Bengaluru: ಮಲಗಿದ್ದ ಕರುವಿನ ಮೇಲೆ ಕಾರು ಹತ್ತಿಸಿ ಚಾಲಕನ ಕ್ರೌರ್ಯ, ದೃಶ್ಯ ಸೆರೆ
ಬೆಂಗಳೂರು, ಮಾರ್ಚ್ 18: ಬೆಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ಮಲಗುವ ಮನುಷ್ಯರಿಗೆ ರಕ್ಷಣೆ ಇಲ್ಲ. ಇನ್ನು ಪ್ರಾಣಿಗಳ ಪರಿಸ್ಥಿತಿ ಹೇಳ ತೀರದಾಗಿದೆ. ಕೆಲವು ವಾಹನ ಚಾಲಕರ ಅಜಾಗರೂಕ ಚಾಲನೆಯಿಂದ ರಸ್ತೆ ಬದಿಯಲ್ಲಿ ಮಲಗುವ ಬೀದಿ ನಾಯಿಗಳು, ಹಸರುಗಳು, ಕರುಗಳು ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿದೆ.
ಇಂತಹದ್ದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ನಡೆದಿದೆ. ಕಳೆದ ವಾರವೇ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಕೆಂಪು ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಕರುವಿನ ಮೇಲೆ ಕಾರು ಹರಿಸಿದ್ದಾನೆ. ಅಲ್ಲದೇ ಒಂದಿಷ್ಟು ದೂರ ಚಕ್ರದ ಕೆಳಗೆ ಸಿಲುಕಿದ್ದ ಕರುವನ್ನು ಎಳೆದೊಯ್ದಿದ್ದಾನೆ. ಬಳಿಕ ಕಾರು ಚಕ್ರದಿಂದ ಕರು ಬೇರ್ಪಟ್ಟ ಬಳಿಕ, ಸೌಜನ್ಯಕ್ಕೂ ಕಾರು ನಿಲ್ಲಿಸಿ ನೋಡದೇ, ಅಲ್ಲಿಂದ ಪರಾರಿಯಾಗಿದ್ದಾನೆ. ಈ ದೃಶ್ಯ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.
ಈ ಘಟನೆಯಲ್ಲಿ ಕರುವಿನ ಹೊಟ್ಟೆ, ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಈ ದೃಶ್ಯ ನೋಡಿ ಪ್ರತಿಯೊಬ್ಬರು ಕೂಡ ಕಾರು ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ
ಬೆಂಗಳೂರು: ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ನಗರತ್ಪೇಟೆಯಲ್ಲಿ ನಡೆದಿದೆ. ಘಟನೆಯ ಆರೋಪಿಗಳಾದ ಸುಲೇಮಾನ್, ಶಹನವಾಜ್ ಹಾಗೂ ರೋಹಿತ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ನಗರತ್ಪೇಟೆಯಲ್ಲಿರುವ ಮೊಬೈಲ್ ಅಂಡಿಯೊಂದರಲ್ಲಿ ಯುವಕ ಹಿಂದಿ ಭಾಷೆಯ ಭಜನೆ ಹಾಡುಗಳನ್ನು ಹಾಕಿ ಕೇಳುತ್ತಿದ್ದನ್ನು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು, 'ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ' ಎಂದಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದ್ದು, ನಂತರ ಆರು ಜನ ಯುವಕರು, ಅಂಗಡಿಯಲ್ಲಿದ್ದ ಯುವಕನ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.












Click it and Unblock the Notifications