ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ರಸ್ತೆಗಿಳಿದಿರುವ ಕ್ವಾರಂಟೈನ್‌ನಲ್ಲಿರುವ ಮಂದಿ: ಹೆಚ್ಚಿದ ಆತಂಕ

|
Google Oneindia Kannada News

ಬೆಂಗಳೂರು, ಏಪ್ರಿಲ್ 16: ಕೊರೊನಾ ಕ್ವಾರಂಟೈನ್‌ನಲ್ಲಿರುವ ಜನರು ಆರಾಮವಾಗಿ ಗಾಂಧಿನಗರದ ರಸ್ತೆಗಳಲ್ಲಿ ಓಡಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಆತಂಕ ಸೃಷ್ಟಿಸಿದೆ.

ಕೊರೊನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವವರು ರಸ್ತೆಯಲ್ಲಿ ಓಡಾಡುತ್ತಿರುವುದು ತಿಳಿದುಬಂದಿದೆ. ಕೊರೊನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವ 25 ಮಂದಿಯನ್ನು ಗಾಂಧಿನಗರದ ಗೋಲ್ಡನ್ ರೆಸಿಡೆನ್ಸಿ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

2022ರವರೆಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಮತ್ತೆ ಆಪತ್ತು 2022ರವರೆಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಮತ್ತೆ ಆಪತ್ತು

ಕ್ವಾರಂಟೈನ್‌ಗೆ ಒಳಪಟ್ಟವರು ಹೋಟೆಲ್‌ನಿಂದ ಹೊರಬಂದು ಸುತ್ತಮುತ್ತಲ ಪ್ರದೇಶಗಳಲ್ಲಿ ಓಡಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿ ಸುತ್ತಮುತ್ತಲ ನಿವಾಸಿಗಳು ಆತಂಕದಲ್ಲಿದ್ದಾರೆ.

The Corona Suspected Get Out From The Hotel And Walk Down The Street

ಹೋಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿರಬೇಕಾದವರು ಹೋಟೆಲ್‌ನಿಂದ ಹೊರಬರುತ್ತಿದ್ದಾರೆ. ಅವರನ್ನು ನಿಯಂತ್ರಿಸುವವರು ಯಾರೂ ಇಲ್ಲ.ನಗರದ ಹೊರ ವಲಯದಲ್ಲಿ ಸಾಕಷ್ಟು ಹೋಟೆಲ್‌ಗಳಿವೆ.

ಆ ಹೋಟೆಲ್‌ಗಳನ್ನು ಬಿಟ್ಟು ವಸತಿ ಪ್ರದೇಶದ ಹೋಟೆಲ್‌ಗಳಲ್ಲಿ ಶಂಕಿತ ಸೋಂಕಿತರನ್ನು ಕರೆದುಕೊಂಡು ಹೋಗಿ ಇರಿಸಿರುವುದು ಭಯವನ್ನು ಮತ್ತಷ್ಟು ಹೆಚ್ಚಿಸಿದೆ.

ಒನ್‌ಇಂಡಿಯಾ ರಿಯಾಲಿಟಿ ಚೆಕ್: ಕೇಳುವರಿಲ್ಲ ಕಾರ್ಮಿಕರ ಗೋಳುಒನ್‌ಇಂಡಿಯಾ ರಿಯಾಲಿಟಿ ಚೆಕ್: ಕೇಳುವರಿಲ್ಲ ಕಾರ್ಮಿಕರ ಗೋಳು

ಕ್ವಾರಂಟೈನ್ ನಿಂದ ಹೊರ ಬರುವಂತಿಲ್ಲ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಲಯ ವಿಶೇಷ ಆಯುಕ್ತ ಬಸವರಾಜ್ ತಿಳಿಸಿದ್ದಾರೆ.ಭಾರತದಲ್ಲಿ ಕೊರೊನಾ ಹೊಸ ಪ್ರಕರಣಗಳು 12ಸಾವಿರ ಗಡಿ ದಾಟಿದೆ. ಕರ್ನಾಟಕದಲ್ಲಿ ಒಂದೇ ದಿನ 19 ಪಾಸಿಟಿವ್ ಪ್ರಕರನಗಳು ದಾಖಲಾಗಿವೆ. ಸೋಂಕಿತ ಪ್ರಕರಣಗಳು 279ಕ್ಕೆ ಏರಿಕೆಯಾಗಿದೆ.

English summary
There are reports that people in the Corona Quarantine are comfortably walking on the streets of Gandhinagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X