ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು, ನವೆಂಬರ್ 28: ಬೆಂಗಳೂರು ವಿಶ್ವವಿದ್ಯಾಲಯದ ಪದವಿ (ಡಿಗ್ರಿ) ಪರೀಕ್ಷೆಗಳನ್ನು ಮುಂದೂಡಲಾಗಿದೆ.
ನವೆಂಬರ್ 30ರಿಂದ ಆರಂಭವಾಗಬೇಕಿದ್ದ ಬಿಎ, ಬಿಎಸ್ ಸಿ, ಬಿಕಾಂ, ಬಿಬಿಎಂ, ಬಿಸಿಎ ಪದವಿಯ 1, 3, 5ನೇ ಸೆಮಿಸ್ಟರ್ ಪರೀಕ್ಷೆ ಹಾಗೂ ಬಿಎಚ್ ಎಂ 1, 3, 5 ಹಾಗೂ 7ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಡಿಸೆಂಬರ್ 4ಕ್ಕೆ ಮುಂದೂಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಬಿ,ಕೆ ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಲೇಜುಗಳ ಪ್ರಾಂಶುಪಾಲರು ಸಂಬಂಧಪಟ್ಟ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಮತ್ತು ಶೇ .75 ರಷ್ಟು ಹಾಜರಾತಿಯನ್ನು ಪೂರೈಸುತ್ತಾರೆ ಎಂದು ಪ್ರಮಾಣೀಕರಿಸಬೇಕು. ಈ ಹಿನ್ನೆಯಲ್ಲಿ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬದಲಾದ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ವೆಬ್ ಸೈಟ್ www.bangaloreunivesity.ac.in ನಲ್ಲಿ ತಿಳಿದುಕೊಳ್ಳಬೇಕಾಗಿ ಹೇಳಿದರು.












Click it and Unblock the Notifications