ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ.10 ರಂದು ಪ್ರಕಾಶಕರು ಹಾಗೂ ಪುಸ್ತಕ ವ್ಯಾಪಾರಿಗಳ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಜನವರಿ 09: ಶಾಲಾ-ಕಾಲೇಜುಗಳಲ್ಲಿ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ವಿರೋಧಿಸಿ ರಾಜ್ಯದ ಪ್ರಕಾಶಕರು ಹಾಗೂ ಪುಸ್ತಕ ವ್ಯಾಪಾರಿಗಳು ಜ.10 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಜೆರಾಕ್ಸ್ ಹಾವಳಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರಕಾಶಕರು ಹಾಗೂ ಪುಸ್ತಕ ವ್ಯಾಪಾರಿಗಳ ಸಂಘ ಜ.10 ರಂದು ಬೆಳಗ್ಗೆ 10.30 ರಿಂದ 12.30ರವರೆಗೆ ಬೆಂಗಳೂರಿನ ಟೌನ್ ಹಾಲ್ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿದೆ.

ವಾಣಿಜ್ಯ ಮೇಳದಿಂದ ಸಾಹಿತ್ಯಾಭಿಮಾನಿಗಳು ದೂರವಾಣಿಜ್ಯ ಮೇಳದಿಂದ ಸಾಹಿತ್ಯಾಭಿಮಾನಿಗಳು ದೂರ

ಶಾಲಾ-ಕಾಲೇಜುಗಳ ಪಠ್ಯ ಪುಸ್ತಕಗಳನ್ನು ಜೆರಾಕ್ಸ್ ಮಾಡುತ್ತಿರುವ ದಂಧೆ ಅವ್ಯಾಹತವಾವಾಗಿ ನಡೆಯುತ್ತಿದೆ. ಇದರಿಂದ ಪುಸ್ತಕ ಉದ್ಯಮಕ್ಕೆ ದೊಡ್ಡ ಮಟ್ಟದಲ್ಲಿ ಹೊಡೆತ ಬಿದ್ದಿದೆ ಎಂದು ಸಂಘದ ಪದಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Text book publishers agitation against study materials mafia

ಶಾಲಾ-ಕಾಲೇಜುಗಳಲ್ಲಿ ಪುಸ್ತಕಗಳು ಮತ್ತು ಇತರ ಲೇಖನ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳ ವಹಿವಾಟಿಗೆ ಧಕ್ಕೆಯಾಗಿದೆ ಎಂದು ಸಂಘ ಆರೋಪಿಸಿದೆ. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳ ಹಿತ ರಕ್ಷಿಸಬೇಕು ಎಂದು ಸಂಘ ಮನವಿ ಮಾಡಿದೆ. ನಗರದ ಟೌನ್‍ಹಾಲ್ ಬಳಿ ಪ್ರತಿಭಟನೆ ನಡೆಸುವ ಜೊತೆಗೆ ನಾಳೆ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಪುಸಕ್ತ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.

English summary
Karnataka state text book printers and publishers will hold agitation against study material sale in educationala institutions on January 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X