ಇದು ಯೂ ಟರ್ನ್‌ ಸರ್ಕಾರ: ಸರ್ಕಾರದ ಲೆಕ್ಕ ಕೇಳಿದ ಕಾಂಗ್ರೆಸ್‌

ಬೆಂಗಳೂರು, ಮೇ 12: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ''ಮೇ 24ರಂದು ಎಲ್ಲ ಗ್ರಾಮ ಪಂಚಾಯ್ತಿಗಳ ಅವಧಿ ಮುಕ್ತಾಯವಾಗುತ್ತಿದೆ. ಒಂದು ತಿಂಗಳ ಮೊದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಬೇಕಿತ್ತು. ವಿಶೇಷ ಸಂದರ್ಭದಲ್ಲಿ ಆರು ತಿಂಗಳ ಅವಧಿ ವಿಸ್ತರಿಸಲು ಅವಕಾಶವಿದೆ. ಸರ್ಕಾರ ತನಗಿರುವ ಅಧಿಕಾರ ದುರುಪಯೋಗ ಪಡಿಸಿಕೊಂಡು, ತನ್ನ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡಲು ಹೊರಟಿದೆ.'' ಎಂದು ಹೇಳಿದ್ದಾರೆ.

ಕಾಂಗ್ರೆಸ್ ಇದನ್ನು ವಿರೋಧಿಸುತ್ತದೆ, ಹಾಲಿ ಇರುವ ಗ್ರಾಮ ಪಂಚಾಯ್ತಿ ಸದಸ್ಯರನ್ನು ಆರು ತಿಂಗಳ ಅವಧಿಗೆ ವಿಸ್ತರಿಸಬೇಕು. ಏಕೆಂದರೆ, ಅವರು ಪಕ್ಷಾತೀತವಾಗಿ ಗೆದ್ದಿದ್ದಾರೆ ಎಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.

This Is U Turn Government Says DK Shivakumar

ಕೊರೊನಾ ವಿಚಾರದಲ್ಲಿ ಸಂಪೂರ್ಣವಾಗಿ ಎಲ್ಲ ವ್ಯವಸ್ಥೆಯನ್ನು ಸರಿಯಾಗಿ ಸಿದ್ಧಪಡಿಸಿಲ್ಲ. ಇದು ಯೂ ಟರ್ನ್‌ ಸರ್ಕಾರ. ವಲಸೆ ಕಾರ್ಮಿಕರ ವಿಚಾರದಲ್ಲಿ, ಐಟಿ ಕಂಪನಿ ವಿಚಾರದಲ್ಲಿ ಸರ್ಕಾರ ಗೊಂದಲದಲ್ಲಿಯೇ ಇದೆ ಎಂದು ಡಿಕೆ ಶಿವಕುಮಾರ್‌ ಅಸಮಾಧಾನ ಹೊರ ಹಾಕಿದ್ದಾರೆ.

ಸರ್ಕಾರ ಹಣಕಾಸಿನ ಲೆಕ್ಕಾಚಾರದ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡಬೇಕು. ಕಾರ್ಮಿಕರ ಬದಲು, ಮತದಾರರಿಗೆ ಮಾತ್ರ ಫುಡ್‌ ಕಿಟ್ ನೀಡಿದರು. ಅದರಲ್ಲಿ ಪಕ್ಷದ ಚಿಹ್ನೆ ಇತ್ತು. ಅದಕ್ಕೆ ಐದು ಲಕ್ಷ ಜನ ರಾಜ್ಯ ಬಿಟ್ಟು ಹೋಗಲು ನಿರ್ಧಾರ ಮಾಡಿದ್ದಾರೆ. ಎಂದು ಆರೋಪ ಮಾಡಿದ್ದಾರೆ.

ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಯ ಬದಲಾವಣೆಯನ್ನು ಕಾಂಗ್ರೆಸ್ ವಿರೋಧ ಮಾಡುತ್ತೇವೆ. ಇದು ಎಂಎನ್‌ಸಿಗಳಿಗೆ ಸಹಾಯ ಮಾಡಲು ಮಾಡಿದ್ದೀರಿ. ರೈತರನ್ನು ಸಮಾಧಿ ಮಾಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+