ಬೆಂಗಳೂರು ಪೊಲೀಸರಿಗೆ ಪ್ರಶಂಸೆ ವ್ಯಕ್ತಪಡಿಸಿದ ಜನತೆ

ಬೆಂಗಳೂರು, ಡಿಸೆಂಬರ್ 24: ಕೇಂದ್ರ ಸರಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅನೇಕ ಮುಸ್ಲಿಂ ಸಂಘಟನೆಗಳು ಬೆಂಗಳೂರು ನಗರದಲ್ಲಿ ಪ್ರತಿಭಟನೆ ಮಾಡಿದರೂ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವ ಬೆಂಗಳೂರು ನಗರ ಪೊಲೀಸರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿವೆ.

ನಿನ್ನೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯುವಾಗ ಸುಮಾರು ಒಂದು ಲಕ್ಷ ಜನ ಸೇರಿಕೊಂಡಿದ್ದರು, ಪ್ರತಿ ಹಂತದಲ್ಲೂ ಹೆಜ್ಜೆ ಹೆಜ್ಜೆಗೂ ಪೊಲೀಸ್ ಕಾವಲು ಇತ್ತು. ಪ್ರತಿ 50 ಮೀಟರ್ ಗೂ ಪೊಲೀಸ್ ವಾಹನ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.

ಪೊಲೀಸರ ಬಿಗಿ ಭದ್ರತೆ ನಡುವೆ ನಡೆದ ಮೆರವಣಿಗೆಯಲ್ಲಿ ಸಣ್ಣ ಪ್ರಮಾಣದವೂ ಕೂಡಾ ಆಗದಂತೆ ನೋಡಿಕೊಂಡರು. ಪೊಲೀಸರ ಈ ಕರ್ತವ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಯ ಮಹಾಪೂರವೇ ಹರಿದು ಬಂದಿದೆ.

The People Appreciation To The Bangalore Police

ಪ್ರತಿಭಟನೆಗೆ ಬಂದಿದ್ದ ಮುಸ್ಲಿಂ ಬಾಂಧವರು ಸಹ ಪೊಲೀಸರಿಗೆ ಕೆಂಪು ಗುಲಾಬಿ ನೀಡಿದ್ದು ವಿಶೇಷವಾಗಿತ್ತು. ಪ್ರತಿಭಟನೆ ಸಂದರ್ಭದಲ್ಲೂ ಪೊಲೀಸರ ಕಾರ್ಯನಿರ್ವಣೆಗೆ ಪ್ರಶಂಸೆ ವ್ಯಕ್ತವಾಗಿತ್ತು.

ಇದರ ಬಗ್ಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, "ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಿರುವ ನಗರ. ಇಲ್ಲಿ ಯಾವಾಗಲೂ ಶಾಂತಿ ನೆಲೆಸಿರಬೇಕೆಂಬುದು ನಮ್ಮ ಆಶಯ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಹಾಗೂ ನಗರದ ಜನತೆಗೆ ಧನ್ಯವಾದ ಅರ್ಪಿಸಿದರು."

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+