ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ತೆರೆದಿದ್ದ ತಾತ್ಕಾಲಿಕ ಚಿತಾಗಾರಗಳು ಸ್ಥಗಿತ

|
Google Oneindia Kannada News

ಬೆಂಗಳೂರು, ಜೂನ್ 11: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಕ್ರಮೇಣ ತಗ್ಗುತ್ತಿದ್ದು, ಸಾವಿನ ಪ್ರಮಾಣ ಇಳಿಕೆಯಾಗಿದೆ. ಹೀಗಾಗಿ, ಬೆಂಗಳೂರಿನ ಹೊರವಲಯದಲ್ಲಿ ತೆರೆಯಲಾಗಿದ್ದ ತಾತ್ಕಾಲಿಕ ಬಯಲು ಚಿತಾಗಾರಗಳನ್ನು ಮುಚ್ಚಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಗುರುವಾರ ಹೇಳಿದ್ದಾರೆ.

ಕೊರೊನಾ ಎರಡನೇ ಅಲೆಯಲ್ಲಿ ಸತತವಾಗಿ ಸಾವಿನ ಸಂಖ್ಯೆ ಏರುತ್ತಿದ್ದ ಕಾರಣ ಶವಸಂಸ್ಕಾರಕ್ಕೆ ತೊಂದರೆಯಾಗಿ, ನಗರದ ಹೊರವಲಯಗಳಲ್ಲಿ ತಾತ್ಕಾಲಿಕವಾಗಿ ಬಯಲು ಚಿತಾಗಾರಗಳನ್ನು ತೆರೆಯಲಾಗಿತ್ತು. ಇದೀಗ ಸಾವಿನ ಪ್ರಕರಣಗಳು ಕಡಿಮೆಯಾಗಿರುವ ಕಾರಣ ಚಿತಾಗಾರಗಳನ್ನು ಮುಚ್ಚಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಸಾವಿನ ಸಂಖ್ಯೆ ಪ್ರತಿದಿನ 40-50 ಇದೆ. ಹೀಗಾಗಿ ಈಗಿರುವ ಚಿತಾಗಾರಗಳಲ್ಲಿಯೇ ನಿರ್ವಹಣೆ ಮಾಡಲಾಗುತ್ತಿದೆ ಎಂದಿದ್ದಾರೆ.

ಬೆಂಗಳೂರು; ವಿಲ್ಸನ್ ಗಾರ್ಡನ್ ಚಿತಾಗಾರ ತಾತ್ಕಾಲಿಕ ಬಂದ್ ಬೆಂಗಳೂರು; ವಿಲ್ಸನ್ ಗಾರ್ಡನ್ ಚಿತಾಗಾರ ತಾತ್ಕಾಲಿಕ ಬಂದ್

ಕೊರೊನಾ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾದ ಕಾರಣ ಯಲಹಂಕ, ತಾವರೆಕೆರೆಯ ಗಿಡ್ಡೇನಹಳ್ಳಿ ಹಾಗೂ ಕುರುಬರಹಳ್ಳಿಯಲ್ಲಿ ತಾತ್ಕಾಲಿಕವಾಗಿ ಶವಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

Temporary Crematoriums Now Be Shut Due To Decline In Death Numbers Says BBMP

ಆದರೆ ನಿಜವಾದ ಅಂಕಿ ಅಂಶಗಳನ್ನು ಸರ್ಕಾರ ಮರೆಮಾಚುತ್ತಿದೆ. ಉದ್ದೇಶಪೂರ್ವಕವಾಗಿ ಸಾವಿನ ಸಂಖ್ಯೆಯನ್ನು ಕಡಿಮೆ ತೋರಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಗುರುವಾರ ರಾಜ್ಯದಲ್ಲಿ ಹೊಸದಾಗಿ 11042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2739290ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 210652 ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ. 6.58 ರಷ್ಟಿದ್ದು, ಮರಣ ಪ್ರಮಾಣ ಶೇ. 1.75 ರಷ್ಟಿದೆ. ಬೆಂಗಳೂರಿನಲ್ಲಿ 2191 ಪ್ರಕರಣಗಳು ದೃಢಪಟ್ಟಿದ್ದು, 47 ಸೋಂಕಿತರು ಸಾವನ್ನಪ್ಪಿದ್ದಾರೆ. 4846 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Recommended Video

ರಾಜ್ಯದ ಬೊಕ್ಕಸ ತುಂಬಿಸಲು ಮಧ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ | Oneindia Kannada

English summary
BBMP Chief Commissioner Gaurav Gupta said that temporary crematoriums set up during the peak of the second wave in Bengaluru will now be shut,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X