Breaking: ನಗರದಲ್ಲಿ ಟೋಯಿಂಗ್ ಇರಬೇಕು, ನಿಯಮಗಳು ಬದಲಾಗಬೇಕು: ಪ್ರತಾಪ್ ರೆಡ್ಡಿ
ಬೆಂಗಳೂರು, ಸೆಪ್ಟೆಂಬರ್ 16: ಬೆಂಗಳೂರಿನಲ್ಲಿ ಸಂಚಾರವನ್ನು ನಿಯಂತ್ರಿಸುವುದು ಬಹು ಕಷ್ಟದ ಕೆಲಸ. ಸಂಚಾರವನ್ನು ನಿಯಂತ್ರಿಸುವ ಜೊತೆಗೆ ಕೆಲವರು ನೋ ಪಾರ್ಕಿಂಗ್ ಏರಿಯಾದಲ್ಲಿ ಸ್ಥಳಗಳಲ್ಲಿ ತಮ್ಮ ವಾಹನವನ್ನು ನಿಲ್ಲಿಸಿ ಹೋಗಿರುತ್ತಾರೆ. ಇದರಿಂದ ಸಂಚಾರ ವ್ಯವಸ್ಥೆಗೆ ಮತ್ತಷ್ಟು ತೊಂದರೆಯಾಗುತ್ತದೆ. ಇದಕ್ಕಾಗಿ ನಗರ ಪೊಲೀಸ್ ಆಯುಕ್ತರು ನಗರದಲ್ಲಿ ಟೋಯಿಂಗ್ ಅವಶ್ಯಕತೆಯಿದೆ ಆದರೆ ನಿಯಯಗಳು ಪಾಲಿಸಬೇಕಿದೆ ಎಂದಿದ್ದಾರೆ.
ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದೇನು?
ಹೈಕೋರ್ಟ್ ಟೋಯಿಂಗ್ ಬಗ್ಗೆ ಪರಿಶೀಲನೆ ಕಾಲಾವಕಾಶ ನೀಡಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಟೋಯಿಂಗ್ ಕುರಿತು ಪ್ರತಿಕ್ರಿಯಿಸಿದ್ದಾರೆ. "ಬೆಂಗಳೂರಿನಂಥ ನಗರದಲ್ಲಿ ಟೋಯಿಂಗ್ ಅವಶ್ಯಕತೆ ಇದೆ. ರಸ್ತೆ ಸಂಚಾರಕ್ಕೆ ಅಡ್ಡಲಾಗಿ ನಿಲ್ಲಿಸುವ ವಾಹನಗಳನ್ನ ಟೋ ಮಾಡುವ ಅವಶ್ಯಕತೆ ಇದೆ. ಆದರೆ ಈ ನಿಯಮದಲ್ಲಿ ಕೆಲವು ಲೋಪದೋಷಗಳು ಹಾಗೂ ದೂರುಗಳು ಕೂಡ ಕೇಳಿ ಬಂದಿದೆ. ಸದ್ಯ ಟೋಯಿಂಗ್‌ನ ಯಾವ ರೀತಿಯಲ್ಲಿ ಯಾವ ನಿಯಮಗಳ ಅಡಿಯಲ್ಲಿ ಮಾಡಬೇಕು ಅನ್ನೋದನ್ನು ಇಲಾಖೆ ನಿರ್ಧಾರ ಮಾಡುತ್ತದೆ. ಪೊಲೀಸ್ ಇಲಾಖೆಗೆ ಯಾವುದೇ ರೀತಿಯಾಗಿ ದೂರು ಬರದೆ ಇರುವ ರೀತಿಯಲ್ಲಿ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ" ಎಂದು ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ಹೈಕೋರ್ಟ್ ಏನು ಹೇಳಿತ್ತು?
ನಗರದಲ್ಲಿ ವಾಹನ ಟೋಯಿಂಗ್ ಕಾರ್ಯಚರಣೆಯನ್ನು ಮುಂದುವರೆಸಲು ಅನುಮತಿ ಕೋರಿ ಕರ್ನಾಟಕ ಟೊಯಿಂಗ್ ವಾಹನ ಮಾಲೀಕರು ಮತ್ತು ಕಾರ್ಮಿಕ ಕ್ಷೇಮಾಭಿವೃದ್ದಿ ಸಂಘ ಸಲ್ಲಿಸಿರುವ ಮನವಿ ಪತ್ರವನ್ನು ಆರು ವಾರಗಳಲ್ಲಿ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನವನ್ನು ನೀಡಿದೆ. ಅದರಂತೆ ಮನವಿಯನ್ನು ಸರ್ಕಾರ ಪರಿಗಣಿಸಿದೆ. ಆದಲ್ಲಿ ಟೋಯಿಂಗ್ ಮತ್ತೆ ಪ್ರಾರಬವಾಗಲಿದೆ. ಟೋಯಿಂಗ್ ಕಾರ್ಯಾಚರಣೆಯನ್ನು ಮುಂದುವರೆಸಲು ಅನುಮತಿಯನ್ನು ಕೋರಿ ಸಲ್ಲಿಸಿರುವ ಮನವಿ ಪತ್ರವನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಸಂಘ ಸಲ್ಲಿಸಿದ್ದ ತಕರಾರು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕ ಸದಸ್ಯ ಪೀಠ ಈ ಸೂಚನೆಯನ್ನು ನೀಡಿತ್ತು.

ನಗರ ಪೊಲೀಸರಿಂದ ಟೋಯಿಂಗ್ ನಿಯಮ
ಈಗಾಗಲೇ ಟೋಯಿಂಗ್‌ಗಾಗಿ ಹಲವು ನಿಯಮಗಳನ್ನು ಜಾರಿ ಮಾಡಿರು ನಗರ ಸಂಚಾರಿ ಪೊಲೀಸರು ಮತ್ತಷ್ಟು ಕಠಿಣ ನಿಯಮ ಜಾರಿ ಮಾಡಲು ಮುಂದಾಗಿದೆ. ಟೋಯಿಂಗ್ ಮಾಡುವಾಗ ಗೈಡ್ ಲೈನ್‌ಗಳನ್ನು ಪಾಲಿಸಲು ಕಟ್ಟು ನಿಟ್ಟಿನ ಆಜ್ಞೆಯನ್ನು ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಆರು ವಾರಗಳಲ್ಲಿ ಮತ್ತೆ ಟೋಯಿಂಗ್ ವಾಹನ ರೋಡಿಗಿಳಿಯುವುದು ಬಹುತೇಕ ಖಚಿತವಾಗುತ್ತಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು








Click it and Unblock the Notifications