ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾವಲಭೈರಸಂದ್ರದಲ್ಲಿ ಗಲಭೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಆ.12: ಕಾವಲ್ ಭೈರಸಂದ್ರದಲ್ಲಿ ಕಳೆದ ರಾತ್ರಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Recommended Video

ಸ್ವಯಂ ಪ್ರೇರಿತರಾಗಿ ಪೊಲೀಸರು ದೂರು ದಾಖಲು ಮಾಡಬೇಕಿತ್ತು | Oneindia Kannada

ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ದಾಂಧಲೆಯ ಹಿಂದು-ಮುಂದುಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ದಾಂಧಲೆಯ ಹಿಂದು-ಮುಂದು

ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸೋದರಳಿಯ ನವೀನ್ ಎಂಬಾತ ಧಾರ್ಮಿಕ ಭಾವನೆಗೆ ಧಕ್ಕೆ ತರುವಂಥ ಫೇಸ್ಬುಕ್ ಪೋಸ್ಟ್ ಹಾಕಿದ್ದರು. ಇದರಿಂದ ರೊಚ್ಚಿಗೆದ್ದ ಗುಂಪೊಂದು ಶಾಸಕರ ಮನೆ ಮೇಲೆ ದಾಳಿ ನಡೆಸಿದೆ. ನಂತರ ಗಲಭೆ ಹೆಚ್ಚಾಗಿದೆ. ದುಷ್ಕರ್ಮಿಗಳು ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದ್ದಾರೆ. ಘಟನೆಯಲ್ಲಿ ಪೊಲೀಸರು, ವರದಿ ಮಾಡಲು ಬಂದಿದ್ದ ಪತ್ರಕರ್ತರಿಗೆ ಗಾಯಗಳಾಗಿವೆ.

ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಘರ್ಷಣೆ: ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಘರ್ಷಣೆ: ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಘಟನೆ ನಂತರ ಪೊಲೀಸರು ಹಾರಿಸಿದ ಗುಂಡಿಗೆ ಮೂವರು ಬಲಿಯಾಗಿದ್ದು, 110 ಮಂದಿಯನ್ನು ಬಂಧಿಸಲಾಗಿದೆ. 80ಕ್ಕೂ ಅಧಿಕ ಪೊಲೀಸರು 12ಕ್ಕೂ ಅಧಿಕ ಮಾಧ್ಯಮ ಪ್ರತಿನಿಧಿಗಳಿಗೆ ಗಾಯಗಳಾಗಿವೆ. ಘಟನೆಗೆ ಕಾರಣರಾದವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ

ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ

ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ ಎಂದು ಸಿದ್ದರಾಮಯ ಹೇಳಿದರು. ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ ಎಂದಿದ್ದಾರೆ.

ಅಮಾಯಕರು ಬಲಿಯಾಗುತ್ತಾರೆ

ಅಮಾಯಕರು ಬಲಿಯಾಗುತ್ತಾರೆ

ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ.

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಬೆಂಗಳೂರಿನಲ್ಲಿ ಪೊಲೀಸರ ಹೈ ಅಲರ್ಟ್ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಬೆಂಗಳೂರಿನಲ್ಲಿ ಪೊಲೀಸರ ಹೈ ಅಲರ್ಟ್

ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ

ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ

ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ‌ ಕಳೆದು ಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ

ಘಟನೆ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಮತ್ತು ಹಿಂಸಾಚಾರದ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಂಡಿಸಿದ್ದಾರೆ. ಇಂತಹ ಪುಂಡಾಟಿಕೆಗಳನ್ನು ಸರ್ಕಾರ ಸಹಿಸುವುದಿಲ್ಲ. ಜನರು ಇಂತಹ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮ ಕಾಪಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

English summary
Siddaramaiah reaction on violence eruptedin DJ Halli, Kaval byrasandra over an offensive post on a social media platform by a kin of MLA MLA Akhanda Srinivasa Murthy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X