ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಸಿಸಿ ಅಧ್ಯಕ್ಷರು ಯಾರು?: ಮೇ 30 ರಂದು ಅಂತಿಮ ನಿರ್ಧಾರ

ಗುರುವಾರ (ಮೇ 25) ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಇನ್ನು ಎರಡು ಮೂರು ದಿನದಲ್ಲಿ ಕೆಪಿಸಿಸಿ ಅಧ್ಯಕ್ಷರು ಯಾರಾಗುತ್ತಾರೆ ಎಂಬ ಬಗ್ಗೆ ಪಕ್ಷ ಅಂತಿಮ ನಿರ್ಣಯ ತೆಗೆದುಕೊಳ್ಳಲಿದೆ

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಮೇ 26: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಹುದ್ದೆಯ ಕುರಿತು ಕಳೆದ ಎರಡು-ಮೂರು ತಿಂಗಳಿನಿಂದಲೇ ಕಾಂಗ್ರೆಸ್ಸಿನಲ್ಲಿ ತೀವ್ರ ಚರ್ಚೆ ಎದ್ದಿತ್ತು. ಈ ಚರ್ಚೆಗೆ ಮೇ 30 ರಂದು ತೆರೆ ಬೀಳಲಿದೆ.

ಗುರುವಾರ (ಮೇ 25) ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಇನ್ನು ಎರಡು ಮೂರು ದಿನದಲ್ಲಿ ಕೆಪಿಸಿಸಿ ಅಧ್ಯಕ್ಷರು ಯಾರಾಗುತ್ತಾರೆ ಎಂಬ ಬಗ್ಗೆ ಪಕ್ಷ ಅಂತಿಮ ನಿರ್ಣಯ ತೆಗೆದುಕೊಳ್ಳಲಿದೆ ಎಂದಿದ್ದಾರೆ.[ಕರ್ನಾಟಕ ಕಾಂಗ್ರೆಸಿನ ಹೊಸ ಉಸ್ತುವಾರಿ, ಇವರೇ ಕೆ.ಸಿ ವೇಣುಗೋಪಾಲ್!]

The name of the KPCC president will be finalised on 30th of May

ಈ ಸಂಬಂಧ ಮೇ 29, ಸೋಮವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಡಾ.ಜಿ.ಪರಮೇಶ್ವರ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಕೆ, ಅಥವಾ ಬೇರೆ ಯಾರನ್ನಾದರೂ ನೇಮಿಸಬೇಕೆ ಎಂಬ ಬಗ್ಗೆ ಸಿದ್ದರಾಮಯ್ಯ ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ಲಎಸ್.ಆರ್.ಪಾಟೀಲ್, ಎಂ.ಬಿ.ಪಾಟೀಲ್, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಮುಂತಾದ ಹೆಸರುಗಳು ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಕೇಳಿಬರುತ್ತಿದೆ.

English summary
The name of the KPCC president will be finalised on 30th of May, AICC general secretary and Karnataka congress in charge K.C.Venugopal said to media persons in Bengaluru, yesterday (May 25th)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X