• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಾವ ಮುಖ ಇಟ್ಟುಕೊಂಡು ಆರ್‌ಆರ್‌ ನಗರದಲ್ಲಿ ಮತ ಕೇಳ್ತಾರೆ?: ಕುಮಾರಸ್ವಾಮಿ ಪ್ರಶ್ನೆ!

|

ಬೆಂಗಳೂರು, ಅ. 14: ಉಪ ಚುನಾವಣೆಯಲ್ಲಿ ಅದರಲ್ಲೂ ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆರ್ ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ವಿ. ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ಈ ಬಾರಿ ನಾನು ನಿಷ್ಟಾವಂತ ಕಾರ್ಯಕರ್ತನ ಪರ ಇರ್ತೇನೆ.

ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ಮಾಡುತ್ತೇನೆ. ಈ ಕ್ಷೇತ್ರ ಉಸ್ತುವಾರಿ ನಾನೇ ವಹಿಸಿಕೊಂಡಿದ್ದೇನೆ. ಆರ್.ಆರ್ ನಗರ ಕ್ಷೇತ್ರ 2008ರಲ್ಲಿ ರಚನೆಯಾಗಿತ್ತು. ಈವೆರೆಗೆ ಬಿಜೆಪಿ ಒಂದು ಬಾರಿ, ಕಾಂಗ್ರೆಸ್ ಎರಡು ಬಾರಿ ಗೆಲುವು ಸಾಧಿಸಿವೆ ಎಂದರು.

ಶಿರಾ; ಜೆಡಿಎಸ್ ನಾಮಪತ್ರ ಸಲ್ಲಿಕೆ, ಶಕ್ತಿ ಪ್ರದರ್ಶನ

ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ. ಕಾಂಗ್ರೆಸ್ ನಾಯಕರಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇದೇ ವೇಳೆ ಬಿಜೆಪಿ ವಿರುದ್ದವೂ ಕಿಡಿಕಾರಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಬಿಜೆಪಿಯವರು ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಟೀಕಿಸಿದರು.

   ಸತತ ಏರಿಕೆ ನಂತರ ದೊಡ್ಡ ಬ್ರೇಕ್ ಕಂಡ Sensex | Oneindia Kannada

   English summary
   There is no Congress game in RR Nagar by election said former chief minister hd kumaraswamy in Bengaluru, Know more,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X