ಭಾರತದಲ್ಲೇ ಮೊದಲ ಬಾರಿಗೆ 'ಕರ್ನಾಟಕ ವಿಷನ್' ವರದಿ ಪ್ರಕಟ

ಬೆಂಗಳೂರು ಆಗಸ್ಟ್ 24: ಭಾರತದಲ್ಲೇ ಮೊದಲ ಭಾರಿಗೆ ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿ ಹಿನ್ನೆಲೆಯಲ್ಲಿ 'ಕರ್ನಾಟಕ ವಿಷನ್ ವರದಿ' ಹೊರತರಲಾಗಿದ್ದು, ಈ ದಿನ ಐತಿಹಾಸಿಕವಾದದ್ದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬಣ್ಣಿಸಿದ್ದಾರೆ.

ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ 'ಕರ್ನಾಟಕ ವಿಷನ್ ವರದಿ' ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಅವರು, ಜನರು ವೈದ್ಯರ ಕೈ ಗುಣವನ್ನು ನಂಬುತ್ತಾರೆ. ರೋಗಿಗಳಿಗೆ ವೈದ್ಯರ ಮೇಲೆ ಇರುವ ನಂಬಿಕೆ, ಪ್ರೀತಿಯ ಬಿಂಬವೇ ಈ ವರದಿ ಎನ್ನಬಹುದು. ಅಂತೆಯೇ ವೈದ್ಯರು ಹಾಗೂ ರೋಗಿಗಳ ನಡುವಿನ ಬಾಂಧವ್ಯವನ್ನು ಇದು ಸೂಚಿಸುತ್ತದೆ. ದೇವರು ಎಲ್ಲಾ ಕಡೆ ಇರಲು ಸಾಧ್ಯವಿಲ್ಲವೆಂದೇ ವೈದ್ಯರನ್ನು ಸೃಷ್ಟಿಸಲಾಗಿದೆ ಎಂದೂ ಹೇಳಲಾಗುತ್ತದೆ. ಆ ಮಟ್ಟಿಗೆ ಸಮಾಜ ವೈದ್ಯರನ್ನು ಗೌರವಿಸುತ್ತದೆ ಎಂದು ವಿವರಿಸಿದರು.

ವೈದ್ಯಕೀಯ ಹಲವು ಅಂಶ ಒಳಗೊಂಡ ವರದಿ

ವೈದ್ಯಕೀಯ ಹಲವು ಅಂಶ ಒಳಗೊಂಡ ವರದಿ

ಡಾ.ಗುರುರಾಜ್‌ ನೇತೃತ್ವದ ತಂಡ ಒಂದು ವರ್ಷ ಕಾಲ ಅಧ್ಯಯನಗಳು, ಸಂಶೋಧನೆಗಳು, ಸಭೆಗಳನ್ನು ನಡೆಸಿ ಈ 'ಕರ್ನಾಟಕ ವಿಷನ್ ವರದಿ' ರೂಪಿಸಿದೆ. 250ಕ್ಕೂ ಅಧಿಕ ತಜ್ಞರು ಈ ವರದಿ ರೂಪಿಸಲು ಸಲಹೆ ನೀಡಿದ್ದಾರೆ. ಬೇರೆ ದೇಶಗಳ ಉತ್ತಮ ಕ್ರಮಗಳನ್ನು ಕೂಡ ಇಲ್ಲಿ ದಾಖಲಿಸಲಾಗಿದೆ. ಟೆಲಿ ಮೆಡಿಸಿನ್‌, ಗ್ರಾಮೀಣ ಪ್ರದೇಶದಿಂದ ಆರಂಭವಾಗಿ ತೃತೀಯ ಹಂತದ ಆರೋಗ್ಯ ಸೇವೆ ಸೇರಿದಂತೆ ಅನೇಕ ಅಂಶಗಳನ್ನು ಈ ವರದಿ ಒಳಗೊಂಡಿದೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಕೊರೊನಾ ಲಸಿಕೆ 3ನೇ ಡೋಸ್ ಶೇ.100 ಸಾಧನೆಗೆ ಶ್ರಮಿಸಿ

ಕೊರೊನಾ ಲಸಿಕೆ 3ನೇ ಡೋಸ್ ಶೇ.100 ಸಾಧನೆಗೆ ಶ್ರಮಿಸಿ

ಕಳೆದ ಒಂದು ನೂರು ವರ್ಷಗಳಲ್ಲಿ ಎಂದೂ ಕಾಣದ ಕೋವಿಡ್ ಸಾಂಕ್ರಾಮಿಕವನ್ನು ನಾವೆಲ್ಲರೂ ಎದುರಿಸಿದ್ದೇವೆ. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ಸು ಕಾಣಲು ವೈದ್ಯರೇ ಪ್ರಮುಖ ಕಾರಣರಾಗಿದ್ದಾರೆ. ಕೋವಿಡ್ ಲಸಿಕಾಕರಣದಲ್ಲಿ ಎರಡು ಡೋಸ್‌ಗಳಲ್ಲಿ ಶೇ.100 ರಷ್ಟು ಸಾಧನೆ ಆಗಿದೆ. ಇದಕ್ಕೂ ವೈದ್ಯರ ಶ್ರಮವೇ ಕಾರಣವಾಗಿದೆ. ಹಾಗೆಯೇ, ಮೂರನೇ ಡೋಸ್‌ನಲ್ಲೂ ಶೇ.100 ರಷ್ಟು ಸಾಧನೆ ಮಾಡಲು ಎಲ್ಲಾ ವೈದ್ಯರು ಶ್ರಮಿಸಬೇಕು ಎಂದು ಸಚಿವರು ಮನವಿ ಮಾಡಿದರು.

100 ಆರೋಗ್ಯ ಕೇಂದ್ರ ನಿರ್ಮಾಣ

100 ಆರೋಗ್ಯ ಕೇಂದ್ರ ನಿರ್ಮಾಣ

ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಈವರೆಗೆ ಕೆಡರ್‌ ಮಾಡಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ಸಮಿತಿ ರಚಿಸಿದ್ದು, ಆ ವರದಿಯ ಅನ್ವಯ ಕ್ರಮ ವಹಿಸಲಾಗುತ್ತದೆ. ಇದು ಕೂಡ ಐತಿಹಾಸಿಕ ಹಾಗೂ ಕ್ರಾಂತಿಕಾರಕ ನಿರ್ಣಯವಾಗಿದೆ.

ಇನ್ನು ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಗೆ ಸರ್ಕಾರ ಆದ್ಯತೆ ನೀಡಿದ್ದು, ಉತ್ತರ ಕರ್ನಾಟಕ ಸೇರಿದಂತೆ ಅಭಿವೃದ್ಧಿ ವಂಚಿತ ಜಿಲ್ಲೆಗಳಲ್ಲಿ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಒಂದು ತಿಂಗಳಲ್ಲೇ ಇದಕ್ಕೆ ಶಂಕುಸ್ಥಾಪನೆ ನೆರವೇರಲಿದೆ. ನಗರಗಳಲ್ಲಿ ಬಿಪಿಎಲ್‌ ಕುಟುಂಬಗಳು ಹೆಚ್ಚಿರುವ ಸ್ಥಳಗಳಲ್ಲಿ 'ನಮ್ಮ ಕ್ಲಿನಿಕ್‌' ಆರಂಭಿಸಲಾಗುತ್ತಿದೆ. ಎರಡು ತಿಂಗಳೊಳಗೆ ಬೆಂಗಳೂರಿನಲ್ಲಿ 243 ಕ್ಲಿನಿಕ್‌ ಕಾರ್ಯಾರಂಭವಾಗಲಿದೆ ಎಂದರು.

ಇ-ಸಂಜೀವಿನಿ ಸೇವೆಯಲ್ಲಿ ರಾಜ್ಯ 2ನೇ ಸ್ಥಾನ

ಇ-ಸಂಜೀವಿನಿ ಸೇವೆಯಲ್ಲಿ ರಾಜ್ಯ 2ನೇ ಸ್ಥಾನ

ಇದರೊಂದಿಗೆ ಕರ್ನಾಟಕವು 'ಇ-ಸಂಜೀವಿನಿ ಸೇವೆ'ಯಲ್ಲಿ ಎರಡನೇ ಸ್ಥಾನದಲ್ಲಿದೆ. ಸೇವೆಯಡಿ ಈಗಾಗಲೆ 50ಲಕ್ಷ ಸಮಾಲೋಚನೆಗಳು ನಡೆದಿವೆ. ಹಳ್ಳಿಗಳ ಜನರು ಕೂಡ ಈ ಸೇವೆ ಬಳಸಿಕೊಳ್ಳುತ್ತಿದ್ದಾರೆ. ಕೋವಿಡ್ ರೋಗಿಗಳಿಗಾಗಿ ಆರಂಭಿಸಿದ ಕೌನ್ಸಿಲಿಂಗ್‌ನಲ್ಲೂ ಸಾಕಷ್ಟು ಸಾಧನೆಯಾಗಿದೆ. ಕೆಲ ವೈದ್ಯರ ವರ್ತನೆಯಿಂದ ಇಡೀ ವೈದ್ಯ ಸಮೂಹಕ್ಕೆ ಕೆಟ್ಟ ಹೆಸರು ಬರುತ್ತಿದೆ. ಈ ಬಗ್ಗೆ ಚಿಂತನೆ ನಡೆಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+