ಕೌಶಿಕ್ ಮುಖರ್ಜಿ ಮನೆಯಲ್ಲಿ 25 ಲಕ್ಷ ಮೌಲ್ಯದ ವಸ್ತುಗಳು ಕಳುವು
ಬೆಂಗಳೂರು, ಜೂನ್ 18 : ಕರ್ನಾಟಕ ನಿವೃತ್ತ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರ ನಿವಾಸದಲ್ಲಿ ಕಳ್ಳತನ ನಡೆದಿದೆ. ಸುಮಾರು 25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳ್ಳರು ದೋಚಿದ್ದಾರೆ.
ಎಚ್ಎಸ್ಆರ್ ಲೇಔಟ್ನ 6ನೇ ಸೆಕ್ಟರ್ನಲ್ಲಿ ಕೌಶಿಕ್ ಮುಖರ್ಜಿ ಅವರ ಮನೆ ಇದೆ. ಜೂನ್ 16ರಂದು ಮನೆಯಲ್ಲಿ ಕಳ್ಳತನ ನಡೆದಿದೆ. ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

100 ಗ್ರಾಂನ ಚಿನ್ನದ ಬಳೆ, 2 ವಜ್ರದ ಕಿವಿಯ ಓಲೆ, 2 ವಜ್ರದ ಉಂಗುರ, 2 ದುಬಾರಿ ಪೆನ್, 6 ದುಬಾರಿ ವಾಚ್ ಸೇರಿದಂತೆ ಸುಮಾರು 25 ಲಕ್ಷ ರೂ. ಮೌಲ್ಯದ ವಸ್ತುಗಳು ಕಳುವಾಗಿವೆ ಎಂದು ತಿಳಿದುಬಂದಿದೆ.
ಜೂನ್ 16ರ ಶನಿವಾರ ಬೆಳಗ್ಗೆ ಕೌಶಿಕ್ ಮುಖರ್ಜಿ ದಂಪತಿ ಮನೆಗೆ ಬೀಗ ಹಾಕಿಕೊಂಡು ಸ್ನೇಹಿತರ ಮನೆಗೆ ತೆರಳಿದ್ದರು. ನಂತರ ಸಿನಿಮಾ ಮತ್ತು ಶಾಪಿಂಗ್ ಮುಗಿಸಿ ರಾತ್ರಿ 11 ಗಂಟೆಗೆ ಮನೆಗೆ ವಾಪಸ್ ಆಗಿದ್ದರು. ಆಗ ಕಳುವು ಪ್ರಕರಣ ಬೆಳಕಿಗೆ ಬಂದಿದೆ.
ಎಚ್ಎಸ್ಆರ್ ಲೇಔಟ್ ಠಾಣೆಗೆ ಕರೆ ಮಾಡಿ ಕೌಶಿಕ್ ಮುಖರ್ಜಿ ಅವರು ಮಾಹಿತಿ ನೀಡಿದ್ದಾರೆ. ಮನೆ ಮತ್ತು ಮನೆಯ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
ಕೌಶಿಕ್ ಮುಖರ್ಜಿ ಅವರ ಮನೆ ಹಿಂಭಾಗದಲ್ಲಿ ಸಣ್ಣ ಕೈತೋಟವಿದೆ. ಅದರ ಮೂಲಕ ಒಳಗೆ ಬಂದಿರುವ ಕಳ್ಳರು, ಮೊದಲು ಕಿಟಕಿ ಗಾಜನ್ನು ಒಡೆದಿದ್ದಾರೆ. ಬಳಿಕ ಕಿಟಕಿ ತೆರೆದು ಹಿಂಭಾಗಿಲ ಮೂಲಕ ಮನೆ ಪ್ರವೇಶಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ











Click it and Unblock the Notifications