ನಿಜವಾದ 'ಶಕುನಿ' ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ಕೆಂಡ

ಬೆಂಗಳೂರು, ನವೆಂಬರ್ 05: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕ್ಷೇತ್ರದ ಅಭಿವೃದ್ಧಿಯೇ ಆಗಿಲ್ಲ. ವಕ್ಫ್ ವಿಚಾರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಉಲ್ಟಾ ಹೊಡೆದಿದ್ದಾರೆ ಎಂದು ಸಿಎಂ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಸವಾಲು ಹಾಕಿರುವ ಬೊಮ್ಮಾಯಿ ಅವರು ಬಹಿರಂಗ ಚರ್ಚೆಗೆ ಆಹ್ವಾನಿಸಿ ಸವಾಲು ಹಾಕಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಉಪಚುನಾವಣೆ 2024 ಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಟೀಕಾಸ್ತ್ರ ಪ್ರಯೋಗಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಿದ್ದರಾಮಯ್ಯ ಅವರು ಅಹಿಂದ ಮಾಡಿದಾಗ ಅವರ ಜೊತೆಗೆ ಬಹಿರಂಗವಾಗಿ ಗಟ್ಟಿಯಾಗಿ ನಿಂತ ವೀರಶೈವ ಸಮುದಾಯದ ನಾಯಕ ನಾನೊಬ್ಬನೇ.

The real Shakuni CM Siddaramaiah Basavaraj Bommai Outrage

ಸಿದ್ದರಾಮಯ್ಯ ಅವರು 2006 ರಲ್ಲಿ ಜೆಡಿಎಸ್ ಗೆ ರಾಜೀನಾಮೆ ಕೊಟ್ಟು ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ನಾನು ಯಾವ ರೀತಿ ಸಹಾಯ ಮಾಡಿದ್ದೇನೆ ಎಂದು ಅವರು ನೆನಪಿಸಿಕೊಳ್ಳಲಿ ಎಂದು ಕುಟುಕಿದ್ದಾರೆ.

ರಾಜ್ಯದ ಉಪಮುಖ್ಯಮಂತ್ರಿಯನ್ನಾಗಿ ಮಾಡಿ ರಾಜಕೀಯವಾಗಿ ಬೆಳೆಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೆಗೌಡ ಅವರಿಗೆ ಕೈಕೊಟ್ಟಿದ್ದಾರೆ. ದೇವೇಗೌಡರನ್ನು ನಿರಂತರ ವಿರೋಧಿಸಿರುವ ಕಾಂಗ್ರೆಸ್ ಜೋತೆ ಕೈ ಜೋಡಿಸಿರುವ ನಿಜವಾದ 'ಶಕುನಿ' ಸಿದ್ದರಾಮಯ್ಯ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ.

ಜೆಡಿಎಸ್ ನಿಂದ ಹೊರ ಬಂದಾಗ ಪ್ರಗತಿಪರ ಜನತಾದಳ ಪಕ್ಷದ ಅಡಿಯಲ್ಲಿ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ಮಾಡಿ ಅವರ ಅಸ್ತಿತ್ವ ಉಳಿಸಿದ್ದು ಇದೆ ಬಸವರಾಜ ಬೊಮ್ಮಾಯಿ ಎನ್ನುವುದನ್ನು ಅವರು ಮರೆತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

The real Shakuni CM Siddaramaiah Basavaraj Bommai Outrage

ಅಭಿವೃದ್ಧಿ ಆರೋಪ: ಕಾಂಗ್ರೆಸ್‌ ಬೊಮ್ಮಾಯಿ ಸವಾಲು

ಬಿಜೆಪಿ ಆಡಳಿತ ಅವಧಿಯಲ್ಲಿ ಅದರಲ್ಲೂ ತಾವು ಸಿಎಂ ಆಗಿದ್ದಾಗ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಏನೆಲ್ಲ ಅಭಿವೃದ್ಧಿ ಕಾಮಗಾರಿಗಳು ಆಗಿವೆ ಎಂಬ ಕುರಿತು ಬಹಿರಂಗ ಚರ್ಚೆ ಗೆ ಬನ್ನಿ ಎಂದು ಸಿಎಂ ಸಿದ್ಧರಾಮಯ್ಯ ಅವರನ್ನು ಸಂಸದ ಬಸವರಾಜ ಬೊಮ್ಮಾಯಿ ಆಹ್ವಾನಿಸುವ ಮೂಲಕ ಬಹಿರಂಗ ಸಾವಲು ಎಸೆದಿದ್ದಾರೆ.

ಈ ಭಾಗದಲ್ಲಿ ಪ್ರವಾಹ ಬಂದಾಗ ಬಿಜೆಪಿ ಅವಧಿಯಲ್ಲಿ ಸಾಕಷ್ಟು ಅನುದಾನ ನೀಡಲಾಗಿದೆ. ಈಗ ನೀವೇನು ಕೊಟ್ಟಿದ್ದು ಜುಜಬಿ ಕಾಸು. ಬಿಜೆಪಿಯು ನೆರೆ ವೇಳೆ ರೈತರಿಗೆ ಎರಡು ಪಟ್ಟು ಹೆಚ್ಚಿನ ಪರಿಹಾರ ಒದಗಿಸಿದೆ. ಸಂತ್ರಸ್ತರಿಗೆ ಹೆಚ್ಚಿನ ಅನುದಾನ ನಿಡಲಾಗಿದೆ. ಪ್ರತಿ ಹೇಕ್ಟರ್ ಗೆ ಒಣಬೇಸಾಯಕ್ಕೆ 13,600 ರೂ.ಕೊಟ್ಟಿದ್ದೇವೆ. ನೀರಾವರಿಗೆ 25 ಸಾವಿರ ರೂ. ಕೊಟ್ಟಿದ್ದೇನೆ ಎಂದು ತಮ್ಮ ಸಾಧನೆಗಳನ್ನು ಸಂಸದರ ವಿವರಿಸಿದರು.

ರೈತರ ಸಂಕಷ್ಟದಲ್ಲಿದ್ದಾಗ ವಿಮೆ ಹಣ ಬಿಡುಗಡೆ ಮಾಡುವುದು, ಹಾವೇರಿ ಜಿಲ್ಲೆಯ ಹಾಲು ಉತ್ಪಾದಕ ಘಟಕ ಸ್ಥಾಪಿಸಿ, ಸಾಕಷ್ಟು ಪ್ರಮಾಣದಲ್ಲಿ ಹಾಲು ಉತ್ಪಾದನೆಗೆ ಕ್ರಮ ವಹಿಸಲಾಗಿದೆ. ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದಲ್ಲಿ ಒಂದು ಸಾವಿರಕ್ಕೂ ಅಧಿಕ ಹಸು ಕೊಟ್ಟಿದ್ದೇವೆ ನಿಮ್ಮ ಕ್ಷೇತ್ರದಲ್ಲಿ ಏನು ಮಾಡಿದ್ದೀರಿ, ಜನರಿಗೆ ರೈತರಿಗೆ ಹೇಗೆ ನೆರವಾಗಿದ್ದೀರಿ ಹೇಳಿ ನೋಡೋಣ ಎಂದು ಅವರು ಸವಾಲು ಹಾಕಿದ್ದಾರೆ. ಜಾತಿ ಮತ ಪಂಥ ಎನ್ನದೇ ಅಭಿವೃದ್ಧಿ ಮಾಡಲಾಗಿದೆ. ದೇವಸ್ಥಾನಗಳನ್ನು ನಿರ್ಮಿಸಿದ್ದೇವೆ ಎಂದು ಅವರು ಸಿಎಂಗೆ ತಿರುಗೇಟು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+