ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ- ರದ್ದು?; ಶಿಕ್ಷಣ ಸಚಿವರು ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಮೇ 17: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ತೀವ್ರ‌ ಪ್ರಸರಣವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ.

Recommended Video

SSLC ಹಾಗೂ 2nd PU ಪರೀಕ್ಷೆ- ರದ್ದು?; ಶಿಕ್ಷಣ ಸಚಿವರು ಹೇಳಿದ್ದೇನು? | Oneindia Kannada

ಕೊರೊನಾ ಹೆಮ್ಮಾರಿಯ ಅಟ್ಟಹಾಸ ರಾಜ್ಯದಲ್ಲಿ ಹೆಚ್ಚಾಗಿದ್ದು, ಯಾವಾಗ ಪರೀಕ್ಷೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತಲೆಕಡೆಸಿಕೊಂಡಿದೆ. ಎರಡು ಪರೀಕ್ಷೆಗಳನ್ನು ಮುಂದೂಡಿರುವ ಶಿಕ್ಷಣ ಇಲಾಖೆ, ಮುಂದಿನ ಪರೀಕ್ಷಾ ದಿನಾಂಕವನ್ನು ತಿಳಿಸಿಲ್ಲ.

ಈ ಬಗ್ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದು, ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು‌ ಪರೀಕ್ಷೆಗಳನ್ನು ರದ್ದು ‌ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

There Is No Decision On Cancellation Of SSLC, II PUC Exams In Karnataka: Education Minister Gives Clarification

ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ರದ್ದು ಕುರಿತು, ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ ಎಂದಿರುವ ಸಚಿವ ಎಸ್.ಸುರೇಶ್ ಕುಮಾರ್, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಊಹಾಪೋಹ ಸುದ್ದಿಗಳಿಗೆ ಯಾವುದೇ ಕಾರಣಕ್ಕೂ ವಿಚಲಿತರಾಗದೇ, ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

English summary
Education Minister S. Suresh Kumar said no decision has been taken on canceling the SSLC and II PUC exams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X