ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ವಿವಿ ಆವರಣದಲ್ಲಿ ದೇವಸ್ಥಾನ: ವಿದ್ಯಾರ್ಥಿಗಳ ಆಕ್ರೋಶ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್‌ 09: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ದೇವಸ್ಥಾನ ನಿರ್ಮಾಣ ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂರಾರು ವಿದ್ಯಾರ್ಥಿಗಳು ಆಡಳಿತ ವಿಭಾಗದ ಬಳಿ ಜಮಾಯಿಸಿ ಗಣೇಶ ಮಂದಿರ ನಿರ್ಮಾಣಕ್ಕೆ ನೀಡಿರುವ ಅನುಮತಿಯನ್ನು ಹಿಂಪಡೆಯುವಂತೆ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಒತ್ತಾಯಿಸಿದರು. ಕಟ್ಟಡ ಕಾಮಗಾರಿಯ ಉಸ್ತುವಾರಿ ಹೊತ್ತಿರುವ ಬಿಬಿಎಂಪಿ ಇಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯಪಾಲರು, ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸಲು ಅವರು ನಿರ್ಧರಿಸಿದರು.

ಬಿಕಾಂ ಪದವಿಯಲ್ಲಿ 7 ಚಿನ್ನದ ಪದಕ ಪಡೆದ ಬಿಡದಿ ವಿದ್ಯಾರ್ಥಿನಿಬಿಕಾಂ ಪದವಿಯಲ್ಲಿ 7 ಚಿನ್ನದ ಪದಕ ಪಡೆದ ಬಿಡದಿ ವಿದ್ಯಾರ್ಥಿನಿ

ಬೆಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಉಪಾಧ್ಯಕ್ಷ ಲೋಕೇಶ್ ರಾಮ್ ಮಾತನಾಡಿ, "ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಕಿಡಿಗೇಡಿಗಳು ಎಂದು ಕರೆದಿರುವ ಬಗ್ಗೆ ಎಂಜಿನಿಯರ್ ಪೊಲೀಸ್ ದೂರು ನೀಡಿದ್ದಾರೆ. ಪ್ರತಿಭಟನೆಯ ನಂತರ ಯೋಜನೆಯ ಉಸ್ತುವಾರಿ ಇಂಜಿನಿಯರ್ ಅವರು ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಕಿಡಿಗೇಡಿಗಳು ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ನಾವು ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯಸ್ಥರನ್ನು ಒತ್ತಾಯಿಸಿದ್ದೇವೆ," ಎಂದು ಅವರು ಹೇಳಿದರು.

Temple in Bengaluru University campus: Students outrage

ದೇಗುಲ ನಿರ್ಮಾಣ ಕಾಮಗಾರಿ ನಿಲ್ಲಿಸುವಂತೆ ವಿಶ್ವವಿದ್ಯಾನಿಲಯ ನಿರ್ದೇಶನ ನೀಡಿದ್ದರೂ ಬಿಬಿಎಂಪಿ ಅಧಿಕಾರಿಗಳು ಕಾಮಗಾರಿ ಮುಂದುವರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಉಪಕುಲಪತಿ ಡಾ.ಜಯಕರ ಎಸ್.ಎಂ. ಭೇಟಿ ನೀಡಿ ಕಾಮಗಾರಿ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Temple in Bengaluru University campus: Students outrage

ಈ ಹಿನ್ನೆಲೆಯಲ್ಲಿ ಕೆಲವು ಸಾಮಾಜಿಕ ಕಾರ್ಯಕರ್ತರು ಸಂವಿಧಾನದ ಪ್ರಕಾರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಯಾವುದೇ ಧಾರ್ಮಿಕ ರಚನೆಗೆ ಅವಕಾಶವಿಲ್ಲ. ಮಂದಿರ ನಿರ್ಮಾಣವನ್ನು ವಿಶ್ವವಿದ್ಯಾಲಯ ಆಡಳಿತ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

English summary
Students and staff have expressed their anger against the construction of a temple in the Jnanabharati campus of Bangalore University.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X