ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡ್ರಗ್ಸ್ ಮಾಫಿಯಾ: ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

|
Google Oneindia Kannada News

ಬೆಂಗಳೂರು, ಸೆ. 03: ವಿಧಾನಸೌಧದಲ್ಲಿ ಮಹತ್ವದ ಸಂಪುಟ ಸಭೆ ಆರಂಭವಾಗಿದ್ದು, ಹಲವು ಮಹತ್ವದ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಇಂದಿನ ಸಂಪುಟ ಸಬೆಯಲ್ಲಿ ಹಲವು ಪ್ರಮುಖ ತೀರ್ಮಾನಗಳನ್ನು ರಾಜ್ಯ ಸಚಿವ ಸಂಪುಟ ಕೈಗೊಳ್ಳಲಿದೆ ಎಂಬ ಮಾಹಿತಿಯಿದೆ.

Recommended Video

Sandalwood Drug Mafia ಬಗ್ಗೆ Kannada film Chamber ವಿಶೇಷ ಪತ್ರಿಕಾಗೋಷ್ಠಿ | Oneindia Kannada

ಸಂಪುಟ ಸಭೆಯಲ್ಲಿ ಬೆಂಗಳೂರು ಗಲಭೆ ಪ್ರಕರಣದ ಕುರಿತು ಚರ್ಚೆ ನಡೆಯಲಿದ್ದು, ಸದ್ಯ ಅಲ್ಲಿನ ಪರಿಸ್ಥಿತಿಯ ಕುರಿತು ಗೃಹಸಚಿವರು ಮಾಹಿತಿ ಕೊಡಲಿದ್ದಾರೆ ಎನ್ನಲಾಗಿದೆ. ತನಿಖೆ ಪ್ರಕ್ರಿಯೆಗೆ ವೇಗ ನೀಡುವ ಕುರಿತು ಚರ್ಚಿಸುವ ಸಾಧ್ಯತೆಯಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಗಲಭೆಕೋರರಿಂದಲೇ ಆಸ್ತಿನಷ್ಟ ಭರಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಈಗಾಗಲೇ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಮಾಜಿ ಡೆಪ್ಯೂಟಿ ಸ್ಪೀಕರ್ ಎನ್. ಯೋಗೀಶ್ ಭಟ್ ಅವರ ವರದಿಯ ಶಿಫಾರಸುಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ. ಡ್ರಗ್ಸ್ ಮಾಫಿಯಾ ಮಟ್ಟಹಾಕಲು ಪ್ರತ್ಯೇಕ ಕಾನೂನು ರಚನೆಗೆ ಎನ್. ಯೋಗೀಶ್ ಭಟ್ ಅವರು ಶಿಫಾರಸು ಮಾಡಿದ್ದರು.

There has been important debate in the State Cabinet on drug mafia in Karnataka

ಜೊತೆಗೆ ಹವಲು ಆಡ:ಇತಾ್ಮಕ ವಿಚಾರಗಳ ಬಗ್ಗೆಯೂ ಸಂಪುಟ ತೀರ್ಮಾನವನ್ನು ಕೈಗೊಳ್ಳಲಿದೆ. 3ನೇ ಅವಧಿಗೆ ಕೃಷಿ ಬೆಲೆ ಆಯೋಗದ ಮುಂದುವರಿಕೆ, ಫಸಲ್ ಭೀಮಾ ಯೋಜನೆ ಅನುಷ್ಠಾನ, ಕ್ಲಸ್ಟರ್ ವಾರು ವಿಮಾ ಸಂಸ್ಥೆಗಳ ಪ್ರಾರಂಭ, ಲೋಕಾಯುಕ್ತದಲ್ಲಿ ಖಾಲಿ ಇರುವ ನಿಬಂಧಕರ ಹುದ್ದೆ ಭರ್ತಿ, ನಿವೃತ್ತ ನ್ಯಾಯಮೂರ್ತಿಗಳ ನೇಮಕ, ಮುನ್ಸಿಪಲ್ ಆ್ಯಕ್ಟ್‌ ಎರಡನೇ ತಿದ್ದುಪಡಿಗೆ ಒಪ್ಪಿಗೆ, ಮಾಹಿತಿ ತಂತ್ರಜ್ಞಾನ ಕಾರ್ಯನೀತಿಗೆ ಸಮ್ಮತಿ, ಹಾವೇರಿ ಹಾಗೂ ಯಾದಗಿರಿಯಲ್ಲಿ‌ ಹೊಸ ವೈದ್ಯಕೀಯ ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಪರಿಷ್ಕೃತ ಮೊತ್ತಕ್ಕೆ ಒಪ್ಪಿಗೆ, ಪೊನ್ನಂಪೇಟೆಯಲ್ಲಿ 13.08 ಕೋಟಿ ರೂಪಾಯಿಗಳಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ, ಸರಕು ಮತ್ತು ಸೇವೆಗಳ ತಿದ್ದುಪಡಿ ಕಾಯ್ದೆಗೆ ಸಮ್ಮತಿ, ಮುಂಡಗೋಡು ತಾಲೂಕಿನ 85 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 225 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ... ಹೀಗೆ ಹಲವು ಆಡಳಿತಾತ್ಮಕ ನಿರ್ಣಯಗಳನ್ನು ಇಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗುತ್ತಿದೆ.

English summary
A major Cabinet meeting has begun in the Vidhanasoudha, and there is serious debate on many important issues. There are reports that the Cabinet of State will take several important decisions in today's Cabinet meeting, Know more..
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X