ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಪ್ರತಿ ಮನೆಗೂ ಬರಲಿದೆ ಕೊರೊನಾ ಪರೀಕ್ಷಾ ವಿಶೇಷ ತಂಡ"

|
Google Oneindia Kannada News

ಬೆಂಗಳೂರು, ಮೇ 24: ರಾಜ್ಯದ ಗ್ರಾಮೀಣ‌ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕಿನ‌ ಲಕ್ಷಣವಿರುವವರನ್ನು ಪ್ರತಿ ಮನೆ-ಮನೆಗೂ ಹೋಗಿ ಪರೀಕ್ಷಿಸಲು ವಿಶೇಷ ತಂಡ ರಚಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್.ಅಶೋಕ ತಿಳಿಸಿದ್ದಾರೆ.

ಈ ಬಗ್ಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ತಿಳಿಸಿದ ಸಚಿವರು, ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಅನುಸರಿಸುತ್ತಿದ್ದರೂ, ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ ಎಂದರು.

ಕೊರೊನಾ 3ನೇ ಅಲೆ ಭೀತಿ; ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಆಸ್ಪತ್ರೆ ಹೆಚ್ಚಳಕೊರೊನಾ 3ನೇ ಅಲೆ ಭೀತಿ; ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಆಸ್ಪತ್ರೆ ಹೆಚ್ಚಳ

ಅದೇ ರೀತಿ ಗ್ರಾಮೀಣ ಜನರು ಕೂಡಾ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹಾಗೆಯೇ ಪರೀಕ್ಷಾ ಕೇಂದ್ರಗಳ ಸಂಖ್ಯೆಯು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಹೀಗಾಗಿ ವೈದ್ಯರು, ಎಎನ್‌ಎಮ್‌ಗಳು, ಅಂಗನವಾಡಿ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಪರೀಕ್ಷೆ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

The Covid-19 Test Special Team Will Coming To Every Home: Minister R Ashok

Recommended Video

ಬೆಡ್ ಸಿಗದ ಕಾರಣ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ Dr Pushpa Amarnath!! | Oneindia Kannada

"ಈಗಾಗಲೇ ಮೊಬೈಲ್ ಕ್ಲಿನಿಕ್‌ ಗ್ರಾಮಗಳಿಗೆ ಭೇಟಿ ನೀಡಿದ್ದು, ಅಂತಿಮ ವರ್ಷದಲ್ಲಿರುವ ವೈದ್ಯಕೀಯ, ಬಿ.ಎಸ್ಸಿ ನರ್ಸಿಂಗ್, ಬಿಡಿಎಸ್ ವಿದ್ಯಾರ್ಥಿಗಳನ್ನು ಇದಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ" ಎಂದು ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು.

English summary
Revenue Minister R. Ashok said a special team would be formed to test the Covid-19 in rural and urban areas of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X