ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಸರ್ಕಾರದ ಅತಿದೊಡ್ಡ ಭೂ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುತ್ತೇನೆ: ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 12 : ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರ್ಕಾರದ ಆಸ್ತಿಯನ್ನು ನುಂಗುವ ಮಹಾ ಹುನ್ನಾರ ನಡೆದಿದೆ. ರಾಜ್ಯ ಸರ್ಕಾರದ ಅತಿದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ, ದಾಖಲೆಗಳನ್ನು ಕೊಡಿ ಎಂದು ಪದೇಪದೆ ನನ್ನನ್ನು ಕೆಣಕಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು‌‌ ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರ್ಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕುಮಾರಸ್ವಾಮಿ ಗುಡುಗಿದರು. ಆ ಮೂಲಕ ಸದನ ಯಾವ ದಾಖಲೆ ಬಿಡುಗಡೆಯಾಗಲಿದೆ ಎಂಬ ಕುತೂಹಲ ಹೆಚ್ಚು ಮಾಡಿದ್ದಾರೆ.

 ದಾಖಲೆ ಹಿಡಿದು ಪರ್ಸೆಂಟೇಜ್ ಬಗ್ಗೆ ಮಾತನಾಡಿ

ದಾಖಲೆ ಹಿಡಿದು ಪರ್ಸೆಂಟೇಜ್ ಬಗ್ಗೆ ಮಾತನಾಡಿ

ನಾನು ಸುಖಾಸುಮ್ಮನೆ ಸದನ ಸಮಯವನ್ನು ಹಾಳು ಮಾಡಲಾರೆ. ಇವತ್ತಿನ ಜೆಡಿಎಲ್ ಪಿ ಸಭೆಯಲ್ಲಿಯೂ ಈ ವಿಷಯದ ಸೇರಿ ಹಲವಾರು ವಿಚಾರವಾಗಿ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದರಿಂದ ದೊಡ್ಡ ಮಟ್ಟದ ನಷ್ಟವಾಗಿದೆ. ಬೆಳೆ ಹಾನಿ, ಮನೆ ಕುಸಿತವೂ ಆಗಿದೆ. ಈ ಬಗ್ಗೆ ಸದನದಲ್ಲಿ ವಿವರವಾಗಿ ಚರ್ಚೆ ಮಾಡಲು ನಿರ್ಧಾರ ಮಾಡಲಾಗಿದೆ. ಪರ್ಸೆಂಟೇಜ್ ಬಗ್ಗೆ ರಾಜ್ಯದ ಉದ್ದಗಲಕ್ಕೂ ಬೀದಿಲಿ ಚರ್ಚೆ ನಡೆಯುತ್ತಿದೆ. ಅಧಿಕೃತ ವಿರೋಧ ಪಕ್ಷ, ಆಳುವ ಪಕ್ಷಗಳ ನಡುವೆ ರಾಜ್ಯದಲ್ಲಿ ನಡೆಯುತ್ತಿರುವ ಲೂಟಿ ಬಗ್ಗೆ ಬರೀ ಮಾತಿನಲ್ಲಿ ಪೈಪೋಟಿ ನಡೆಯುತ್ತಿದೆ. ನಿಖರವಾಗಿ ದಾಖಲೆಗಳು ಇದ್ದರೆ ಚರ್ಚೆ ಮಾಡಿ ಎಂದು ನಾನು ನಮ್ಮ ಶಾಸಕರಿಗೆ ತಿಳಿಸಿದ್ದೇನೆ. ನಾನು ಕೂಡ ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ಸುಖಾಸುಮ್ಮನೆ ಸದನದಲ್ಲಿ ಸಂತೆ ಭಾಷಣ ಮಾಡಿದರೆ ಪ್ರಯೋಜನವಿಲ್ಲ. ಸದನದ ಅಮೂಲ್ಯ ಸಮಯ ಸದುಪಯೋಗ ಮಾಡಿಕೊಳ್ಳುವಂತೆ ಶಾಸಕರಿಗೆ ಸಲಹೆ ನೀಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

ಇಂದು ಸಂತಾಪ ಚರ್ಚೆ ನಂತರ ನಾಳೆಯಿಂದ 9 ದಿನಗಳ ಕಾಲ ಅಧಿಕೃತ ವಿರೋಧ ಪಕ್ಷ ಚರ್ಚೆಗೆ ಯಾವ ರೀತಿ ಆದ್ಯತೆ ಕೊಡಲಿದೆ ಎಂಬುದನ್ನು ನೋಡುತ್ತೇವೆ. ಉತ್ತಮ ರೀತಿಯ ಕಲಾಪಕ್ಕೆ ಅವಕಾಶ ಯಾವ ರೀತಿ ಇರುತ್ತದೆ ಎಂದು ಗಮನಿಸುತ್ತೇವೆ. ಸುಮ್ಮನೆ ವಿಚಾರ ಇಲ್ಲದೆ, ದಾಖಲೆ ಇಲ್ಲದೇ ಮಾತಾಡೋದ್ರಿಂದ ಸದನದ ಕಲಾಪಕ್ಕೆ ಧಕ್ಕೆ ಆಗಲಿದೆ.

 8000 ಕೋಟಿ ಆಸ್ತಿ ಕಬಳಿಸುವ ಹುನ್ನಾರ

8000 ಕೋಟಿ ಆಸ್ತಿ ಕಬಳಿಸುವ ಹುನ್ನಾರ

ಇತ್ತೀಚೆಗೆ ನಾನು ಸದನದ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಯಾವುದಾದರೂ ಮುಖ್ಯ ವಿಚಾರ ಇದ್ದಾಗ ಭಾಗಿಯಾಗಿದ್ದೇನೆ. ನಾನು ಭಾಗಿಯಾದಾಗ ದಾಖಲೆ ಸಮೇತ ಮಾತನಾಡಿದ್ದೇನೆ. ಒಂದಿಷ್ಟು ಜನ ಹೇಳ್ತಾ ಇದ್ದಾರೆ, ಸದನದಲ್ಲಿ ಕುಮಾರಸ್ವಾಮಿ ಏನು ಮಾತಾಡಿ ಬಿಟ್ಟಾರು ಅಂತ. ಯಾರೋ ಸುಮ್ಮನೆ ನನ್ನನ್ನು ಸುಖಾಸುಮ್ಮನೆ ಅವರತ್ರ ನಾನು ಪಾಠ ಹೇಳಿಸಿಕೊಳ್ಳಬೇಕಿದೆ. ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡ್ತಾ ಇದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ ಎಂದು ಎಚ್‌ಡಿಕೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ‌ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೇ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರಿ ಹಗರಣ. ಸರ್ಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರೂಪಾಯಿ ಕಬಳಿಸುವ ಹುನ್ನಾರ ನಡೆದಿದೆ. 1957ನೇ ಇಸವಿಯಿಂದ ವಿಷಯ ಇದೆ. ಈ ಸರಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದರು.

 ತೃತೀಯ ರಂಗದ ಜೊತೆ ಕೈ ಜೋಡಿಸುವ ಚಿಂತನೆ

ತೃತೀಯ ರಂಗದ ಜೊತೆ ಕೈ ಜೋಡಿಸುವ ಚಿಂತನೆ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಜತೆಗಿನ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ತೃತೀಯ ರಂಗ ಅನ್ನೋದು ಪ್ರಶ್ನೆ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯ ಕನಸು ಎಂದರು. ಕೆಸಿಆರ್ ದೇಶದ ಸಮಸ್ಯೆ ಪರಿಹಾರಕ್ಕೆ ಅವರದ್ದೇ ಆದ ಒಂದು ಕಲ್ಪನೆ ಇಟ್ಟುಕೊಂಡಿದ್ದಾರೆ. ರೈತರ ವಿಚಾರದಲ್ಲಿ ಯಾವ ರೀತಿ ಸಹಾಯ ಆಗಬೇಕು, ರಾಷ್ಟ್ರ ಮಟ್ಟದಲ್ಲಿ ಯಾವ ರೀತಿ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ನಮ್ಮ ಬೆಂಬಲ ಕೋರಿದ್ದಾರೆ. ನಾವು ಅವರ ಜೊತೆ ಕೈ ಜೋಡಿಸುವ ನಿಟ್ಟಿನಲ್ಲಿ ಯೋಚಿಸಲಾಗಿದೆ ಎಚ್‌ಡಿಕೆ ಹೇಳಿದರು.

 ಮುಂದಿನ 25 ವರ್ಷಕ್ಕೆ ಮುಖ್ಯವಾದ ಚುನಾವಣೆ

ಮುಂದಿನ 25 ವರ್ಷಕ್ಕೆ ಮುಖ್ಯವಾದ ಚುನಾವಣೆ

ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು, ನಾನೇ ಅನೇಕ ಬಾರಿ ಹೇಳಿದ್ದೇನೆ. ಈ ಚುನಾವಣೆ ನಮಗೆ ನಿರ್ಣಾಯಕ. ಈ ಚುನಾವಣೆ ಮುಂದಿನ ದಿನಗಳಿಗೆ ಬುನಾದಿ ಇದ್ದಂಗೆ. ಮುಂದಿನ 25 ವರ್ಷಕ್ಕೆ ಏನು ಆಗಬೇಕು ಅನ್ನೋದು ಮುಖ್ಯ. ಅದಕ್ಕಾಗಿ ಈ ಚುನಾವಣೆ ತುಂಬಾ ಮುಖ್ಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು ಹಾಜರಿದ್ದರು.

English summary
Ex-Chief Minister, JDS Legislature Party leader HD Kumaraswamy has announced that he will expose the biggest scam of the state government in the assembly proceedings, with explosive information about the big scam of swallowing government property worth thousands of crores of rupees. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X