ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ್ರೆ ಲೈಸೆನ್ಸ್ ರದ್ದು
ಬೆಂಗಳೂರು, ಡಿ. 12 : ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ನಿಲ್ಲಿಸಿದರೆ ಇನ್ನು ಮುಂದೆ ನಿಮ್ಮ ಚಾಲನಾ ಪರವಾನಿಗೆ ರದ್ದುಗೊಳ್ಳುತ್ತದೆ. ಹೌದು, ಬೆಂಗಳೂರು ನಗರದಲ್ಲಿ ಪುಟ್‌ಪಾತ್ ಮತ್ತು ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನ ನಿಲ್ಲಿಸುವುದನ್ನು ತಡೆಯಲು ಸಂಚಾರಿ ಪೊಲೀಸರು ಇಂತಹ ಕಠಿಣ ಕ್ರಮ ಜಾರಿಗೆ ತರಲು ಮುಂದಾಗಿದ್ದಾರೆ.
ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಕಳೆದ ಒಂದು ವಾರದಿಂದ ಈ ಕುರಿತು ಚರ್ಚೆಗಳು ನಡೆಯುತ್ತಿವೆ. ಸಾರಿಗೆ ಇಲಾಖೆಗೆ ಈ ಕುರಿತು ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ. ಫುಟ್‌ಪಾತ್ ಮತ್ತು ನೋ ಪಾರ್ಕಿಂಗ್‌ಗಳಲ್ಲಿ ವಾಹನ ನಿಲುಗಡೆ ಮಾಡಬೇಡಿ ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ. [ಬೆಂಗಳೂರಿನಲ್ಲಿ ಹೈಬೀಮ್ ಲೈಟ್ ಬಳಕೆ ನಿಷೇಧ]

ನಗರದಲ್ಲಿ ವಾಹನ ಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅದರ ಅನ್ವಯ ಈ ಕ್ರಮವನ್ನು ಕೈಗೊಂಡಿದ್ದು, ಸಂಚಾರ ಪೊಲೀಸರು ಹಲವಾರು ಸುತ್ತಿನ ಎಚ್ಚರಿಕೆಯ ನಂತರ ಈಗ ಪರವಾನಿಗೆ ರದ್ದುಗೊಳಿಸುವ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.[ಸಂಚಾರಿ ಪೊಲೀಸರಿಂದ ಬೈಕ್ ಹರಾಜು]
ಇಲ್ಲಿಯ ತನಕ ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದರೆ, ಸ್ಥಳದಲ್ಲೇ 100ರೂ ದಂಡ ವಿಧಿಸಿ ಕಳುಹಿಸುತ್ತಿದ್ದರು. ಆದರೆ, ಮತ್ತೆ ಮತ್ತೆ ನಿಯಮ ಉಲ್ಲಂಘನೆಯಾಗುತ್ತಿರುವುದ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪರವಾನಿಗೆ ರದ್ದುಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಸದ್ಯದಲ್ಲೇ ಇದು ಜಾರಿಗೆ ಬರುವ ಸಾಧ್ಯತೆ ಇದೆ.












Click it and Unblock the Notifications