ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಮತದಾರರ ಮಾಹಿತಿ ಕಳವು, 28 ಕ್ಷೇತ್ರಗಳ ತನಿಖೆಗೆ ಒತ್ತಾಯ

|
Google Oneindia Kannada News

ಬೆಂಗಳೂರು, ನವೆಂಬರ್ 27; ಬೆಂಗಳೂರು ನಗರದ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಈಗಾಗಲೇ ಪೊಲೀಸರು ಮತ್ತು ಚುನಾವಣಾ ಆಯೋಗ ಈ ಕುರಿತು ತನಿಖೆ ಆರಂಭಿಸಿದೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಭಾನುವಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಮಾತನಾಡಿದ್ದಾರೆ. "ಬೆಂಗಳೂರಿನ 28 ಕ್ಷೇತ್ರಗಳಲ್ಲೂ ಮತದಾರ ಪಟ್ಟಿ ಪರಿಷ್ಕರಣೆಯ ಅಕ್ರಮ ನಡೆದಿದೆ. ಆದರೆ ಚುನಾವಣಾ ಆಯೋಗ ಕೇವಲ ಮೂರು ವಿಧಾನಸಭಾ ಕ್ಷೇತ್ರಗಳಿಗೆ ತನಿಖೆ ಸೀಮಿತಗೊಳಿಸಿದೆ" ಎಂದು ಹೇಳಿದ್ದಾರೆ.

Voter Data Theft: ಮೂವರು ಐಎಎಸ್‌ ಅಧಿಕಾರಿಗಳ ಅಮಾನತು Voter Data Theft: ಮೂವರು ಐಎಎಸ್‌ ಅಧಿಕಾರಿಗಳ ಅಮಾನತು

Theft Of Voter Data Urge For Bengaluru 28 Assembly Constituency Probe

"ಹಾಗಾದರೆ ಇನ್ನುಳಿದ 25 ಕ್ಷೇತ್ರಗಳಲ್ಲಿ ನಡೆದ ಅಕ್ರಮದ ತನಿಖೆ ಏಕಿಲ್ಲ?. ಚುನಾವಣಾ ಆಯೋಗ ಬೆಂಗಳೂರು ವ್ಯಾಪ್ತಿಯ 28 ಕ್ಷೇತ್ರಗಳ ಅಕ್ರಮದ ತನಿಖೆ ಮಾಡಲಿ" ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Voter Data Theft: ಕಾಂಗ್ರೆಸ್‌ನವರದ್ದೇ ಕೈವಾಡ ಎಂದ ಸಚಿವ! Voter Data Theft: ಕಾಂಗ್ರೆಸ್‌ನವರದ್ದೇ ಕೈವಾಡ ಎಂದ ಸಚಿವ!

"ವೋಟರ್ ಐಡಿ ಹಗರಣ ಸಂಬಂಧ ಪೊಲೀಸರು ಬಿಬಿಎಂಪಿಯ 4 ಅಧಿಕಾರಿಗಳನ್ನು ಬಂಧಿಸಿದ್ದಾರೆ. ಈ ಅಕ್ರಮದಲ್ಲಿ ಕೇವಲ ನಾಲ್ಕು ಅಧಿಕಾರಿಗಳು ಮಾತ್ರ ಭಾಗಿಯಾಗಿಲ್ಲ. ಸರ್ಕಾರದ ಉನ್ನತ ಅಧಿಕಾರಿಗಳು, ಪ್ರಭಾವಿ ಸಚಿವರು ಕೂಡ ಶಾಮೀಲಾಗಿದ್ದಾರೆ. ಅವರ ವಿರುದ್ಧವೂ ತನಿಖೆಯಾಗಬೇಕಲ್ಲವೆ?. ಅವರ ಬಂಧನವೂ ಆಗಬೇಕಲ್ಲವೆ?. ಕೇವಲ 4 ಅಧಿಕಾರಿಗಳ ಬಂಧನ ಕಣ್ಣೊರೆಸುವ ತನಿಖೆಯೇ?" ಎಂದು ಪ್ರಶ್ನಿಸಿದ್ದಾರೆ.

Theft Of Voter Data Urge For Bengaluru 28 Assembly Constituency Probe

"ಮುಖ್ಯಮಂತ್ರಿಗಳ ಗಮನಕ್ಕೆ ಬಾರದೆ ವೋಟರ್ ಐಡಿ ಹಗರಣ ನಡೆಯಲು ಸಾಧ್ಯವೇ ಇಲ್ಲ.‌ ಈ ಹಗರಣದಲ್ಲಿ ಬೊಮ್ಮಾಯಿಯವರ ಪಾತ್ರ ಏನು ಎಂಬುದು ಜನರಿಗೆ ತಿಳಿಯಬೇಕು. ಆದರೆ ಈ ಸತ್ಯ ಪೊಲೀಸರ ತನಿಖೆಯಿಂದ ಹೊರಬರಲು ಸಾಧ್ಯವಿಲ್ಲ.‌ ಪೊಲೀಸರು ಬೊಮ್ಮಾಯಿ ವಿರುದ್ಧ ನಿರ್ಭೀತ ಹಾಗೂ‌ ಪ್ರಾಮಾಣಿಕವಾಗಿ ತನಿಖೆ ನಡೆಸಲು ಸಾಧ್ಯವೇ? ಹಾಗಾಗಿ ನ್ಯಾಯಾಂಗ ತನಿಖೆಯಾಗಲಿ" ಎಂದು ಆಗ್ರಹಿಸಿದರು.

Voter Data Theft: ಚಿಲುಮೆ ಮುಖ್ಯಸ್ಥ ರವಿಕುಮಾರ್ ಬಂಧನVoter Data Theft: ಚಿಲುಮೆ ಮುಖ್ಯಸ್ಥ ರವಿಕುಮಾರ್ ಬಂಧನ

ನಾಲ್ವರು ಅಧಿಕಾರಿಗಳ ಬಂಧನ; ಬೆಂಗಳೂರು ನಗರದಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ನಾಲ್ವರು ಅಧಿಕಾರಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದಾರೆ.

ಬಂಧಿತರು ಶಿವಾಜಿನಗರದ ಕಂದಾಯ ಅಧಿಕಾರಿ ಸುಹೇಲ್ ಅಹಮದ್, ಮಹದೇವಪುರದ ಕಂದಾಯ ಅಧಿಕಾರಿ ಕೆ. ಚಂದ್ರಶೇಖರ್, ಚಿಕ್ಕಪೇಟೆ ಉಪ ಕಂದಾಯ ಅಧಿಕಾರಿ ವಿ. ಬಿ. ಭೀಮಾಶಂಕರ್‌ ಮತ್ತು ರಾಜರಾಜೇಶ್ವರಿ ನಗರದ ಕಂದಾಯ ಅಧಿಕಾರಿ ಮಹೇಶ್‌.

ಈ ನಾಲ್ವರು ಮತದಾರರ ನೋಂದಣಾಧಿಕಾರಿಗಳಾಗಿ ಕೆಲಸ ಮಾಡಿದ್ದರು. ತಮ್ಮ ವ್ಯಾಪ್ತಿಯ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಆಧಾರ್ ಸಂಖ್ಯೆ ಜೋಡಣೆ ಕೆಲಸಕ್ಕಾಗಿ ಚಿಲುಮೆ ಸಂಸ್ಥೆಯ ಸಿಬ್ಬಂದಿಗೆ ಬಿಎಲ್‌ಒ ಗುರುತಿನ ಚೀಟಿಗಳನ್ನು ಮಾಡಿಕೊಟ್ಟಿದ್ದರು ಎಂಬುದು ಆರೋಪ.

English summary
Theft Of Voter Data; Congress leader Dinesh Gundu Rao urged the Karnataka government to probe on theft of voter data scam in all 28 assembly constituency of Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X