ತರುಣ್ ಸುಧೀರ್ ಸತ್ತಿಲ್ಲ ಕಣ್ರಿ, ಸುಳ್ಳು ಸುದ್ದಿ ಹಬ್ಬಿಸ್ಬೇಡಿ
ಬೆಂಗಳೂರು, ಡಿಸೆಂಬರ್ 03: ನಟ, ನಿರ್ದೇಶಕ ತರುಣ್ ಸುಧೀರ್, ಹಿರಿಯ ನಟ ಶಿವರಾಂ, ಹಿರಿಯ ನಟಿ, ಗಾಯಕಿ ಬಿ.ಜಯಶ್ರೀ ಹಾಗೂ ಗಾಯಕಿ ಎಸ್.ಜಾನಕಿ ಅವರು ನಿಧನ ಹೊಂದಿದ್ದಾರೆ ಸುಳ್ಳುಸುದ್ದಿ ಹರಡುತ್ತಿದೆ.
ದಯವಿಟ್ಟು ನಂಬಬೇಡಿ, ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಯೂಟ್ಯೂಬ್ ಚಾನೆಲ್ ಹಾಗೂ ವೆಬ್ ಸೈಟ್ ವಿರುದ್ಧ ತರುಣ್ ಸುಧೀರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
'ನಾನು ನಿಧನ ಹೊಂದಿರುವುದಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ 'ಕನ್ನಡ ಫ್ಯಾನ್ಸ್' ಯ್ಯೂಟ್ಯೂಬ್ ವೆಬ್ ಚಾನೆಲ್ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು' ಎಂದು ಕೋರಿ ಸಿನಿಮಾ ನಿರ್ದೇಶಕ ತರುಣ್ ಸುಧೀರ್ ಸೈಬರ್ ಕ್ರೈಂ ಪೊಲೀಸರಿಗೆ ಶನಿವಾರ ದೂರು ಕೊಟ್ಟಿದ್ದಾರೆ.
ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿರುವ ಸುಧೀರ್, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ಸ್ವಲ್ಪ ದಿನಗಳ ಹಿಂದೆ ಹಿರಿಯ ಗಾಯಕಿ ಎಸ್ ಜಾನಕಿ ಬಗ್ಗೆ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿತ್ತು. ನಂತರ ಹಿರಿಯ ನಟ ಶಿವರಾಮ್ ಅವರು ಮೃತಪಟ್ಟಿದ್ದಾರೆ ಎಂಬ ಸುದ್ದಿಯನ್ನು ಹಬ್ಬಿಸಲಾಗಿತ್ತು.
ಆಮೇಲೆ 'ನಿರ್ದೇಶಕ ತರುಣ್ ಸುಧೀರ್ ಇನ್ನಿಲ್ಲ!' ಎಂದು ಸುದ್ದಿ ವೆಬ್ ಸೈಟ್ ಹಾಗೂ ಯೂಟ್ಯೂಬ್ ಚಾನೆಲ್ ಗಳಲ್ಲಿ ಬಂದಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ತರುಣ್ ಸ್ನೇಹಿತರು ಹಾಗೂ ಕಲಾವಿದರು ಆತಂಕಗೊಂಡಿದ್ದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications