ಬೆಂಗಳೂರಿನಲ್ಲಿ ಭೀಕರ ಅಪಘಾತ: ಹೊತ್ತಿ ಹುರಿದ ಕಾರು ತಾಯಿ, ಇಬ್ಬರು ಮಕ್ಕಳ ಸಾವು, ಓಬ್ಬರ ಸ್ಥಿತಿ ಗಂಭೀರ
ಬೆಂಗಳೂರು, ಅಕ್ಟೋಬರ್ 03: ಬೆಂಗಳೂರಿನಲ್ಲಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ತಾಯಿ ಸೇರಿ ಇಬ್ಬರು ಮಕ್ಕಳಿ ಸ್ಥಳದಲ್ಲೇ ಸಾವನ್ನಪ್ಪಿದರೆ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಮಂಗಳವಾರ ಮುಂಜಾನೆ 4 ಘಂಟೆಗೆ ಕಾರು ಮೈಸೂರು ಕಡೆಯಿಂದ ಕನಕಪುರ ರಸ್ತೆಯ ಕಡೆಗೆ ತೆರಳುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆಗೆ ತೆರಳುವಾಗ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಬದಿಯಲ್ಲಿದ್ದ ಮೋರಿ ಗೋಡೆಗೆ ಗುದ್ದಿತು. ಮೋರಿಗೆ ಗುದ್ದಿದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ ಮಕ್ಕಳು ಸಜೀವ ದಹನವಾಗಿದ್ದಾರೆ.

ಕಾರಿನಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ಕಾರು ತೆರಳುತ್ತಿದ್ದ ವೇಳೆ ಗಂಡ ಹೆಂಡತಿ ಹಾಗೂ ಅವರ ಇಬ್ಬರು ಮಕ್ಕಳು ಇದ್ದರು. ಈ ದಂಪತಿಯನ್ನು ಮಹೇಂದ್ರನ್ ಮತ್ತು ಸಿಂಧೂ ಎಂದು ಗುರುತಿಸಲಾಗಿದೆ.
ಬೆಳಗ್ಗಿನ ಜಾವ 4 ಗಂಟೆ ಸಮಯದಲ್ಲಿ ನಿದ್ರೆ ಮಂಪರಿನಲ್ಲಿ ಅಪಘಾತ ನಡೆದಿದೆ ಎನ್ನಲಾಗಿದೆ. ಕಾರು ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆಯಿತು. ಬಳಿಕ ಮೋರಿಯ ಗೋಡೆಗೆ ಡಿಕ್ಕಿ ಹೊಡೆಯಿತು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯೂ ಪಲ್ಟಿಯಾಯಿತು. ಈ ಕಾರನ್ನು ಬಾಡಿಗೆಗೆ ಪಡೆಯಲಾಗಿತ್ತು. ಮಹೇಂದ್ರನ್ ಅವರು ಕಾರನ್ನು ಸೆಲ್ಫ್ ಡ್ರೈವ್ ಮಾಡಿಕೊಂಡು ಬೆಳಗ್ಗಿನ ಜಾವ ನಾಗಸಂದ್ರಕ್ಕೆ ಹೋಗಿದ್ದರು. ನಂತರ ಡ್ರೈವ್ ಮಾಡಿಕೊಂಡು ನೈಸ್ ರಸ್ತೆಗೆ ಬರಲಾಗಿತ್ತು.
ಮೂಲತಃ ತಮಿಳುನಾಡಿನ ಸೇಲಂನವರಾದ ಮಹೇಂದ್ರನ್ ಕುಟುಂಬ ರಾಮಮೂರ್ತಿ ನಗರದ ವಿಜಿನಾಪುರ ನಿವಾಸಿಗಳಾಗಿದ್ದರು ಎಂದು ತಿಳಿದು ಬಂದಿದೆ. ಗಾಯಾಳು ಮಹೇಂದ್ರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಅಪಘಾತವಾದ ಸ್ಥಳಕ್ಕೆ ತಲಘಟ್ಟಪುರ ಸಂಚಾರಿ ಪೊಲೀಸರು ಭೇಡಿಯಾಗಿದ್ದು, ಮೃತರ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.












Click it and Unblock the Notifications