ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"3 ಪಕ್ಷಗಳು ಬೆಂಗಳೂರಿನ ಜನತೆಗೆ ನಯಾಪೈಸೆ ಅನುಕೂಲ ಮಾಡಿಲ್ಲ''

|
Google Oneindia Kannada News

ಬೆಂಗಳೂರು, ನವೆಂಬರ್ 11: ಆಮ್ ಆದ್ಮಿ ಪಕ್ಷವು ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದೆ. ನಾವು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುವುದಿಲ್ಲ, ಕಾಯಕದ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಹೇಳಿದರು.

ಬುಧವಾರ ಬೆಂಗಳೂರಿನ ಶಾಂತಿನಗರದ ಆಮ್ ಆದ್ಮಿ ಕ್ಲಿನಿಕ್ ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಸಂವಾದ ಮನೀಷ್ ಸಿಸೋಡಿಯಾ, ಬೆಂಗಳೂರಿನಲ್ಲಿ ಅಧಿಕಾರದಲ್ಲಿ ಇಲ್ಲದಿದ್ದರೂ ನಮ್ಮ ಸ್ವಯಂ ಸೇವಕರು ಸೇರಿ ಈ ಉಚಿತ ಕ್ಲಿನಿಕ್ ಪ್ರಾರಂಭಿಸಿದ್ದಾರೆ. ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ವಾರ್ಡ್ ನಲ್ಲಿ 3 ಕ್ಲಿನಿಕ್ ತೆರೆಯಲಾಗುವುದು ಎಂದರು.

ಬ್ಯಾಟರಾಯನಪುರ ಬೆಂಕಿ ಅವಘಡ: ಮಾಲೀಕ ಸೇರಿ ಇಬ್ಬರ ಸೆರೆಬ್ಯಾಟರಾಯನಪುರ ಬೆಂಕಿ ಅವಘಡ: ಮಾಲೀಕ ಸೇರಿ ಇಬ್ಬರ ಸೆರೆ

ಬಿಬಿಎಂಪಿಯಲ್ಲಿ ಅಧಿಕಾರ ಅನುಭವಿಸಿದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ಮೂರು ಪಕ್ಷಗಳು ಬೆಂಗಳೂರಿನ ಜನತೆಗೆ ನಯಾಪೈಸೆ ಅನುಕೂಲ ಮಾಡಿಲ್ಲ. ನಾವು ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ಬೆಂಗಳೂರಿನ ಚಿತ್ರಣವನ್ನೇ ಬದಲಾಯಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

The 3 Parties Have Not Benefited The People Of Bengaluru: Delhi DCM Manish Sisodia

ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮಾತನಾಡಿ, ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳನ್ನು ನೀಡದ ಸರ್ಕಾರ ಜನರಿಗೆ ಬೇಕಿಲ್ಲ. ನಾವು ನಡೆಸಿದ ಸಮೀಕ್ಷೆಯ ಪ್ರಕಾರ ಬೆಂಗಳೂರಿನ ಶೇ.70 ರಷ್ಟು ಜನ ದೆಹಲಿ ಮಾದರಿ ಆಮ್ ಆದ್ಮಿ ಸರ್ಕಾರ ಬೆಂಗಳೂರಿಗೆ ಬೇಕು ಎಂದು ಅಭಿಪ್ರಾಯ ತಿಳಿಸಿದ್ದಾರೆ, ಇದು ನಿಜವಾಗಲಿದೆ ಎಂದು ಹೇಳಿದರು.

The 3 Parties Have Not Benefited The People Of Bengaluru: Delhi DCM Manish Sisodia

ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ಆಮ್ ಆದ್ಮಿ ಕ್ಲಿನಿಕ್ ಉಸ್ತುವಾರಿ ರಾಣಿ ದೇಸಾಯಿ, ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ, ಮಾಧ್ಯಮ ಸಂಚಾಲಕ ಜಗದೀಶ್.ವಿ ಸದಂ, ಉಪಾಧ್ಯಕ್ಷ ಸುರೇಶ್ ರಾಥೋಡ್ ಇದ್ದರು.

ಧನ್ಯವಾದಗಳು

ಸೋಮಶೇಖರ್ ಸಿರಾ

ಮಾಧ್ಯಮ ಸಂಯೋಜಕ

ಆಮ್ ಆದ್ಮಿ ಪಕ್ಷ

English summary
Aam Aadmi Party will contest all the constituencies in the upcoming BBMP elections, said Delhi Deputy Chief Minister Manish Sisodia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X