Greater Bangaluru: ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ಪಾಲಿಕೆ ರಚನೆಗೆ ಕಾರಣ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಜುಲೈ 29: ನಾವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಈ ವಿಚಾರವಾಗಿ ವಿರೋಧ ಪಕ್ಷಗಳ ನಾಯಕರ ಅಭಿಪ್ರಾಯವನ್ನು ಪಡೆದಿದ್ದೇವೆ. ಪಾಲಿಕೆ ಚುನಾವಣೆ ಕುರಿತಾಗಿ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಬೇಕಾಗಿದೆ. ಬೆಂಗಳೂರು ಹಾಗೂ ನಾಗರೀಕರ ಹಿತಕ್ಕಾಗಿ ಪಾಲಿಕೆ ವಿಭಜನೆ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್‌ ಮಾತನಾಡಿ, ನಾವು ಭೌಗೋಳಿಕ ಹಾಗೂ ಆಡಳಿತ, ಆರ್ಥಿಕತೆ ಹಾಗೂ ಭವಿಷ್ಯದಲ್ಲಿ ಬೆಂಗಳೂರಿನ ವಿಸ್ತರಣೆ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಮಾಡಿದ್ದೇವೆ. ಬಿಜೆಪಿಯವರು ರಾಜಕೀಯ ಕಾರಣಗಳಿಗೆ ನಮ್ಮನ್ನು ಟೀಕೆ ಮಾಡುತ್ತಾರೆ, ಮಾಡಲಿ. ಸಾರ್ವಜನಿಕವಾಗಿ ಟೀಕೆ ಮಾಡುತ್ತಾರೆ, ಮಾಡಲಿ. ನಾವು ಇಡೀ ಬೆಂಗಳೂರು ಹಾಗೂ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

The Corporation Has Been Divided For The Benefit Of Bengaluru And Its Citizens DK Shivakumar

ಮುಖ್ಯಮಂತ್ರಿಗಳು ನಿಮಗೆ ಆಹ್ವಾನ ನೀಡದೆ ಶಾಸಕರ ಸಭೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ. ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ ಎಂದು ಮರುಪ್ರಶ್ನಿಸಿದರು.

ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದೆ ಎನ್ನುವ ಬಿಜೆಪಿ ಟೀಕೆಯ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ. ಅವರ ಮಧ್ಯೆಯೇ ಸಾಕಷ್ಟು ತಿಕ್ಕಾಟಗಳು ನಡೆಯುತ್ತಿವೆ. ಮೊದಲು ಅವರ ಸಮಸ್ಯೆಗಳನ್ನು ಸರಿಮಾಡಿಕೊಳ್ಳಲಿ ಎಂದರು.

ಬೆಂಗಳೂರು ನಗರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಬಿಎ ಸಮಿತಿ ಅಧ್ಯಕ್ಷ, ಶಾಸಕ ರಿಜ್ವಾನ್ ಅರ್ಷದ್, ಜಿ ಬಿ ಎ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಡಾ ಮಹೇಶ್ವರ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗೀಲ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+