ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ. ಜೆ. ಹಳ್ಳಿ ಪೊಲೀಸ್ ಠಾಣೆ ಉದ್ವಿಗ್ನ, ವಾಹನಗಳು ಜಖಂ

|
Google Oneindia Kannada News

ಬೆಂಗಳೂರು, ಆಗಸ್ಟ್ 11 : ಬೆಂಗಳೂರಿನ ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಜನರು ಪೊಲೀಸ್ ವಾಹನಗಳನ್ನು ಜಖಂಗೊಳಿಸಿದ್ದಾರೆ.

ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆದಿತ್ತು. ಶಾಸಕರ ಮನೆಯ ಮುಂದಿದ್ದ ಜನರು ಠಾಣೆ ಎದುರು ಜಮಾಯಿಸಿದ್ದು, ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ

Tension In DJ Halli police station Police Vehicle Damaged

ನೂರಾರು ಜನರ ಠಾಣೆ ಮುಂದೆ ಜಮಾವಣೆಗೊಂಡಿದ್ದು ಕೈಯಲ್ಲಿ ಕೋಲು, ರಾಡ್ ಹಿಡಿದುಕೊಂಡಿದ್ದಾರೆ. ಠಾಣೆಯ ಮುಂದಿದ್ದ ಡಿಸಿಪಿ ಶರಣಪ್ಪ ಅವರ ಕಾರು, ಗಸ್ತುವಾಹನವನ್ನು ಜಖಂಗೊಳಿಸಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪರಿಚಯಶಾಸಕ ಅಖಂಡ ಶ್ರೀನಿವಾಸಮೂರ್ತಿ ಪರಿಚಯ

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಡಿ. ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಬಂದಿದ್ದರು.

ಡಿ. ಜೆ. ಹಳ್ಳಿ ಗಲಭೆ; ಗೃಹ ಸಚಿವರ ಎಚ್ಚರಿಕೆಡಿ. ಜೆ. ಹಳ್ಳಿ ಗಲಭೆ; ಗೃಹ ಸಚಿವರ ಎಚ್ಚರಿಕೆ

ಉದ್ರಿಕ್ತ ಜನರು ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆ ಬಂದು ಗಲಾಟೆ ಆರಂಭಿಸಿದರು. ಪೊಲೀಸ್ ವಾಹನಗಳನ್ನು ಜಖಂಗೊಳಿಸಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸ್ಥಳಕ್ಕೆ ಬಂದಿದ್ದಾರೆ. ಎಲ್ಲಾ ವಿಭಾಗದ ಡಿಸಿಪಿಗಳಿಗೆ ಸ್ಥಳಕ್ಕೆ ಬರುವಂತೆ ಸೂಚನೆ ನೀಡಲಾಗಿದೆ.

English summary
Tension prevailed at DJ Halli police station and people damaged police vehicle.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X