ಕೆಆರ್‌ಎಸ್‌ , ಕಬಿನಿ ಜಲಾಶಯಗಳಿಂದ 3 ತಿಂಗಳಿಗಾಗುವಷ್ಟು ನೀರು ಲಭ್ಯ

ಬೆಂಗಳೂರು, ಮಾರ್ಚ್ 28: ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಲ್ಲಿ ಮುಂದಿನ ಮೂರು ತಿಂಗಳಿಗಾಗುವಷ್ಟು ನೀರು ಲಭ್ಯವಿದ್ದು, ಈ ಬಾರಿಯ ಬೇಸಿಗೆಯಲ್ಲಿ ಬೆಂಗಳೂರಿಗೆ ನೀರಿನ ಸಮಸ್ಯೆಯಾಗುವುದಿಲ್ಲ ಎಂದು ಜಲಮಂಡಳಿ ಪ್ರಧಾನ ಎಂಜಿನಿಯರ್ ಕೆಂಪರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿಗೆ ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಎರಡೂ ಜಲಾಶಯಗಳಲ್ಲಿ ಈಗ ಒಟ್ಟು 11 ಟಿಎಂಸಿ ನೀರು ಲಭ್ಯವಿದ್ದು, ಪ್ರತಿನಿತ್ಯ 1,400 ಎಂಎಲ್ಡಿ ನೀರನ್ನು ಪಂಪ್ ಮಾಡುವುದಕ್ಕೆ ಅವಕಾಶವಿದೆ.ಜೂನ್‌ವರೆಗೆ ಆ ನೀರು ಪೂರೈಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಪ್ರತಿದಿನ 1,350 ಎಂಎಲ್ ಡಿ ನೀರು ಪಂಪ್ ಮಾಡಲಾಗುತ್ತಿದ್ದು, ಯುಗಾದಿಯಿಂದ 10-15ಎಂಎಲ್ ಡಿ ಹೆಚ್ಚು ನೀರು ಪಂಪ್ ಮಾಡಲಾಗುತ್ತಿದದೆ. ಇನ್ನುಳಿದಂತೆ ಕೊಳವೆಬಾವಿಗಳಿಗೆ ಹೆಚ್ಚುವರಿ ಪೈಪ್ ಹಾಕುವುದು, ಮೋಟಾರು ರಿಪೇರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

This summer Bengaluru may chill with sufficient of water

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

110 ಹಳ್ಳಿಗಳಲ್ಲಿ 60 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಕೆ ಕಾಮಗಾರಿ ಚಾಲ್ತಿಯಲ್ಲಿದೆ. ಈಗಾಗಲೇ 17 ಹಳ್ಳಿಗಳಲ್ಲಿ ನೀರು ಪೂರೈಕೆಗೆ ಪೈಪ್ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದೆ. ಹೀಗಾಗಿ ಆ ಹಳ್ಳಿಯವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ನೀರಿನ ಸಂಪರ್ಕ ಪಡೆದುಕೊಳ್ಳಬಹುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+