• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇವರನ್ನು ನೋಡಲು ಲಿಂಗಭೇದ ಇರಬಾರದು: ಸಿದ್ದರಾಮಯ್ಯ

|

ಬೆಂಗಳೂರು, ನವೆಂಬರ್ 19: ದೇವರನ್ನು ನೋಡಲು ಲಿಂಗಭೇದ ಇರಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಶಬರಿಮಲೆಗೆ ಮಹಿಳೆ ಪ್ರವೇಶದ ಪರ ದನಿಗೂಡಿಸಿದ್ದಾರೆ.

ಪಿಣರಾಯಿ ವಿರುದ್ದ ಒಡೆಯಿತೇ ಹಿಂದೂಗಳ ಸಹನೆಯ ಕಟ್ಟೆ: ಅಡ್ವಾಂಟೇಜ್ ಬಿಜೆಪಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರ ಹೆಸರಿನಲ್ಲಿ ಬಿಜೆಪಿಯು ಭಾವನಾತ್ಮಕ ವಿಚಾರಗಳನ್ನು ಮುಂದೆ ತಂದು ಭಾವನಾತ್ಮಕವಾಗಿ ಜನರನ್ನು ಮರುಳು ಮಾಡುವ ಯತ್ನ ಸದಾ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಮತ್ತೆ ರಣರಂಗವಾದ ಶಬರಿಮಲೆ: 70 ಕ್ಕೂ ಹೆಚ್ಚು ಜನ ಪೊಲೀಸ್ ವಶಕ್ಕೆ

ಪುರುಷರಿಗೆ ಒಬ್ಬ ದೇವರು, ಮಹಿಳೆಯರಿಗೆ ಮತ್ತೊಬ್ಬ ದೇವರು ಅಂತಾ ಇದಾರಾ? ಅದು ಸಾಧ್ಯವೇ ಇಲ್ಲ. ದೇವರು ಎಲ್ಲರಿಗೂ ಒಂದೇ. ದೇವರು ಎಲ್ಲ ಕಡೆ ಇದ್ದಾರೆ. ಎಲ್ಲರಿಗೂ ದೇವರು ಸಮಾನ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸಮಸ್ಯೆಗಳ ಬಗ್ಗೆ ಬಿಜೆಪಿ ಚರ್ಚೆ ಮಾಡುವುದಿಲ್ಲ ಆದರೆ ಭಾವನಾತ್ಮಕ ವಿಷಯಗಳನ್ನು ಮುಂದೆ ಇಟ್ಟುಕೊಂಡು ಜನರನ್ನು ಮರುಳು ಮಾಡುವ ಯತ್ನ ಮಾಡುತ್ತದೆ ಎಂದು ಆರೋಪಿಸಿದರು.

ಗೆರಿಲ್ಲಾ ತಂತ್ರ ಬಳಸಿ ಶಬರಿಮಲೆ ಪ್ರವೇಶ: ತೃಪ್ತಿ ದೇಸಾಯಿ ಹೇಳಿಕೆ

ಶಬರಿಮಲೆ ವಿವಾದದ ಬಗ್ಗೆ ಕೇರಳದಲ್ಲಿ ಕಾಂಗ್ರೆಸ್‌ ನಿರ್ಲಿಪ್ತವಾಗಿದೆ ಆದರೆ ಇತ್ತ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರು ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

English summary
Former CM Siddaramaiah said there should be gender equality in all temples. All are equal to god and god should worshiped by all without gender discrimination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X