ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿಕ್ಷಕರ ಅರ್ಹತಾ ಪರೀಕ್ಷೆ(TET) ನವೆಂಬರ್ 6ಕ್ಕೆ ನಿಶ್ಚಿತ- ಸಚಿವ ಬಿಸಿ ನಾಗೇಶ್

|
Google Oneindia Kannada News

ಬೆಂಗಳೂರು, ಆಗಸ್ಟ್ 08: ಸರ್ಕಾರಿ ಶಾಲೆಗಳಲ್ಲಿ ಉದ್ಯೋಗವನ್ನು ಗಿಟ್ಟಿಸಿ ಶಿಕ್ಷಕ ವೃತ್ತಿಯನ್ನು ಮಾಡಬೇಕೆಂದಿರುವ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ 15 ಸಾವಿರ ಶಿಕ್ಷಕರನ್ನು ನೇಮಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಇದರೊಂದಿಗೆ ಟಿಇಟಿ ಪರೀಕ್ಷೆಯನ್ನು ನವೆಂಬರ್ 6ಕ್ಕೆ ನಡೆಯಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಟಿಇಟಿ( ಶಿಕ್ಷಕರ ಅರ್ಹತಾ ಪರೀಕ್ಷೆ)ಯು ನವೆಂಬರ್ 6ರಂದು ನಡೆಯಲಿದೆ ಎಂದು ಶಿಕ್ಷಣ ಸಚಿವರು ಮಾಹಿತಿಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರ ನಡೆಸುವ ನೇಮಕಾತಿಯ ವೇಳೆ ಸಿಇಟಿ ಪರೀಕ್ಷೆಯನ್ನು ನಡೆಸಲಿದೆ. ಸಿಇಟಿ ಪರೀಕ್ಷೆಯನ್ನು ತೆಗೆದುಕೊಳ್ಳಲು ಟಿಇಟಿ ಎಂಬ ಪರೀಕ್ಷೆಯನ್ನು ಪ್ರಶಿಕ್ಷಣಾರ್ಥಿಗಳು ಉತ್ತೀರ್ಣರಾಗಿರಬೇಕು. ಅಂದರೆ ಟಿಇಟಿಯಲ್ಲಿ ಅರ್ಹತೆಯನ್ನು ಪಡೆದಿದ್ದರೆ ಮಾತ್ರವೇ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಲು ಅರ್ಹರಾಗಿರುತ್ತಾರೆ.

ಟಿಇಟಿಯನ್ನು ವರ್ಷಕ್ಕೆ ಎರಡು ಸಲ ಪರೀಕ್ಷೆಯನ್ನು ನಡೆಸಬೇಕು ಎಂಬ ಬೇಡಿಕೆಯಿತ್ತು. ಇದಕ್ಕಾಗಿ ಶಿಕ್ಷಣ ಸಚಿವರು ಅಸ್ತು ಎಂದಿದ್ದೂ ವರ್ಷಕ್ಕೆ ಎರಡು ಟಿಇಟಿ ಪರೀಕ್ಷೆ ನಡೆಸಬೇಕು ಎನ್ನುವ ಗುರಿ ಹೊಂದಿದ್ದಾರೆ. ಆದರೆ ಈ ವರ್ಷ ಮಾತ್ರವೇ ಒಂದು ಸಲ ಟಿಇಟಿ ನಡೆಯಲಿದೆ.

TET examination will be held on November 6,2022 says Education Minister BC Nagesh

ಟಿಇಟಿ ನಡೆಸುವ ಉದ್ದೇಶವೇನು?
Techer eligibility test(TET) ಅದರೆ ಶಿಕ್ಷಕರ ಅರ್ಹತೆಯನ್ನು ತಿಳಿಯಲು ನಡೆಸಲಾಗುವ ಪರೀಕ್ಷೆ. ಈ ಪರೀಕ್ಷೆಯನ್ನು ಉತ್ತೀರ್ಣರಾದರೆ ಮಾತ್ರವೇ ಸಿಇಟಿ(Common entrence Exam) ಪರೀಕ್ಷೆಯನ್ನು ಎದುರಿಸಲು ಸಹಕಾರಿಯಾಗಲಿದೆ. ಡಿ.ಇಡಿ ಮತ್ತು ಬಿ.ಇಡಿ ಶಿಕ್ಷಣವನ್ನು ಪೂರೈಸಿರುವ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳು ಟಿಇಟಿ ಪರೀಕ್ಷೆಯನ್ನು ತೆಗೆದುಕೊಂಡು ಅರ್ಹತೆಯನ್ನು ಗಿಟ್ಟಿಸಿಕೊಳ್ಳಬೇಕಾಗುತ್ತದೆ.

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳು ಲಕ್ಷಾಂತರ
ಶಿಕ್ಷಕ ಹುದ್ದೆಯ ಆಕಾಂಕ್ಷಿಗಳು ಲಕ್ಷಾಂತರ ಅಭ್ಯರ್ಥಿಗಳಿದ್ದಾರೆ. ವರ್ಷಕ್ಕೊಮ್ಮೆ ನಡೆಯಲಿರುವ ಪರೀಕ್ಷೆಯನ್ನು ಕೆಲವು ಆಕಾಂಕ್ಷಿಗಳಷ್ಟೇ ಅರ್ಹರಾಗಿರುತ್ತಾರೆ. ಇದಕ್ಕಾಗಿ ವರ್ಷಕ್ಕೆ ಎರಡು ಸಲ ಪರೀಕ್ಷೆಯಯನ್ನು ನಡೆಸಲು ಶಿಕ್ಷಕ ಉದ್ಯೋಗಾಕಾಂಕ್ಷಿಗಳು ಬೇಡಿಕೆಯಿಟ್ಟಿದ್ದರು. ಇದೀಗ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳು ಬೇಡಿಕೆ ನೆರವೆರುವುವ ಕಾಲ ಮುಂದಿನ ವರ್ಷದಿಂದ ಜಾರಿಯಾಗಲಿದೆ.

TET examination will be held on November 6,2022 says Education Minister BC Nagesh

ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದೇನು?
"ವರ್ಷಕ್ಕೆ ಎರಡು ಟಿಇಟಿ ಪರೀಕ್ಷೆ ನಡೆಸಬೇಕು ಎನ್ನುವ ಗುರಿ ಇದೆ. ಆದರೆ, ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಒಂದೇ ಟಿಇಟಿ ನಡೆಯಲಿದೆ. ಇದೇ ನವೆಂಬರ್ 6ರಂದು ಟಿಇಟಿ ಪರೀಕ್ಷೆ ನಡೆಯಲಿದೆ" ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

Recommended Video

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಎಷ್ಟು ತರಥಮ್ಯ ನಡಿಯತ್ತೆ ಗೊತ್ತಾ!! | OneIndia Kannada

English summary
There is good news for the aspirants who want to get a job in government schools and become a teacher. The Minister has promised to appoint 15 thousand teachers in order to overcome the shortage of teachers in schools. Along with this, the Education Minister said that the TET examination will be held on November 6, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X