ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಏರ್‌ಪೋರ್ಟ್‌ ಭದ್ರತೆಗೆ 1,700 ಹೆಚ್ಚುವರಿ ಸಿಬ್ಬಂದಿ

ಬೆಂಗಳೂರು ವಿಮಾನ ನಿಲ್ದಾಣದ ಭದ್ರತೆಗೆ 1,700 ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ ಯೋಧರನ್ನು ನಿಯೋಜನೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

|
Google Oneindia Kannada News

ಬೆಂಗಳೂರು, ಜನವರಿ 30; ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೊಳ್ಳಲಿದ್ದಾರೆ. ಪ್ರಸ್ತುತ 3,500 ಸಿಬ್ಬಂದಿ ವಿಮಾನ ನಿಲ್ದಾಣದ ಭದ್ರತೆ ನೋಡಿಕೊಳ್ಳುತ್ತಿದ್ದಾರೆ.

2022ರ ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟಿಸಿದರು. ಈಗ ಟರ್ಮಿನಲ್ ಕಾರ್ಯಾರಂಭ ಮಾಡಿದೆ. ಈ ಹಿನ್ನಲೆಯಲ್ಲಿ ಭದ್ರತಾ ಸಿಬ್ಭಂದಿಯ ಸಂಖ್ಯೆಯನ್ನು ಏರಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಕಾರ್ಯಾರಂಭಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಕಾರ್ಯಾರಂಭ

ಈ ಹಿನ್ನಲೆಯಲ್ಲಿ 1,700 ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ ಯೋಧರನ್ನು ವಿಮಾನ ನಿಲ್ದಾಣದ ಭದ್ರತೆಗೆ ಹೆಚ್ಚುವರಿಯಾಗಿ ನಿಯೋಜನೆ ಮಾಡಲಾಗುತ್ತದೆ. ಈ ಪ್ರಸ್ತಾವನೆಗೆ ಈಗಾಗಲೇ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಟರ್ಮಿನಲ್- 2 ಆರಂಭ: ಯಾವ ಊರಿಗೆ ಮೊದಲ ವಿಮಾನ? ತಿಳಿಯಿರಿ ಟರ್ಮಿನಲ್- 2 ಆರಂಭ: ಯಾವ ಊರಿಗೆ ಮೊದಲ ವಿಮಾನ? ತಿಳಿಯಿರಿ

ಸದ್ಯ ವಿಮಾನ ನಿಲ್ದಾಣಗಳ ಭದ್ರತೆಯ ಜವಾಬ್ದಾರಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಯೋಧರು ನೋಡಿಕೊಳ್ಳುತ್ತಿದ್ದಾರೆ. ಭಯೋತ್ಪಾದನಾ ಕೃತ್ಯಗಳ ನಿಗ್ರಹ, ವಿಮಾನ ನಿಲ್ದಾಣಗಳ ಭದ್ರತೆ ವಿಚಾರದಲ್ಲಿ ವಿಶೇಷ ತರಬೇತಿ ಪಡೆದ ಯೋಧರು. ನಿಲ್ದಾಣದ ಭದ್ರತೆಗೆ ನಿಯೋಜನೆಗೊಳ್ಳಲಿದ್ದಾರೆ.

ಮೋದಿ ಉದ್ಘಾಟಿಸಲಿರುವ ಬೆಂಗಳೂರಿನ 'ಗಾರ್ಡನ್ ಟರ್ಮಿನಲ್' ಬಗ್ಗೆ ನಿಮಗೆಷ್ಟು ಗೊತ್ತು? ಮೋದಿ ಉದ್ಘಾಟಿಸಲಿರುವ ಬೆಂಗಳೂರಿನ 'ಗಾರ್ಡನ್ ಟರ್ಮಿನಲ್' ಬಗ್ಗೆ ನಿಮಗೆಷ್ಟು ಗೊತ್ತು?

5,200 ಸಿಬ್ಬಂದಿ ಭದ್ರತೆಗೆ ನಿಯೋಜನೆ

5,200 ಸಿಬ್ಬಂದಿ ಭದ್ರತೆಗೆ ನಿಯೋಜನೆ

ಮಹಿಳಾ ಸಿಬ್ಬಂದಿಗಳು ಸೇರಿ ಪ್ರಸ್ತುತ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆಯನ್ನು 3,500 ಸಿಬ್ಬಂದಿ ನೋಡಿಕೊಳ್ಳುತ್ತಿದ್ದಾರೆ. ಟರ್ಮಿನಲ್-2 ಉದ್ಘಾಟನೆಗೊಂಡ ಹಿನ್ನಲೆಯಲ್ಲಿ ಈಗ ಭದ್ರತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. 1,700 ಸಿಬ್ಬಂದಿಗಳ ನಿಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಈಗ ಒಟ್ಟು ಭದ್ರತಾ ಸಿಬ್ಬಂದಿಗಳ ಸಂಖ್ಯೆ 5,200 ಆಗಲಿದೆ.

ಯಾವ-ಯಾವ ಭದ್ರತಾ ಕಾರ್ಯಗಳು

ಯಾವ-ಯಾವ ಭದ್ರತಾ ಕಾರ್ಯಗಳು

ವಿಮಾನ ನಿಲ್ದಾಣದ ಭದ್ರತೆಗೆ ನಿಯೋಜನೆಗೊಂಡಿರುವ ಸಿಐಎಸ್‌ಎಫ್ ಯೋಧರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಪ್ರಯಾಣಿಕರ ತಪಾಸಣೆ, ಸಾಮಾನು ಸರಂಜಾಮುಗಳ ಸ್ಕ್ಯಾನಿಂಗ್, ವಿಮಾನ ನಿಲ್ದಾಣದ ಸಮಗ್ರ ಭದ್ರತೆ, ಭಯೋತ್ಪದನಾ ಕೃತ್ಯಗಳ ನಿಗ್ರಹಿಸುವಿಕೆ ಮುಂತಾದ ಕಾರ್ಯಗಳನ್ನು ನೋಡಿಕೊಳ್ಳುತ್ತದೆ. ಸದ್ಯ ದೇಶದ ವಿಮಾನ ನಿಲ್ದಾಣಗಳ ಭದ್ರತೆಗೆ ಎಲ್ಲಾ ಕಡೆಯೂ ಸಿಐಎಸ್‌ಎಫ್ ಯೋಧರನ್ನು ನೇಮಕ ಮಾಡಲಾಗಿದೆ.

ಗೃಹ ಇಲಾಖೆಗೆ ಮನವಿ ಮಾಡಲಾಗಿತ್ತು

ಗೃಹ ಇಲಾಖೆಗೆ ಮನವಿ ಮಾಡಲಾಗಿತ್ತು

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟನೆಗೊಂಡ ಬಳಿಕ 3,500 ಸಿಐಎಸ್ಎಫ್ ಸಿಬ್ಬಂದಿ ಸಾಲುತ್ತಿಲ್ಲ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ಕೇಂದ್ರ ಗೃಹ ಇಲಾಖೆ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ 1,700 ಯೋಧರ ಹೆಚ್ಚುವರಿ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಇದಕ್ಕಾಗಿ ಮಾನವ ಸಂಪನ್ಮೂಲವನ್ನು ಕೇಂದ್ರ ಮಂಜೂರು ಮಾಡಿದೆ. ಈ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಭಂದಿಗಳ ಸಂಖ್ಯೆ ಏರಿಕೆಯಾಗಲಿದೆ.

ಲಕ್ಷಾಂತರ ಜನರ ಭೇಟಿ

ಲಕ್ಷಾಂತರ ಜನರ ಭೇಟಿ

ಲಕ್ಷಾಂತರ ಜನರು ಪ್ರತಿದಿನ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುತ್ತಾರೆ. ಪ್ರಯಾಣಿಕರ ದಟ್ಟಣೆ ತಪ್ಪಿಸಲು 2ನೇ ಟರ್ಮಿನಲ್ ಅನ್ನು ಸುಮಾರು 5000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಟರ್ಮಿನಲ್ ಲೋಕಾರ್ಪಣೆ ಬಳಿಕ ವಿಮಾನ ನಿಲ್ದಾಣದ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ವಾರ್ಷಿಕವಾಗಿ ಪ್ರಸ್ತುತ ಇರುವ 2.5 ಕೋಟಿಯಿಂದ 5-6 ಕೋಟಿ ಪ್ರಯಾಣಿಕರಿಗೆ ದುಪ್ಪಟ್ಟುಗೊಳಿಸಲಾಗುತ್ತದೆ.

ಗಮನ ಸೆಳೆಯುವ ವಿನ್ಯಾಸ

ಗಮನ ಸೆಳೆಯುವ ವಿನ್ಯಾಸ

ವಿಮಾನ ನಿಲ್ದಾಣದ ಟರ್ಮಿನಲ್-2 ಅನ್ನು ಬೆಂಗಳೂರಿನ ಉದ್ಯಾನ ನಗರಿ ಹೆಸರಿಗೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಸುಮಾರು 10,000ಕ್ಕೂ ಹೆಚ್ಚು ಚದರ ಮೀಟರ್‌ಗಳಷ್ಟು ಹಸಿರು ಗೋಡೆಗಳು, ತೂಗು ಉದ್ಯಾನಗಳು ಮತ್ತು ಹೊರಾಂಗಣ ಉದ್ಯಾನಗಳ ಮೂಲಕ ಪ್ರಯಾಣಿಸುತ್ತಾರೆ. ನಿಲ್ದಾಣವನ್ನು ನವೀಕರಿಸಬಹುದಾದ ಇಂಧನದ ಶೇ.100 ರಷ್ಟು ಬಳಕೆಯೊಂದಿಗೆ ನಿರ್ಮಾಣ ಮಾಡಲಾಗಿದೆ.

ಟರ್ಮಿನಲ್-2ರ ವಿನ್ಯಾಸ ಮತ್ತು ವಾಸ್ತುಶಿಲ್ಪವು ಅತ್ಯಾಧುನಿಕವಾಗಿದ್ದು, ಗಮನ ಸೆಳೆಯುತ್ತಿದೆ. ಟರ್ಮಿನಲ್‌ನಲ್ಲಿ ತಂತ್ರಜ್ಞಾನ ಮತ್ತು ಕಲೆ ಮತ್ತು ಸಂಸ್ಕೃತಿಗೆ ಆದ್ಯತೆ ನೀಡಲಾಗಿದೆ. ಟರ್ಮಿನಲ್ 2 ಆಧುನಿಕವಾಗಿದ್ದರೂ ಸಹ ನಿಸರ್ಗ ಪ್ರೀತಿಯ ಟರ್ಮಿನಲ್ ಆಗಿದೆ. ಪ್ರದರ್ಶಿಸುತ್ತವೆ ಮತ್ತು ಎಲ್ಲಾ ಪ್ರಯಾಣಿಕರಿಗೆ ಸ್ಮರಣೀಯ 'ಗಮ್ಯಸ್ಥಾನ' ಅನುಭವವನ್ನು ನೀಡುತ್ತದೆ.

English summary
Union home ministry approved to deploy 1,700 Central Industrial Security Force (CISF) for the security of the Terminal 2 of Bengaluru's Kempegowda International Airport (KIA).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X