒಂದೇ ಒಂದು ವರ್ಷದಲ್ಲಿ ಬೆಂಗಳೂರನ್ನು ಸರಿ ಮಾಡುತ್ತೇನೆ ಎಂದು ಅವರು ಸವಾಲು ಹಾಕಿದ್ದಾರೆ.

ಟ್ರಂಪ್ ಭೇಟಿಯ ಬಗ್ಗೆ ತೇಜಸ್ವಿ ಸೂರ್ಯ ಹೇಳಿದ್ದೇನು: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಭೇಟಿ ಮಾಡಲು ಹೋದ ನಿಯೋಗದಲ್ಲಿ ಮುಜುಗರವಾಗಿತ್ತು. ತೇಜಸ್ವಿ ಸೂರ್ಯ ಅವರು ಶಿಷ್ಠಾಚಾರ ಉಲ್ಲಂಘನೆ ಮಾಡಿದ್ದರು ಎನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ತೇಜಸ್ವಿ ಸೂರ್ಯ ಅವರು, ಕಾಂಗ್ರೆಸ್ ನಾಯಕರ ಆರೋಪವೆಲ್ಲವೂ ಕಾಗಕ್ಕ ಗುಬ್ಬಕ್ಕನ ಕಥೆ. ನಾನು ಜನರ ಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ. ಅವರ ಆರೋಪಗಳಿಗೆಲ್ಲ ನಾನು ತಲೆ ಕೆಡಿಸಿಕೊಳ್ಳಲ್ಲ. ಅವರು ಯಾವೆಲ್ಲಾ ವಿಚಾರವನ್ನು ತೆಗೆದುಕೊಂಡು ಆರೋಪ ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೆ, ಗಂಭೀರವಾಗಿರುವ ರಾಜ್ಯ ಹಾಗೂ ಬೆಂಗಳೂರು ನಗರದಲ್ಲಿರುವ ಗಂಭೀರ ವಿಷಯಗಳ ಮೇಲೆ ರಾಜಕೀಯ ಮಾಡಿ ಎಂದು ವ್ಯಂಗ್ಯವಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+