ಜ.10 ರಂದು ಪ್ರಕಾಶಕರು ಹಾಗೂ ಪುಸ್ತಕ ವ್ಯಾಪಾರಿಗಳ ಪ್ರತಿಭಟನೆ
ಬೆಂಗಳೂರು, ಜನವರಿ 09: ಶಾಲಾ-ಕಾಲೇಜುಗಳಲ್ಲಿ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ವಿರೋಧಿಸಿ ರಾಜ್ಯದ ಪ್ರಕಾಶಕರು ಹಾಗೂ ಪುಸ್ತಕ ವ್ಯಾಪಾರಿಗಳು ಜ.10 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಜೆರಾಕ್ಸ್ ಹಾವಳಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರಕಾಶಕರು ಹಾಗೂ ಪುಸ್ತಕ ವ್ಯಾಪಾರಿಗಳ ಸಂಘ ಜ.10 ರಂದು ಬೆಳಗ್ಗೆ 10.30 ರಿಂದ 12.30ರವರೆಗೆ ಬೆಂಗಳೂರಿನ ಟೌನ್ ಹಾಲ್ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿದೆ.
ಶಾಲಾ-ಕಾಲೇಜುಗಳ ಪಠ್ಯ ಪುಸ್ತಕಗಳನ್ನು ಜೆರಾಕ್ಸ್ ಮಾಡುತ್ತಿರುವ ದಂಧೆ ಅವ್ಯಾಹತವಾವಾಗಿ ನಡೆಯುತ್ತಿದೆ. ಇದರಿಂದ ಪುಸ್ತಕ ಉದ್ಯಮಕ್ಕೆ ದೊಡ್ಡ ಮಟ್ಟದಲ್ಲಿ ಹೊಡೆತ ಬಿದ್ದಿದೆ ಎಂದು ಸಂಘದ ಪದಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ಪುಸ್ತಕಗಳು ಮತ್ತು ಇತರ ಲೇಖನ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳ ವಹಿವಾಟಿಗೆ ಧಕ್ಕೆಯಾಗಿದೆ ಎಂದು ಸಂಘ ಆರೋಪಿಸಿದೆ. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳ ಹಿತ ರಕ್ಷಿಸಬೇಕು ಎಂದು ಸಂಘ ಮನವಿ ಮಾಡಿದೆ. ನಗರದ ಟೌನ್ಹಾಲ್ ಬಳಿ ಪ್ರತಿಭಟನೆ ನಡೆಸುವ ಜೊತೆಗೆ ನಾಳೆ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಪುಸಕ್ತ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications