'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
ಬೆಂಗಳೂರು, ಏಪ್ರಿಲ್ 19: ತಮಿಳುನಾಡಿಗೆ ನೀರು ಬಿಟ್ಟು ಕಾವೇರಿ ಮಾತೆಯ 'ತುಂಬಿದ ಕೊಡ' ಬರಿದು ಮಾಡಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟವರು ನೀವು ಎಂದು ಕರ್ನಾಟಕ ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು ನೀಡಿದೆ.
ಕರ್ನಾಟಕಕ್ಕೆ ಪ್ರಧಾನಿ ಮೋದಿ ಸರ್ಕಾರ ಕೊಟ್ಟಿದ್ದು 'ಚೊಂಬು' ಎಂದು ಪತ್ರಿಕೆಗಳಲ್ಲಿ ಜಾಹೀತಾರು ನೀಡುವು ಮೂಲಕ ಕರ್ನಾಟಕ ಕಾಂಗ್ರೆಸ್‌ಗೆ ನೇರ ದಾಳಿ ಮಾಡಿತ್ತು. ಕಾಂಗ್ರೆಸ್ ಜಾಹೀರಾತಿನ ಫೋಟೋ ಎಲ್ಲೆಡೆ ವೈರಲ್ ಆಗಿತ್ತು. ಇದಕ್ಕೆ ತಿರುಗೇಟು ಕೊಟ್ಟು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದಾರೆ.

ಬೆಳೆ ಒಣಗಿಸಿ ರೈತರಿಗೆ ಚೊಂಬು ಕೊಟ್ಟವರು ನೀವು ಎಂದು ಹೇಳುವ ಮೂಲಕ ಕಾವೇರಿ ನೀರು ರಕ್ಷಿಸದೇ ತಮಿಳುನಾಡಿಗೆ ಹರಿ ಬಿಟ್ಟಿದ್ದನ್ನು ನೆನಪಿಸಿದರು. ಇದ್ದ ಬದ್ದ ಹಣವನ್ನೆಲ್ಲ ಖಾಲಿಮಾಡಿಕೊಂಡು ಪರಿಶಿಷ್ಟರ/ ಹಿಂದುಳಿದವರ ಕಲ್ಯಾಣಕ್ಕೆ ಮೀಸಲಾದ ಹಣವನ್ನೂ ವರ್ಗಾಯಿಸಿಕೊಂಡು ಶೋಷಿತರಿಗೆ ಚೊಂಬು ಕೊಟ್ಟವರು ನೀವು ಎಂದು ಹೇಳಿದರು.
ಕಾವೇರಿ ಕುಡಿಯುವ ನೀರೂ ಒದಗಿಸಲಾರದೇ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಅಲೆದಾಡುವ ಸ್ಥಿತಿ ತಂದವರು ಕಾಂಗ್ರೆಸ್‌ನವರು. ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಯುವನಿಧಿ ಹೆಸರಲ್ಲಿ ಭರವಸೆ ನೀಡಿ ಖಾಲಿ ಚೊಂಬು ಕೊಟ್ಟವರು ನೀವು ಎಂದು ಬಿವೈ ವಿಜಯೇಂದ್ರ ದೂರಿದರು.

ದೇಶದಲ್ಲಿ ಕಾಣದ 'ಕೈ' ಸ್ಥಿತಿ ತಲುಪುತ್ತಿರುವ ನಿಮಗೆ ಕೆಲವೇ ದಿನಗಳಲ್ಲಿ ಜನರೇ ನೀಡಲಿದ್ದಾರೆ 'ಖಾಲಿ ಚೊಂಬು' ಎಂದು ಅವರು ಚುನಾವಣೆ ಸೋಲು ಮತ್ತು ಈ ಭಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನ ಬುದ್ಧಿ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಜಾಹೀರಾತುವಿನಲ್ಲಿ ಏನಿದೆ?
ಕಾಂಗ್ರೆಸ್ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಏನು ಕೊಡುಗೆ ನೀಡಿಲ್ಲ. ಕರ್ನಾಟಕಕ್ಕೆ ನೀಡಿದ್ದು ಚೊಂಬು. ಎಲ್ಲರ ಖಾತೆಗೆ 15 ಲಕ್ಷ ಹಣ ಹಾಕುವ ಚೊಂಬು, ಬರ/ನೆರೆ ಪರಿಹಾರದ ಚೊಂಬು, ತೆರಿಗೆ ಹಂಚಿಕೆಯಲ್ಲಿ ಚೊಂಬು, ರೈತರ ಆದಾಯ ಡಬಲ್ ಮಾಡುವ ಚೊಂಬು, 7 ಜನ ಬಿಜೆಪಿ/ಜೆಡಿಎಸ್ ಸಂಸದರು ರಾಜ್ಯಕ್ಕೆ ನೀಡಿದ ಕೊಡುಗೆ ಕೇವಲ ಚೊಂಬು, ಈ ಚುನಾವಣೆಯಲ್ಲಿ ಬಿಜೆಪಿಗೆ ನೀಡೋಣ ಇದೇ ಚೊಂಬು, ಕನ್ನಡಿಗರಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್ ಚೊಂಬಿನ ಫೋಟೋ ಸಮೇತ ಜಾಹೀರಾತು ನೀಡಿತ್ತು.
ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಮಧ್ಯೆ ಕೆಸರೆರಚಾಟಕ್ಕೆ ಚೊಂಬು ಭಾರಿ ಸದ್ದು ಮಾಡುತ್ತಿದೆ. ಆರೋಪ, ಪ್ರತ್ಯಾರೋಪಗಳಿಗೆ, ಟೀಕೆಗಳಿಗೆ ರಣಕಣ ಸಾಕ್ಷಿಯಾಗಿದೆ. ಈ ಮೂಲಕ ಕರ್ನಾಟಕಕ್ಕೆ ರಾಜ್ಯದ ಅನುದಾನ ಹಂಚಿಕೆ ಕುರಿತು ಬಿಜೆಪಿ-ಕಾಂಗ್ರೆಸ್ ಮಧ್ಯೆ ವಾಗ್ವಾದ ಮುಂದುವರಿದಿದೆ.












Click it and Unblock the Notifications