ರಾಜ್ಯದಲ್ಲಿ ಹೆಚ್ಚಿದ ತಾಪಮಾನಕ್ಕೆ ಬಸವಳಿದ ಜನ
ಬೆಂಗಳೂರು, ಮಾರ್ಚ್ 27: ರಾಜ್ಯದಲ್ಲಿ ಎರಡು ವಾರಗಳ ಹಿಂದೆ ಸಾಕಷ್ಟು ಕಡೆಗಳಲ್ಲಿ ಮಳೆಯಾಗಿತ್ತು. ನಂತರ ಏಕಾಏಕಿ ತಾಪಮಾನ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇನ್ನು ಎರಡು ದಿನ ಮೋಡ ಕವಿದ ವಾತಾವರಣವಿರಲಿದೆ.
ರಾಜ್ಯದಲ್ಲಿ ತಾಪಮಾನ ಏರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ. ಇತ್ತೀಚೆಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಾಗ ರಾಜ್ಯದಲ್ಲಿ ತಾಪಮಾನದಲ್ಲಿ ಕುಸಿತವಾಗಿತ್ತು.
ಹೀಗಾಗಿ ಮಾರ್ಚ್ ಎರಡನೇ ವಾರದಲ್ಲಿ ಹೆಚ್ಚು ಸೆಕೆ ಕಂಡುಬಂದಿರಲಿಲ್ಲ. ಮಳೆ ನಿಂತ ನಂತರ ಬಿಸಿಲಿನ ಆಟ ಆರಂಭವಾಗಿದ್ದು, ದಿನೇದಿನೆ ಸೆಕೆ ಅಧಿಕವಾಗುತ್ತಿದೆ. ಹವಾಮಾನ ಇಲಾಖೆಯ ಸೋಮವಾರದ ಮಾಹಿತಿಯಂತೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ದಾಖಲಾಗಿದೆ. ಕರಾವಳಿಯ ಎಲ್ಲ ಪ್ರದೇಶಗಳಲ್ಲೂ ಅಧಿಕ ತಾಪಮಾನವಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲೂ ತಾಪಮಾನವು ವಾಡಿಕೆಗಿಂತ ಸ್ವಲ್ಪ ಏರಿಕೆಯಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ 1.5 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗಿದೆ. ಏಪ್ರಿಲ್‌ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಕರಾವಳಿಯಲ್ಲಿ ಸಮುದ್ರ ಭಾಗದಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಸೆಕೆ ಅತಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 37.2ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್ , ಬಾಗಲಕೋಟೆಯಲ್ಲಿ 37.8ಡಿಗ್ರಿ ಸೆಲ್ಸಿಯಸ್ , ಗದಗ 37.2ಡಿಗ್ರಿ ಸೆಲ್ಸಿಯಸ್ , ಕಲಬುರ್ಗಿ 40.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನು ಕರಾವಳಿ ಭಾಗದಲ್ಲಿ ಅಂದರೆ ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್, ಶಿರಾಲಿಯಲ್ಲಿ 35.2ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಿದೆ.
ಬೆಂಗಳೂರು ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಎರಡು ದಿನಗಳಲ್ಲಿ ಎರಡು ಡಿಗ್ರಿ ಸೆಲ್ಸಿಯಸ್ ಗಳಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications