ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಗಲಭೆ: ಸಂಘಟನೆ ನಿಷೇಧದ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ

|
Google Oneindia Kannada News

ಬೆಂಗಳೂರು, ಆ. 20: ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ. ಹಲವು ಸಚಿವರುಗಳು ಗಲಭೆ ಪ್ರಕರಣದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಇಡೀ ಪ್ರಕರಣವನ್ನು ರಾಜಕೀಯಗೊಳಿಸಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ಆರೋಪಗಳಿಗೆ ನಾವು ಕೂಡ ತೀಕ್ಷ್ಣ ಪ್ರತಿಕ್ರಿಯೆ ಕೊಡಬೇಕು ಎಂದು ಸಚಿವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಸ್ಡಿಪಿಐ ನಿಷೇಧಿಸುವ ತೀರ್ಮಾನವನ್ನು ಸರ್ಕಾರ ಕೈಗೊಳ್ಳಬೇಕು

Recommended Video

ಇವನು ಕೊಟ್ಟ ಆಫರ್ ನೋಡಿ ಅಂಗಡಿ ಸೀಲ್ ಮಾಡಿದ ಪೊಲೀಸ್ | Oneindia Kannada

ಮಾಜಿ ತನ್ವೀರ್ ಸೇಠ್ ಮೇಲಿನ ಮಾರಣಾಂತಿಕ‌ ಹಲ್ಲೆ, ಮಂಗಳೂರು ಗಲಭೆ ಪ್ರಕರಣ, ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗಳಲ್ಲಿ ಸಂಘಟನೆಯೊಂದರ ನೇರ ಪಾತ್ರವಿದೆ ಎಂದು ಚರ್ಚೆ ಮಾಡಲಾಗಿದೆ. ಆದರೆ ಸಂಘಟನೆ ನಿಷೇಧದ ಬಗ್ಗೆ ಯಾವುದೇ ಅಂತಿಮ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಬಂದಿಲ್ಲ ಎನ್ನಲಾಗಿದೆ.

ಬೆಂಗಳೂರು ಗಲಭೆ ಪ್ರಕರಣಕ್ಕೆ ಎರಡು ಸಂಘಟನೆಗಳನ್ನು ನಿಷೇಧ ಮಾಡಲು ಸಂಪುಟ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಸಿ.ಟಿ. ರವಿ, ಈಶ್ವರಪ್ಪ, ಬೊಮ್ಮಾಯಿ ಸೇರಿದಂತೆ ಹಲವರು ತಮ್ಮ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎರಡೂ ಸಂಘಟನೆಗಳ ಪಾತ್ರದ ಬಗ್ಗೆ ರಾಜ್ಯ ಗೃಹ ಇಲಾಖೆ‌ ಅಧಿಕಾರಿಗಳು ತಯಾರಿಸಿದ್ದ ಸವಿಸ್ತಾರ ವರದಿಯನ್ನು ಸಾಕ್ಷ್ಯಗಳ ಸಹಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಲ್ಲಿಸಿದ್ದಾರೆ.

There Has Been Imoprtaint Debate In The State Cabinet On The Ban On Sdpi Organization

ಒಂದು ಸಂಘಟನೆ ಮತ್ತೊಂದು ರಾಜಕೀಯ ಪಕ್ಷವಾಗಿರುವುದರಿಂದ ನಿಷೇಧದಿಂದಾಗುವ ಕಾನೂನು ತೊಡಕುಗಳನ್ನು ಚರ್ಚೆ ಮಾಡಲಾಗಿದೆ. ಜೊತೆಗೆ ಘಟನೆ ನಿರ್ವಹಣೆ ಕುರಿತು ಬಿಜೆಪಿ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿರುವುದನ್ನೂ ಚರ್ಚೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

English summary
A imoprtaint debate has taken place at the state cabinet meeting on the case of KG Halli, DG Halli riots in Bengaluru. Many ministers have expressed their views on the riot. It is alleged that the Congress party politicized the entire case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X