Breaking: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಮೂವರ ದುರ್ಮರಣ
ಬೆಂಗಳೂರು, ಸೆಪ್ಟೆಂಬರ್ 14: ಬೆಂಗಳೂರು ನಗರದ ಬೊಮ್ಮನಹಳ್ಳಿ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕಾರು ಮತ್ತು ಬೈಕ್ ಡಿವೈಡರ್ ಗುದ್ದಿದ ಪರಿಣಾಮ ಬೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಓವರ್ ಟೇಕ್ ಮಾಡಲು ಹೋಗಿ ಅಪಘಾತವಾಗಿದ್ದು, ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಹಾಗೂ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪ್ಲೈ ಓವರ್ ಮೇಲೆ ಕಾರು ಡಿಕ್ಕಿಯ ರಭಸಕ್ಕೆ ದೇಹಗಳು ಕೆಳಗೆ ಬಿದ್ದು ಛಿದ್ರವಾಗಿವೆ.
ಫ್ಲೈ ಓವರ್ ಮೇಲೆ ಕಾರು ಕೂಡ ನುಜ್ಜುಗುಜ್ಜಾಗಿದ್ದು, ಕಾರಿನ ವೇಗಕ್ಕೆ ಬೈಕ್ ಸವಾರರು ಬಲಿಯಾಗಿದ್ದಾರೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದು, ಅಪಘಾತವಾದ ಸ್ಥಳ, ವಾಹನಗಳ ಪರಿಶೀಲನೆ ನಡೆಸಿದ್ದಾರೆ.

ಕಾರಿನಲ್ಲಿದ್ದವನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ಲೇಬೈ ಮೇಲೆ ನಿಂತಿದ್ದ ಯುವಕ- ಯುವತಿಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈ ಓವರ್ ಮೇಲೆ ಅಳವಡಿಸಿದ್ದ ಬ್ಯಾರಿಕೇಡ್ ಸಮೇತ ಯುವಕ ಹಾಗೂ ಯುವತಿ ಕೆಳಗೆ ಬಿದ್ದಿದ್ದಾರೆ.

Recommended Video
ಈ ಭೀಕರ ಅಪಘಾತವು ಫ್ಲೈ ಓವರ್ ಮೇಲಿನ ಸುರಕ್ಷತೆಯ ಬಗ್ಗೆ ಪ್ರಶ್ನೆ ಎತ್ತಿದೆ. ಎರಡು ವರ್ಷಗಳ ಹಿಂದೆ ಇದೇ ಮಾದರಿಯಲ್ಲಿ ಸ್ಕೂಟರ್ ಸಮೇತ ಸವಾರರು ಬಿದ್ದು ಮೃತಪಟ್ಟಿದ್ದರು. ಮಂಗಳವಾರ ರಾತ್ರಿ ನಡೆದ ಆಡಿ ಕಾರು ಮತ್ತು ಬುಲೆಟ್ ಬೈಕ್ ನಡುವಿನ ಎಲೆಕ್ಟ್ರಾನಿಕ್ಸ್ ಸಿಟಿ ಪ್ಲೈ ಓವರ್ ಮೇಲಿನ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications