ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇವಿ ವಾಹನಗಳ ವೆಚ್ಚ ಜನರಿಗೆ ನಿಲುಕಲಿ: ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜು. 1: "ಎಲೆಕ್ಟ್ರಿಕ್ ವಾಹನದ ವೆಚ್ಚ ಜನಸಾಮಾನ್ಯರಿಗೆ ನಿಲುಕುವಂತಿರಬೇಕು, ಆಗ ಮಾತ್ರ ಅದರ ಬಳಕೆ ಹೆಚ್ಚಾಗುತ್ತದೆ. ಈ ಬಗ್ಗೆ ಉತ್ಪಾದಕರು ಗಮನಹರಿಸಬೇಕು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಬೆಸ್ಕಾಂ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಇವಿ (ಎಲೆಕ್ಟ್ರಿಕ್ ವೆಹಿಕಲ್) ಅಭಿಯಾನ 2022 ಕಾರ್ಯಕ್ರಮ ಹಾಗೂ 152 ಇವಿ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಮುಂದಿನ ಆರು ತಿಂಗಳಲ್ಲಿ 140 ಇವಿ ಚಾರ್ಜರ್ ಅಳವಡಿಕೆ ಬೆಂಗಳೂರಿನಲ್ಲಿ ಮುಂದಿನ ಆರು ತಿಂಗಳಲ್ಲಿ 140 ಇವಿ ಚಾರ್ಜರ್ ಅಳವಡಿಕೆ

"ಇಂದು ಉತ್ತಮ ಬ್ಯಾಟರಿ ಮತ್ತು ಮೋಟಾರ್ ಅಗತ್ಯವಿದೆ. ಇವುಗಳನ್ನು ಆತ್ಮನಿರ್ಭರ್ ಭಾರತದಡಿಯಲ್ಲಿ ನಮ್ಮ ಯುವಕರೇ ಉತ್ಪಾದಿಸುತ್ತಿರುವುದು ಹೆಮ್ಮೆಯ ವಿಚಾರ. ಇವಿ ವಾಹನಗಳಿಗೆ ಅಗತ್ಯವಿರುವ ಚಾರ್ಜರ್‌ಗಳನ್ನು ನಮ್ಮ ಸರ್ಕಾರ ಇವಿ ಪಾಲಿಸಿ ಮಾಡುವ ಮೂಲಕ ಬೆಸ್ಕಾಂನ್ನು ನೋಡಲ್ ಏಜೆನ್ಸಿ ಮಾಡಿ ಬೆಂಗಳೂರಿನಲ್ಲಿ ಚಾರ್ಜಿಂಗ್ ಸ್ಟೇಷನ್‍ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ. ಇನ್ನು ಹೆಚ್ಚಿನ ಚಾರ್ಜಿಂಗ್ ಸ್ಟೇಷನ್‍ಗಳ ಅವಶ್ಯಕತೆ ಇದೆ. ಅವುಗಳನ್ನು ಬೆಸ್ಕಾಂ ವತಿಯಿಂದ ಸ್ಥಾಪಿಸಲಾಗುವುದು ಎಂಬ ವಿಶ್ವಾಸವಿದೆ. ಬ್ಯಾಟರಿ ಸ್ವಾಪಿಂಗ್ ಅತ್ಯಂತ ಯಶಸ್ವಿ ಮಾಡಬೇಕಿದೆ. ಮುಂಬರುವ ದಿನಗಳಲ್ಲಿ ಬ್ಯಾಟರಿ ಸ್ವಾಪಿಂಗ್‌ಗೆ ಅತಿ ಹೆಚ್ಚಿನ ಮಹತ್ವವನ್ನು ನಾವೆಲ್ಲರೂ ನೀಡಬೇಕಿದೆ" ಎಂದರು.

ದೆಹಲಿಯಲ್ಲಿ ಇವಿ ಬಸ್: ಬ್ಯಾಟರಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಸಿದ್ಧತೆ ದೆಹಲಿಯಲ್ಲಿ ಇವಿ ಬಸ್: ಬ್ಯಾಟರಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಸಿದ್ಧತೆ

 ಇಂಗಾಲಯುಕ್ತ ಹೊಗೆ ಪರಿಸರಕ್ಕೆ ದೊಡ್ಡ ಹಾನಿ

ಇಂಗಾಲಯುಕ್ತ ಹೊಗೆ ಪರಿಸರಕ್ಕೆ ದೊಡ್ಡ ಹಾನಿ

ಜೈವಿಕ ಇಂಧನ ಬಳಕೆಯನ್ನು ಕಡಿಮೆ ಮಾಡಬೇಕೆಂದು ಸುಮಾರು 30 ವರ್ಷಗಳ ಹಿಂದೆ ಸಂಶೋಧನೆಗಳು ಪ್ರಾರಂಭವಾಗಿ ಇಂದು ಹಲವಾರು ಆಯಾಮಗಳಲ್ಲಿ ಯಶಸ್ಸು ಕಂಡಿದೆ. ನಮ್ಮ ಸಾರಿಗೆ ವ್ಯವಸ್ಥೆಯಲ್ಲಿ ಸ್ಕೂಟರ್‌ನಿಂದ ಹಿಡಿದು ಭಾರೀ ವಾಹನಗಳು ಹೊರಚೆಲ್ಲುವ ಇಂಗಾಲಯುಕ್ತ ಹೊಗೆ ಪರಿಸರಕ್ಕೆ ದೊಡ್ಡ ಹಾನಿ ಉಂಟುಮಾಡುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ ಜೈವಿಕ ಇಂಧನ ಮುಕ್ತಾಯವಾಗಲಿದೆ. ಆದ್ದರಿಂದ ನವೀಕರಿಸಬಹುದಾದ ಇಂಧನಕ್ಕೆ ನಾವೆಲ್ಲರೂ ಒತ್ತು ಕೊಡಬೇಕಾದ ಅಗತ್ಯ ಮತ್ತು ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಪಾತ್ರ ವಹಿಸಲಿದೆ. ಹಲವಾರು ಸಂಶೋಧನೆಗಳಿಂದ ದೊಡ್ಡ ಪ್ರಮಾಣದಲ್ಲಿ ದ್ವಿಚಕ್ರ ವಾಹನಗಳನ್ನು ಇವಿಗೆ ಜೋಡಣೆ ಮಾಡಲು ಸಾಧ್ಯವಾಗಿದೆ ಎಂದರು.

 ಇವಿ ಬಸ್ಸುಗಳ ಬಗ್ಗೆ ನಿರ್ಣಯ

ಇವಿ ಬಸ್ಸುಗಳ ಬಗ್ಗೆ ನಿರ್ಣಯ

ಇವಿ ಬಸ್ಸುಗಳ ಬಗ್ಗೆ ಈಗಾಗಲೇ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಇಂದೇ ಕೆಲವು ನಿರ್ಣಯಗಳು ಆಗುತ್ತದೆ. ಬಿಎಂಟಿಸಿಗೆ ಅತಿ ಹೆಚ್ಚಿನ ಇವಿ ಬಸ್ಸುಗಳನ್ನು ಜೋಡಣೆ ಮಾಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಮುಂದಿನ ದಿನಗಳಲ್ಲಿ ಮಲ್ಟಿ ಆಕ್ಸೆಲ್ ಟ್ರಕ್‌ಗಳೂ ಎಲೆಕ್ಟ್ರಿಕ್ ಆಗುವ ಸಾಧ್ಯತೆಗಳಿವೆ ಅದರಲ್ಲಿ ಸಂಶೋಧನೆ ನಡೆದಿದ್ದು ಇನ್ನು ಕೆಲವೇ ಕೆಲವು ದಿನಗಳಲ್ಲಿ ಅದೂ ಕೂಡ ಸಾಧ್ಯವಾಗಲಿದೆ ಎನ್ನುವ ವಿಶ್ವಾಸವಿದೆ ಎಂದರು.

 ಕೇಂದ್ರ ಸರ್ಕಾರದ ನೆರವಿನಿಂದ ಯೋಜನೆ

ಕೇಂದ್ರ ಸರ್ಕಾರದ ನೆರವಿನಿಂದ ಯೋಜನೆ

ಸೌರಶಕ್ತಿಯ ಸಂಗ್ರಹ ಹೇಗೆ ಮಾಡಬೇಕೆನ್ನುವ ಸವಾಲು ನಮ್ಮ ಮುಂದಿದೆ. ಅದಕ್ಕೆ ಪಿಎಸ್‍ಪಿ ಯೋಜನೆಗಳನ್ನು ಕೇಂದ್ರ ಸರ್ಕಾರದ ನೆರವಿನಿಂದ ಕೈಗೊಳ್ಳಲಾಗಿದೆ. 2-3 ಪಿ.ಎಸ್‍ಪಿ ಘಟಕಗಳು ಕರ್ನಾಟಕದಲ್ಲಿ ತಲೆ ಎತ್ತಲಿವೆ. ಸೌರಶಕ್ತಿಯ ಸಂಗ್ರಹ ಹಾಗೂ ಮರುಬಳಕೆಗೆ ಇದು ಉತ್ತಮವಾದ ಸಾಧನವಾಗಲಿದೆ. ಹೈಡ್ರೋಜನ್ ಇಂಧನವನ್ನು ತಯಾರು ಮಾಡಲು ಈಗಾಗಲೇ ಎರಡು ಕಂಪನಿಗಳೊಂದಿಗೆ ಒಪ್ಪಂದ ಮಡಿಕೊಳ್ಳಲಾಗಿದೆ. ಹೈಡ್ರೋಜನ್ ಇಂಧನ ನವೀಕರಿಸಬಹುದಾದ ಇಂಧನಗಳ ಪೈಕಿ ಅತ್ಯುತ್ತಮವಾದ್ದದ್ದು. ಅದಾದರೆ ನಮ್ಮ ದೇಶದ ಇಂಧನವನ್ನು ಉಳಿಸಬಹುದು ಎಂದು ತಿಳಿಸಿದರು.

 ಪ್ರಗತಿಪರ ಚಿಂತನೆ ಹೊಂದಿರುವ ರಾಜ್ಯ ಕರ್ನಾಟಕ

ಪ್ರಗತಿಪರ ಚಿಂತನೆ ಹೊಂದಿರುವ ರಾಜ್ಯ ಕರ್ನಾಟಕ

ಕರ್ನಾಟಕ ಪ್ರಗತಿಪರ ಚಿಂತನೆ ಹೊಂದಿರುವ ರಾಜ್ಯ. ರಾಜ್ಯದಲ್ಲಿ ನಡೆಯುವ ಸಂಶೋಧನೆಗಳ ಲಾಭವನ್ನು ಇಡೀ ದೇಶಕ್ಕೆ ನೀಡಬಹುದಾಗಿದೆ. ಭಾರತದ ಶ್ರೇಷ್ಠ ತಂತ್ರಜ್ಞಾನ ತಳಹದಿ ಕರ್ನಾಟಕ ರಾಜ್ಯವಾಗಿದೆ. ಆಧುನಿಕ ತಂತ್ರಜ್ಞಾನ, ಕೌಶಲ್ಯಭರಿತ ಮಾನವ ಸಂಪನ್ಮೂಲ ರಾಜ್ಯದಲ್ಲಿದೆ. ಇವೆಲ್ಲವನ್ನೂ ಬಳಸಿಕೊಂಡು ಕರ್ನಾಟಕವನ್ನು ಎಲ್ಲ ರಂಗಗಳಲ್ಲಿ ಅಭಿವೃದ್ಧಿಗೊಳಿಸುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ನವೀಕರಿಸಬಹುದಾದ ಇಂಧನ ನೀತಿ, ಇವಿ ನೀತಿ, ಹೈಡ್ರೋಜನ ಇಂಧನ ನೀತಿ, ಸೆಮಿಕಂಡಕ್ಟರ್, ಏರೋಸ್ಪೇಸ್ ನೀತಿ ರೂಪಿಸಿದೆ. ಈ ಕ್ಷೇತ್ರಗಳಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

English summary
The cost of an electric vehicle must be affordable for the masses, than only it use will increase said Chief Minister Basavaraja Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X